NEWSಕೃಷಿಸಿನಿಪಥ

ಬೆಳೆದ ಬೆಳೆ ವ್ಯಾಪಾರವಾಗದೇ ಸಂಕಷ್ಟದಲ್ಲಿರುವ ರೈತರ ಗಮನಕ್ಕೆ…. ನಟ ಉಪೇಂದ್ರ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಬೆಳೆದ ಬೆಳೆ ವ್ಯಾಪಾರವಾಗದೇ ಸಂಕಷ್ಟದಲ್ಲಿರುವ ರೈತರು ನೀವು ಬೆಳೆದ ಫಸಲು ಮಾರಾಟ ಮಾಡಲು ಮೊಬೈಲ್‌ ನಂ. 9845763396 ಅನ್ನು ಸಂಪರ್ಕಿಸಿ ನಿಮ್ಮ ಫಸಲಿಗೆ ಸೂಕ್ತ ಬೆಲೆ ಕೊಟ್ಟು ಕೊಂಡುಕೊಂಡು ಅದನ್ನು ಬೇರೆಯವರಿಗೆ ಹಂಚಿಕೆ ಮಾಡುತ್ತೇವೆ ಎಂದು ನಟ ಉಪೇಂದ್ರ ತಿಳಿಸಿದ್ದಾರೆ.

ಇದನ್ನೂ ಓದಿರಿ: ಟೊಮೆಟೊ ಬೆಲೆ ಕುಸಿತದಿಂದ ರೈತ ಕಂಗಾಲು 

ಈ ಕುರಿತು ತಮ್ಮ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇನ್ನು ರೈತರು ಬೆಳೆ ಮಾರಾಟ ಮಾಡಲು ಈ ಮೊಬೈಲ್‌ ನಂಬರ್‌ ಅನ್ನು ಸಂರ್ಪಕಿಸಬಹುದು ಎಂದು ತಿಳಿಸಿದ್ದಾರೆ.

ನಮಗೆ ಅವಶ್ಯಕತೆ ಇರುವ ಬೆಳೆಯನ್ನು ನಿಮ್ಮ ಬಳಿ ಸೂಕ್ತ ಬೆಲೆಗೆ ಕೊಂಡು ಬೇಕಿರುವವರಿಗೆ ಹಂಚುತ್ತೇವೆ. ಹೀಗಾಗಿ ರೈತರು ಕಂಗಾಲಾಗದೆ ( 24 ಮೇ 2021 ರ ಒಳಗೆ ) ನಮ್ಮನ್ನು ಸಂಪರ್ಕಿಸಿ ಎಂದು ಸಮಾಜ ಸೇವಕ ರಾಜರಾಮ್‌ ತಿಳಿಸಿದ್ದಾರೆ.

ರೈತರು ಹಂಚಿಕೊಳ್ಳಬೇಕಾದ ಮಾಹಿತಿ 1.ನೀವು ಬೆಳೆದ ಬೆಳೆ ಯಾವುದು ? 2.ಆ ಬೆಳೆ ಎಷ್ಟು ಕೆಜಿ/ ಕ್ವಿಂಟಾಲ್ ಇದೆ ? 3.ಅದರ ಅಂತಿಮ ಬೆಲೆ ಎಷ್ಟು ? 4.ಅದನ್ನು ಬೆಂಗಳೂರಿಗೆ ಸಾಗಿಸಲು ಸಾರಿಗೆ ವಚ್ಚ ಎಷ್ಟು ? ಈ ವಿವರಗಳನ್ನು ಕಳಿಸಿಕೊಡಿ. ವಾಟ್ಸ್ಪ್  ನಂಬರ್ +91 98457 63396.

ಟೊಮೆಟೊ ಬೆಲೆ ಕುಸಿದಿದ್ದರಿಂದ, ಕೋಲಾರದ ರೈತರು ತಮ್ಮ ಉತ್ಪನ್ನಗಳನ್ನು ರಸ್ತೆಬದಿ ಎಸೆದು ಹೋಗುತ್ತಿರುವುದು ತಿಳಿಯುತ್ತಿದ್ದಂತೆ ಈ ನಿರ್ಧಾರಕ್ಕೆ ನಾವು ಬಂದಿದ್ದೇವೆ. ಈ ಕೊರೊನಾ ಸಂಕಷ್ಟದಲ್ಲಿ ರೈತರು ಸೂಕ್ತ ಬೆಲೆಗೆ ತಾವು ಬೆಳೆದ ಫಸಲನ್ನು ಮಾರಾಟ ಮಾಡಲಾಗದೆ ಪರಿತಪ್ಪಿಸುತ್ತಿರುವುದರಿಂದ ನಾವು ಒಂದು ಅಳಿಲು ಸೇವೆ ಮಾಡಲು ಮುಂದಾಗಿದ್ದೇವೆ ಎಂದು ತಿಳಿಸಿದರು.

Leave a Reply

error: Content is protected !!
LATEST
ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ