NEWSನಮ್ಮರಾಜ್ಯ

ಕೈಲಾಗದಿದ್ದರೆ ಅಧಿಕಾರ ಬಿಟ್ಟು ತೊಲಗಿ: ಬಿಜೆಪಿ ವಿರುದ್ಧ ಮಾಜಿ ಸಿಎಂ ಎಚ್‌ಡಿಕೆ ಆಕ್ರೋಶ

ಕೊರೊನಾ ಅಬ್ಬರಕ್ಕೆ ಜನ ತತ್ತರ l ಆದರೂ ಮುಂದುವರಿದ ಸರ್ಕಾರದ ನಿರ್ಲಕ್ಷ್ಯ l ಕೋವಿಡ್‌ ನಿಭಾಯಿಸುವಲ್ಲಿ ಪ್ರಾದೇಶಿಕ ಪಕ್ಷಗಳ ಸರ್ಕಾರವಿರುವ ರಾಜ್ಯಗಳು ಯಶಸ್ವಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ನಾವೇನ್‌ ನೋಟ್‌ ಪ್ರಿಂಟ್‌ ಮಾಡ್ತೀವಾ? ಜಡ್ಜ್‌ಗಳು ಸರ್ವಜ್ಞರಲ್ಲ. ಕೊರೊನಾ ವೈರಸ್‌ಗಾಗಿ ಚೀನಾವನ್ನು ದೂಷಿಸಬೇಕು. ನೇಣು ಹಾಕಿಕೊಳ್ಳಲು ಆಗುತ್ತಾ? ಕೋವಿಡ್‌ ಪ್ಯಾಕೇಜ್‌ ಕೊಡಲು ಆಗಲ್ಲ. ದೇಶದ ದುಸ್ಥಿತಿಗೆ ವಿರೋಧ ಪಕ್ಷಗಳು ಕಾರಣ ಎಂದು ನೀಡುವ ಹೇಳಿಕೆ ಅಸಮರ್ಥತೆಯನ್ನು ತೋರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಧರೆಗೆ ಸ್ವರ್ಗ ಇಳಿಸುವ ಭರವಸೆಯೊಂದಿಗೆ ಅಧಿಕಾರ ಹಿಡಿದ ಬಿಜೆಪಿಯ ಅಸಮರ್ಥರ ಕೈಲಾಗದ ಮಾತುಗಳನ್ನು ಆಡುತ್ತಿದ್ದು, ಅವರ ಆಡಳಿತ ವೈಕರಿಗೆ ಹಿಡಿದ ಕನ್ನಡಿಯಾಗಿದೆ ಎಂದು ಸರಣಿ ಟ್ವೀಟ್‌ ಮೂಲಕ ಅಬ್ಬರಿಸಿದ್ದಾರೆ.

‘ಅವರು ಅಷ್ಟು ವರ್ಷ ಅಧಿಕಾರ ಮಾಡಿದರು, ಇವರು ಅಷ್ಟು ವರ್ಷ ತಿಂದರು,’ ಎಂದು ದೂಷಿಸಿಕೊಂಡೇ ಅಧಿಕಾರಕ್ಕೆ ಬಂದ ಬಿಜೆಪಿ ಈಗ ಹೊಣೆಗೇಡಿತನ ಪ್ರದರ್ಶಿಸುತ್ತಿದೆ. ಪ್ರತಿಯೊಂದಕ್ಕೂ ವಿರೋಧ ಪಕ್ಷಗಳನ್ನು ದೂಷಿಸುವ ಬಿಜೆಪಿಗೆ ಅಧಿಕಾರವೇಕೆ? ‘ಕೊಟ್ಟ ಕುದುರೆಯನ್ನು ಏರಲಾಗದವನು ಧೀರನೂ ಅಲ್ಲ, ಶೂರನೂ ಅಲ್ಲ,’ ಎಂಬ ಮಾತು ಬಿಜೆಪಿಗೆ ಹೊಂದುವಂಥದ್ದು ಎಂದು ವ್ಯಂಗ್ಯವಾಗಿ ತರಾಟೆಗೆ ತೆದುಕೊಂಡಿದ್ದಾರೆ.

ಕೋವಿಡ್‌ ನಿಭಾಯಿಸುವಲ್ಲಿ ಕೇಂದ್ರ, ರಾಜ್ಯಗಳೆರಡೂ ವಿಫಲವಾಗಿವೆ. ಅತಿ ಹೆಚ್ಚು ಕೋವಿಡ್‌ ಪ್ರಕರಣಗಳಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಮುಂದಿದೆ. ಕೇಂದ್ರ ಕೋವಿಡ್‌ ಅನ್ನು ಅಸಮರ್ಪಕವಾಗಿ ನಿರ್ವಹಿಸಿದ್ದೇ ಇದಕ್ಕೆ ಕಾರಣ. ಅತಿ ಹೆಚ್ಚು ಸೋಂಕು ಪ್ರಕರಣಗಳಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಮುಂದಿದೆ. ಇದು ರಾಜ್ಯ ಸರ್ಕಾರದ ಅಸಮರ್ಥತೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಅಸಮರ್ಥತೆ ಮುಚ್ಚಿಕೊಳ್ಳಲು ಬಿಜೆಪಿ ನಾಯಕರು ಈಗ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಕೈಲಾಗದ ಮಾತಾಡುತ್ತಿದ್ದಾರೆ. ವಿರೋಧ ಪಕ್ಷಗಳನ್ನು ಟೀಕಿಸುತ್ತಿದ್ದಾರೆ. ಭೂ ಕೈಲಾಸ ಸೃಷ್ಟಿಸುವ ಬಿಜೆಪಿ ಮಾತು ನಂಬಿ ಜನ ಅಧಿಕಾರ ನೀಡಿದ್ದಾರೆ. ಜನರ ಆಶಯಕ್ಕೆ ತಕ್ಕಂತೆ ಬಿಜೆಪಿ ನಡೆದುಕೊಳ್ಳಬೇಕು. ಕೈಲಾಗದಿದ್ದರೆ ಅಧಿಕಾರ ಬಿಟ್ಟು ತೊಲಗಬೇಕು ಎಂದು ಆಗ್ರಹಿಸಿದ್ದಾರೆ.

ಪರಸ್ಪರ ಗೂಬೆ ಕೂರಿಸುವುದು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಖಯಾಲಿ. ಇದನ್ನು ಅರಿತೇ ಜನ ಪ್ರಾದೇಶಿಕ ಪಕ್ಷಗಳಿಗೆ ಮಣೆ ಹಾಕುತ್ತಿದ್ದಾರೆ. ಕೋವಿಡ್‌ ನಿಭಾಯಿಸುವಲ್ಲಿ ಪ್ರಾದೇಶಿಕ ಪಕ್ಷಗಳ ಸರ್ಕಾರವಿರುವ ರಾಜ್ಯಗಳು ಯಶಸ್ವಿಯಾಗಿವೆ. ಜನರಿಗೆ ಸವಲತ್ತು ನೀಡುತ್ತಿವೆ. ಆದರೆ, ರಾಷ್ಟ್ರೀಯ ಪಕ್ಷಗಳ ಸರ್ಕಾರಗಳಿರುವೆಡೆ ಅಂಥ ಬದ್ಧತೆ ಕಾಣುತ್ತಿಲ್ಲ ಎಂದು ಹೇಳಿದ್ದಾರೆ.

ಕೇರಳ, ಆಂಧ್ರ ಪ್ರದೇಶ, ತಮಿಳುನಾಡು, ಪಶ್ಚಿಮ ಬಂಗಾಳ, ದೆಹಲಿಯಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಬರುತ್ತಿದೆ. ಕೋವಿಡ್‌ ಪರಿಸ್ಥಿತಿ ನಿಭಾಯಿಸುವ ವೇಳೆ ಜನರಿಗೆ ಆದ ತೊಂದರೆಗೆ ಈ ರಾಜ್ಯಗಳಲ್ಲಿ ಪರಿಹಾರಗಳನ್ನೂ ನೀಡಲಾಗಿದೆ. ಜನರಿಗೆ ಉಚಿತ ಆಹಾರ, ಆರೋಗ್ಯ ಸೇವೆ ನೀಡಲಾಗಿದೆ. ಜನರೆಡೆಗೆ ಪ್ರಾದೇಶಿಕ ಪಕ್ಷಗಳಿಗೆ ಇರುವ ಬದ್ಧತೆಗೆ ಇದು ಸಾಕ್ಷಿ ಎಂದರು.

ಬಿಜೆಪಿ ನಾಯಕರು ಕೈಲಾಗದ ಮಾತು ಬಿಡಿ. ಜನರನ್ನು ಮತ್ತಷ್ಟು ನಿರಾಶರನ್ನಾಗಿಸಬೇಡಿ. ಜನರ ಆರೋಗ್ಯ, ಜೀವ ಮುಖ್ಯ. ಅದಕ್ಕಾಗಿ ಸಕಲವನ್ನೂ ಮಾಡಿ. ಕೇಂದ್ರದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಸಂಸದರು, ಸಚಿವರು ಶ್ರೀಕೃಷ್ಣನ ಮಾತುಗಳನ್ನು ನೆನಪಿಸಿಕೊಳ್ಳಿ. ‘ನಿಮ್ಮ ಕರ್ತ್ಯವ್ಯ ನೀವು ಮಾಡಿ.’ ಈ ಮೂಲಕ ರಾಜ್ಯಕ್ಕೆ ಬರಬೇಕಾದ್ದನ್ನು ತನ್ನಿ ಎಂದು ಸಲಹೆ ನೀಡಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು