NEWSನಮ್ಮರಾಜ್ಯಶಿಕ್ಷಣ-

ಗ್ರಾಮೀಣ ಖಾಸಗಿ ಶಾಲೆಗಳಿಗೆ ಶೇ.70ರಷ್ಟು ಶುಲ್ಕ ಭರಿಸಲು ಪಾಲಕರಿಗೆ ಸರ್ಕಾರ ಆದೇಶಿಸದಿದ್ದರೆ ಪ್ರತಿಭಟಿಸುವ ಎಚ್ಚರಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೊರೊನಾ ಬಂದು ಒಂದು ವರ್ಷ ಮುಗಿದು ಎರಡನೇ ವರ್ಷ ನಡೆಯುತ್ತಿದೆ. ಈ ನಡುವೆ ಮಕ್ಕಳು ಶಾಲೆಗೆ ಸರಿಯಾಗಿ ದಾಖಲಾಗದೆ ಶುಲ್ಕದ ಕೊರತೆಯಿಂದಾಗಿ ರಾಜ್ಯದ ಗ್ರಾಮೀಣ ಭಾಗದ ಖಾಸಗಿ ಶಾಲೆಗಳು ಸಂಕಷ್ಟಕ್ಕೆ ಸಿಲುಕಿವೆ. ಹೀಗಾಗಿ ಈ ಹಿಂದೆ ದಾಖಲಾಗಿರುವ ಮಕ್ಕಳ ಪಾಲಕರಿಂದ ಕನಿಷ್ಠ 70ರಷ್ಟು ಶಾಲಾ ಶುಲ್ಕ ಪಾವತಿಸಲು ಆದೇಶಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಕರ್ನಾಟಕದ ಮಾನ್ಯತೆ ಪಡೆದ ಖಾಸಗಿ ಶಾಲೆಗಳ ಸಂಘದ (ರುಪ್ಸಾ) ರಾಜ್ಯ ಅಧ್ಯಕ್ಷ ಎಸ್. ಹಲ್ನೂರ್ ಮೇ 24ರವರೆಗೆ ಸಿಬ್ಬಂದಿ ಇಲ್ಲದೆ ಕೆಲಸ ಮಾಡುವುದು ಹೇಗೆ ಎಂದು ಕೇಳಿದರು.

ಏಕೆಂದರೆ ಮೇ 24ರವರೆಗೆ ಶಾಲೆಗಳು ಬಂದ್ ಆಗಿರುತ್ತವೆ. ಇನ್ನು ಶೇ.10 ರಿಂದ 20 ರಷ್ಟು ಪಾಲಕರು ಮುಂದಿನ ತರಗತಿಗೆ ನೋಂದಾಯಿಸಿಲ್ಲ. ಅಲ್ಲದೆ ಅವರನ್ನು ಒಂದೇ ತರಗತಿಯಲ್ಲಿ ಇರಿಸಲು ಕೇಳಿಕೊಂಡಿದ್ದಾರೆ ಎಂದ ಅವರು, ಆದರೂ 2019-20ನೇ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿಗಳನ್ನು ಎಸ್‌ಎಟಿಎಸ್ ಸಾಫ್ಟ್‌ವೇರ್‌ನಲ್ಲಿ ನೋಂದಾಯಿಸಲು ಶಾಲೆಗಳಿಗೆ ಇಲಾಖೆ ಸೂಚಿಸಿದೆ ಎಂದರು.

ರುಪ್ಸಾ ಮಾಜಿ ಅಧ್ಯಕ್ಷ ಲೋಕೇಶ್ ತಾಲಿಕಟ್ಟೆ ಮಾತನಾಡಿ, ಶೇ. 70ರಷ್ಟು ಶುಲ್ಕ ಬೇಡಿಕೆಯನ್ನು ರಾಜ್ಯ ಸರ್ಕಾರವು ಕಡ್ಡಾಯಗೊಳಿಸದಿದ್ದರೆ ಶಾಲೆಗಳು ಇಲಾಖೆಯ ವಿರುದ್ಧ ಪ್ರತಿಭಟನೆಗೆ ಸಿದ್ಧವಾಗಿವೆ ಎಂದು ಹೇಳಿದರು.

Leave a Reply

error: Content is protected !!
LATEST
ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ