NEWSನಮ್ಮಜಿಲ್ಲೆ

ಚಾಮರಾಜನಗರದ ಆಕ್ಸಿಜನ್ ದುರಂತ: ಮೈಸೂರು ಡಿಸಿ ರೋಹಿಣಿ ಸಿಂಧೂರಿಗೆ ಕ್ಲೀನ್‌ಚಿಟ್

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಚಾಮರಾಜನಗರ: ಜಿಲ್ಲೆಯಲ್ಲಿ ಮೇ 2ರ ತಡರಾತ್ರಿ ಸಂಭವಿಸಿದ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ.

ಹೌದು! ಅಂದು ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಎ.ಎನ್. ವೇಣುಗೋಪಾಲ ಅವರನ್ನೊಳಗೊಂಡ ಸಮಿತಿಯು ಹೈಕೋರ್ಟ್‍ಗೆ ವರಿದಿ ನೀಡಿದ್ದು, ವರದಿಯಲ್ಲಿ ಮೈಸೂರು ಜಿಲ್ಲಾಧಿಕಾರಿಯವರದ್ದು ಈ ಪ್ರಕರಣದಲ್ಲಿ ಯಾವುದೇ ತಪ್ಪಿಲ್ಲ ಎಂದು ತಿಳಿಸಿದೆ.

ವರದಿಯಲ್ಲಿ ಏನಿದೆ..?
ದುರಂತಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ವಿರುದ್ಧ ಯಾವುದೇ ಸಾಕ್ಷ್ಯಗಳು ಇಲ್ಲ. ಮೈಸೂರು ಜಿಲ್ಲಾಧಿಕಾರಿ ಆಕ್ಸಿಜನ್ ಪೂರೈಕೆಗೆ ತಡೆ ಒಡ್ಡಿದ್ದಾರೆ ಎಂಬ ಬಗ್ಗೆ ಸಾಕ್ಷ್ಯಗಳು ಇಲ್ಲ. ಪ್ರಕರಣಕ್ಕೆ ಚಾಮರಾಜನಗರ ಜಿಲ್ಲಾಧಿಕಾರಿ ಹೊಣೆಯಾಗಿದ್ದು, ಆಕ್ಸಿಜನ್ ವ್ಯವಸ್ಥೆ ಮಾಡಿಕೊಳ್ಳುವಲ್ಲಿ ಜಿಲ್ಲಾಡಳಿತ, ಜಿಲ್ಲಾಸ್ಪತ್ರೆ ವಿಫಲವಾಗಿದೆ.

ಜಿಲ್ಲಾಡಳಿತ, ಜಿಲ್ಲಾಸ್ಪತ್ರೆ ಎಚ್ಚರವಾಗಿದ್ದರೆ ಈ ದುರಂತ ಸಂಭವಿಸುತ್ತಿರಲಿಲ್ಲ. ಆಕ್ಸಿಜನ್ ಪ್ಲ್ಯಾಂಟ್ ಚಾಮರಾಜನಗರದಿಂದ 70 ಕಿಲೋ ಮೀಟರ್ ದೂರದಲ್ಲಿದೆ. ಮೈಸೂರಿನಿಂದ ಆಕ್ಸಿಜನ್ ತುಂಬಿಸಿಕೊಂಡು ಜಿಲ್ಲಾಸ್ಪತ್ರೆಗೆ ಸಾಗಾಟ ಮಾಡಬೇಕಿತ್ತು. ಜಿಲ್ಲಾಸ್ಪತ್ರೆ, ಜಿಲ್ಲಾಡಳಿತ ಮೊದಲೇ ಎಚ್ಚೆತ್ತುಕೊಂಡಿದ್ದರೆ ಈ ದುರಂತ ಆಗುತ್ತಿರಲಿಲ್ಲ ಎಂದು ತಿಳಿಸಿದೆ.

ಅಲ್ಲದೆ ಸೋಂಕಿತರಿಗೆ ಸರಿಯಾದ ಸಮಯಕ್ಕೆ ಆಕ್ಸಿಜನ್ ಸಿಕ್ಕಿರಲಿಲ್ಲ. ಹೀಗಾಗಿ ಸೋಂಕಿತರ ಮೆದುಳು, ದೇಹದ ಇತರ ಭಾಗಗಳಿಗೆ ಹಾನಿಯಾಗಿದೆ. ಆಕ್ಸಿಜನ್ ಕೊರತೆಯಿಂದ ಮೆದುಳು, ದೇಹದ ಇತರ ಭಾಗಗಳಿಗೆ ಹಾನಿಯಾಗಿ ಮೃತಪಟ್ಟಿದ್ದಾರೆ ಎಂದು ಹೈಕೊರ್ಟಿಗೆ ಸಲ್ಲಿಸಿರುವ ವರದಿಯಲ್ಲಿ ತಿಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ರೋಹಿಣಿ ಸಿಂಧೂರಿಗೆ ಕ್ಲೀನ್‍ಚಿಟ್ ದೊರೆತಿದೆ.

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ದುರಂತಕ್ಕೆ ಆಕ್ಸಿಜನ್ ಕೊರತೆ ಕಾರಣವಾಗಿದೆ. ಮೇ 2ರ ರಾತ್ರಿ 11ರಿಂದ ಮೇ 3ರ ಬೆಳಗ್ಗಿನ ಜಾವದವರೆಗೆ ಆಕ್ಸಿಜನ್ ಇರಲಿಲ್ಲ. ಜಿಲ್ಲಾಸ್ಪತ್ರೆಯ ದಾಖಲೆಯ ಪ್ರಕಾರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಇರಲಿಲ್ಲ. ಇತ್ತ ಮೂವರರಷ್ಟೇ ಆಕ್ಸಿಜನ್ ಇಲ್ಲದೇ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದರು. ಆದರೆ 36 ಮಂದಿ ಸಾವಿಗೂ ಆಕ್ಸಿಜನ್ ಕೊರತೆ ಕಾರಣ ಎನ್ನಲಾಗಿದೆ.

ಮೈಸೂರು ಡಿಸಿ ವಿರುದ್ಧ ಚಾಮರಾಜನಗರ ಡಿಸಿ ರವಿ ಆರೋಪ ಮಾಡಿದ್ದರು. ಆದರೆ ತನಿಖೆ ವೇಳೆ ಮೈಸೂರು ಡಿಸಿ ವಿರುದ್ಧದ ಆರೋಪಕ್ಕೆ ಸಾಕ್ಷ್ಯಗಳೇ ಇಲ್ಲ. ಈ ಹಿನ್ನೆಲೆಯಲ್ಲಿ ಚಾಮರಾಜನಗರ ಡಿಸಿ ರವಿ ವಿರುದ್ಧ ಏನ್ ಕ್ರಮಕೈಗೊಳ್ಳುತ್ತೆ ಸರ್ಕಾರ..?, ಚಾಮರಾಜನಗರ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಏನ್ ಉತ್ತರ ಕೊಡ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Leave a Reply

error: Content is protected !!
LATEST
KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ