Vijayapatha – ವಿಜಯಪಥ
Friday, November 1, 2024
Breaking Newsಕೃಷಿನಮ್ಮಜಿಲ್ಲೆ

ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಅಬ್ಬರ: ಗುಡ್ಡಗಾಡು ನಿವಾಸಿಗಳಿಗೆ ಮಡಿಕೇರಿ ನಗರಸಭೆ ಎಚ್ಚರಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮಡಿಕೇರಿ: ಮೇ 14 ಮತ್ತು 15ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಹೀಗಾಗಿ ಗುಡ್ಡಗಾಡು ಪ್ರದೇಶದಲ್ಲಿ ವಾಸಿಸುತ್ತಿರುವ ಜನ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮಡಿಕೇರಿ ನಗರಸಭೆ ಮನವಿ ಮಾಡಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಎದ್ದಿರುವ ಹಿನ್ನೆಲೆ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಜಿಲ್ಲಾಡಳಿತಕ್ಕೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ನಗರಸಭೆ ನಗರದ ಇಂದಿರಾನಗರ, ಚಾಮುಂಡೇಶ್ವರಿ ನಗರ ಹಾಗೂ ಮಂಗಳಾದೇವಿ ನಗರ ಬಡಾವಣೆಗಳ ನಿವಾಸಿಗಳಿಗೆ ನೋಟಿಸ್ ಜಾರಿ ಮಾಡಿದೆ.

ನಗರಸಭೆ ನೋಟಿಸ್ ಜಾರಿ ಮಾಡಿರುವುದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದ್ದು, ಅವರು ಮುಂಜಾಗ್ರತೆ ವಹಿಸಲು ಅಣಿಯಾಗುತ್ತಿದ್ದಾರೆ. ಈಗಾಗಲೇ ಕಳೆದ 2018ರಲ್ಲಿ ಕೊಡಗಿನಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ನಲುಗಿ ಹೋಗಿರುವ ಜನ ಸಣ್ಣ ಮಳೆ ಬಂದರು ಭಯದಲ್ಲೇ ಕಾಲಕಳಿಯುವಂತಾಗಿದೆ.

ಇದೀಗ ಕೊರೊನಾ ಹಾಗೂ ಲಾಕ್‍ಡೌನ್ ನಡುವೆ ಮನೆ ಖಾಲಿ ಮಾಡಿ ಸುರಕ್ಷಿತ ಸ್ಥಳಕ್ಕೆ ತೆರಳಿ ಎಂದರೆ ಎಲ್ಲಿಗೆ ತೆರಳುವುದೆಂದು ತೋಚದೆ ಕಂಗಾಲಾಗಿದ್ದಾರೆ. ಕಳೆದ ಬಾರಿಯ ಜಲಪ್ರಳಯಕ್ಕೆ ಕೊಡಗು ಜಿಲ್ಲೆ ಅಕ್ಷರಶಃ ನಲುಗಿ ಹೋಗಿತ್ತು. ಮಡಿಕೇರಿ ನಗರದ ಈ ಮೂರು ವಾರ್ಡ್‍ಗಳು ಹೆಚ್ಚು ಅನಾಹುತಕ್ಕೆ ತುತ್ತಾಗಿದ್ದವು. ಹೀಗಾಗಿ ಮಳೆಯಗುತ್ತದೆ ಎಂಬ ಸೂಚನೆ ಬಂದರೂ ಜನ ಭಯಪಡುವಂತಾಗಿದೆ.

ಈ ಮೂರು ನಗರಗಳಲ್ಲಿ ಬೆಟ್ಟ, ಗುಡ್ಡದ ನಡುವೆಯೇ ನೂರಾರು ಮನೆಗಳಿವೆ. ಅಷ್ಟೇ ಅಲ್ಲದೆ ಕೊಡಗು ಜಿಲ್ಲೆಯ ವಿರಾಜಪೇಟೆ ನಗರದ ಅಯ್ಯಪ್ಪಬೆಟ್ಟ, ನೆಹರು ನಗರ, ಅರಸುನಗರ ಹಾಗೂ ಮಲೇತಿರಿಕೆ ಬೆಟ್ಟದ ನಿವಾಸಿಗಳಿಗೆ ಪಟ್ಟಣ ಪಂಚಾಯಿತಿಯಿಂದಲೂ ನೋಟಿಸ್ ನೀಡಲಾಗಿದೆ.

ಕಳೆದ ಮೂರು ವರ್ಷದ ಮಳೆಗಾಲದಲ್ಲಿ ಅರ್ಧ ಬಿದ್ದು ಅಪಾಯದಂಚಿನಲ್ಲಿರುವ ಮನೆಗಳಲ್ಲೇ ಇನ್ನೂ ಜನರು ಬದುಕು ಕಟ್ಟಿಕೊಂಡಿದ್ದಾರೆ. ಇದೀಗ ನಗರಸಭೆಯ ನೋಟಿಸ್ ಅವರಿಗೆ ಮತ್ತೊಂದು ಶಾಕ್ ನೀಡಿದ್ದು, ಮುಂದೇನು ಮಾಡಬೇಕು. ಎಲ್ಲಿಗೆ ಹೋಗಬೇಕು ಎಂಬ ಚಿಂತೆಯಲ್ಲಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ