NEWSಕೃಷಿನಮ್ಮರಾಜ್ಯ

ತೌಕ್ತೆ ಚಂಡಮಾರುತ: ಹಾನಿಗೊಳಗಾದ ಪ್ರದೇಶಗಳಲ್ಲಿ ತಕ್ಷಣ ಪರಿಹಾರಕ್ಕೆ ಸಿಎಂ ಸೂಚನೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ತೌಕ್ತೆ ಚಂಡಮಾರುತ ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸುತ್ತಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ಹೀಗಾಗಿ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ರಾಜ್ಯದ ಕರಾವಳಿ ಭಾಗದಲ್ಲಿ ತೌಕ್ತೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ತಕ್ಷಣವೇ ಪರಿಹಾರ ಕಾರ್ಯಾಚರಣೆ ಕೈಗೊಳ್ಳುವಂತೆ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.

ತೌಕ್ತೆ ಚಂಡಮಾರುತದ ತೀವ್ರ ಸ್ವರೂಪದಲ್ಲಿ ಹಾನಿ ಮಾಡುವ ಸಾಧ್ಯತೆ ಕಾಣುತ್ತಿರುವುದರಿಂದ ಕರಾವಳಿ ಭಾಗದ ಜಿಲ್ಲಾಧಿಕಾರಿಗಳು ಹಾಗೂ ಸಚಿವರನ್ನು ಫೋನ್ ಮೂಲಕ ಸಂಪರ್ಕಿಸಿ ಮಾಹಿತಿ ಪಡೆದುಕೊಂಡಿರುವುದಾಗಿ ಯಡಿಯೂರಪ್ಪ ಹೇಳಿದ್ದಾರೆ.

ಕೊರೊನಾ ನಿಯಂತ್ರಣ ಕಾರ್ಯದ ಜತೆಗೆ ತೌಕ್ತೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಸೂಚನೆ ನೀಡಿದ್ದು, ಸರ್ಕಾರದಿಂದ ಯಾವುದೇ ತುರ್ತು ನೆರವು ಬೇಕಿದ್ದರೂ ಸಂಬಂಧಪಟ್ಟ ಸಚಿವರಿಗೆ ಅಥವಾ ತಮಗೆ ನೇರವಾಗಿ ಕರೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ತಿಳಿಸಿದ್ದಾರೆ.

ಅಲ್ಲದೆ ತಾವು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮತ್ತು ಜಿಲ್ಲಾಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ರಕ್ಷಣಾ ಕಾರ್ಯಾಚರಣೆಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ಸೂಚಿಸಿರುವುದಾಗಿ ಟ್ವೀಟ್‌ ಮೂಲಕ ಬಿಎಸ್ ವೈ ತಿಳಿಸಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ