ನಮ್ಮರಾಜ್ಯರಾಜಕೀಯ

ಕನ್ನಡಿಗರೇನು ತಬ್ಬಲಿ ಮಕ್ಕಳೇ? ಕೇಂದ್ರ ತಾರತಮ್ಯ ಧೋರಣೇ ವಿರುದ್ಧ ಸಿಡಿದೆದ್ದ ಕುಮಾರಣ್ಣ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಇದುವರೆಗೂ ಬೆಡ್, ವೆಂಟಿಲೇಟರ್ ಅಂತ ರಾಜ್ಯದ ಜನ ಪರದಾಡುತ್ತಲ್ಲೇ ಇದ್ದಾರೆ, ಆಕ್ಸಿಜನ್ ಗಾಗಿ ನರಳಾಡುತ್ತಿದ್ದಾರೆ. ಆದರೂ ಸರ್ಕಾರ ಇತ್ತ ಗಮನಹರಿಸದಿರುವುದು ದುರಂತ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ.

ಕರ್ನಾಟಕಕ್ಕೆ ನಿತ್ಯ 1200 ಮೆಟ್ರಿಕ್‌ ಟನ್‌(MT) ಆಮ್ಲಜನಕ ಪೂರೈಸಬೇಕು ಎಂಬ ಕೋರ್ಟ್‌ ಆದೇಶದ ನಂತರವೂ ಕೇಂದ್ರ ರಾಜ್ಯಕ್ಕೆ ಪೂರೈಸಿದ್ದು 120MT ಮಾತ್ರ. ಅತ್ತ, ನಮಗಿಂತ ಕಡಿಮೆ ಪ್ರಕರಣಗಳಿರುವ ಉತ್ತರ ಪ್ರದೇಶಕ್ಕೆ 1680MT ಪೂರೈಸಿರುವ ಕೇಂದ್ರ ಸರ್ಕಾರ ತಾರತಮ್ಯದಲ್ಲಿ ಪಾರಮ್ಯ ಮೆರೆದಿದೆ. ಈ ಒಕ್ಕೂಟದಲ್ಲಿ ಕನ್ನಡಿಗರೇನು ತಬ್ಬಲಿ ಮಕ್ಕಳೇ ಎಂದು ಸರಣಿ ಟ್ವೀಟ್‌ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿರುವುದು ಸರ್ಕಾರವೇ ನೀಡಿರುವ ಅಂಕಿ ಅಂಶಗಳಿಂದ ಬಯಲಾಗಿದೆ. ಕರ್ನಾಟಕ, ಕನ್ನಡಿಗರ ವಿಚಾರದಲ್ಲಿ ಕೇಂದ್ರಕ್ಕೆ ಈ ಮಟ್ಟಿಗಿನ ತಾತ್ಸಾರ ಏಕೆ? ಇಲ್ಲಿ ಬಿಜೆಪಿಯದ್ದೇ ಸರ್ಕಾರ ಇರುವುದಕ್ಕೋ? ಅತಿ ಹೆಚ್ಚು ಸಂಸದರು ಆಯ್ಕೆಯಾಗಿರುವುದಕ್ಕೋ? ಅಥವಾ ಯಡಿಯೂರಪ್ಪರನ್ನು ಖಳನಾಯಕರಾಗಿಸಲೋ?

ಕರ್ನಾಟಕದ ವಿಚಾರದಲ್ಲಿ ಹೇಳತೀರದ ತಾರತಮ್ಯ ಮಾಡುತ್ತಿರುವ ಕೇಂದ್ರ ಸರ್ಕಾರ ಒಂದು ವಿಷಯ ಸ್ಪಷ್ಟವಾಗಿ ಅರಿಯಬೇಕು. ಇದು ಒಕ್ಕೂಟ ವ್ಯವಸ್ಥೆ. ಒಕ್ಕೂಟ ಸರ್ಕಾರ ನಡೆಸುತ್ತಿರುವವರು ಎಲ್ಲ ರಾಜ್ಯಗಳಿಗೂ ಸಮಾನ ಆದ್ಯತೆ ನೀಡಬೇಕು. ಅನಿವಾರ್ಯದಲ್ಲಿರುವವರ ಅಗತ್ಯಗಳನ್ನು ಮೊದಲು ಪೂರೈಸಬೇಕು. ಅದನ್ನು ಬಿಟ್ಟು ತಾತ್ಸಾರ ಮಾಡಿದರೆ ಜನ ದಂಗೆ ಎದ್ದಾರು ಎಂದು ಎಚ್ಚರಿಸಿದ್ದಾರೆ.

ಲಸಿಕೆ ವಿಚಾರದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರೇ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ‘3ಕೋಟಿ ಲಸಿಕೆಗೆ ಕೇಳಿದ್ದೇವೆ. 7 ಲಕ್ಷ ಡೋಸ್‌ ಸಿಕ್ಕಿದೆ. ಎರಡನೇ ಡೋಸ್‌ ಪಡೆಯುವವರಿಗೆ ಮಾತ್ರ ಆದ್ಯತೆ. ಮೊದಲ ಡೋಸ್‌ ಪಡೆಯುವವರು ಕಾಯಬೇಕು,’ ಎಂದಿದ್ದಾರೆ. ಲಸಿಕೆಯ ವಿಚಾರದಲ್ಲಿಯೂ ಕೇಂದ್ರ ತಾರತಮ್ಯ ಮಾಡುತ್ತಿರುವುದು ಇದರಿಂದ ಸ್ಪಷ್ಟವಾಗಿದೆ.

ಬಿಜೆಪಿಯ ಪ್ರತಿಯೊಂದು ಧೋರಣೆಯನ್ನೂ ಬೆಂಬಲಿಸುವವರು, ಸಮರ್ಥಿಸಿಕೊಳ್ಳುತ್ತಿರುವವರು, ವಿರೋಧ ಪಕ್ಷಗಳ ನ್ಯಾಯಯುತ ಸಲಹೆ, ಬೇಡಿಕೆಗಳನ್ನು ಅಡಿಗಡಿಗೂ ಟೀಕಿಸುವವರು ಕರ್ನಾಟಕಕ್ಕೆ, ಕನ್ನಡಿಗರಿಗೆ ಆಗುತ್ತಿರುವ ಈ ಅನ್ಯಾಯವನ್ನು ಸಮರ್ಥಿಸಿಕೊಳ್ಳುವರೇ? ಆಮ್ಲಜನಕವಿಲ್ಲದೇ ಪ್ರಾಣ ಕಳೆದುಕೊಳ್ಳುತ್ತಿರುವ ಕನ್ನಡಿಗರ ಸಾವಿನ ಹೊಣೆಯನ್ನು ಹೊರುವರೇ?

ನ್ಯಾಯಾಲಯ ಹೇಳಿದ್ದ 1200MT ಬದಲಿಗೆ 120MT ಆಮ್ಲಜನಕ ಪೂರೈಸಿದ್ದಕ್ಕೆ ಮುಖ್ಯಮಂತ್ರಿ, ಕೇಂದ್ರದ ಸಚಿವರು, ಬಿಜೆಪಿ ಸಂಸದರು ಮುಗಿಬಿದ್ದು ಕೇಂದ್ರ, ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ. ನಮಗೆ ಸಿಗಬೇಕಾಗಿದ್ದರಲ್ಲಿ ಮುರಿದುಕೊಂಡು ಕೊಟ್ಟದ್ದಕ್ಕೆ ಧನ್ಯವಾದ ಏಕೆ? ಬಿಜೆಪಿ ನಾಯಕರು, ಬಿಜೆಪಿ ಬೆಂಬಲಿಗರು ಈ ಗುಲಾಮಗಿರಿ ಬಿಡಬೇಕು.

ಕೇಂದ್ರ ಸರ್ಕಾರ ತಾರತಮ್ಯ ಬಿಟ್ಟು ಕರ್ನಾಟಕದ ಅಗತ್ಯವನ್ನು ಪೂರೈಸಬೇಕು. ತಾನು ಸರ್ವಶಕ್ತ ಆಡಳಿತ ನಡೆಸುತ್ತಿರುವ ದಿಮಾಕನ್ನು ಕೇಂದ್ರ ಬಿಡಬೇಕು. ಒಕ್ಕೂಟ ಸರ್ಕಾರ ನಡೆಸುತ್ತಿರುವ ವಾಸ್ತವ ಅರಿಯಬೇಕು. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪಕ್ಷದ ತಪ್ಪನ್ನು ಇಲ್ಲಿ ಸಮರ್ಥಿಸಿಕೊಳ್ಳುತ್ತಿರುವವರು ಮೊದಲು ತಾವು ಕನ್ನಡಿಗರು ಎಂಬುದು ಅರಿಯಬೇಕು.

ಆಮ್ಲಜನಕ ಕರ್ನಾಟಕದ ಈ ಹೊತ್ತಿನ ಅಗತ್ಯ. ಈ ವಿಚಾರದಲ್ಲಿ ಆಗುತ್ತಿರುವ ತಾರತಮ್ಯವನ್ನೇ ಕನ್ನಡಿಗರಾಗಿ ನಾವು ಪ್ರಶ್ನೆ ಮಾಡದೇ ಹೋದರೆ ಇನ್ನ್ಯಾವ ವಿಚಾರದಲ್ಲಿ ನಾವು ನ್ಯಾಯ ಪಡೆಯಲು ಸಾಧ್ಯ. ಪರಿಹಾರ, ಅನುದಾನಗಳಲ್ಲಿ ಕರ್ನಾಟಕಕ್ಕೆ ಈಗ ಆಗಿರುವ ಅನ್ಯಾಯ ಸಹಿಸಿದ್ದಾಗಿದೆ. ಜೀವದ ವಿಚಾರದಲ್ಲಿ ನಡೆಯುತ್ತಿರುವ ಈ ತಾರತಮ್ಯ ಸಹಿಸುವುದು ಬೇಡ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು