ನ್ಯೂಡೆಲ್ಲಿ : ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಿಸಿದ್ದು, ಮೇ 24ರ ವರೆಗೆ ಜಾರಿಯಲ್ಲಿರಲಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಲಾಕ್ಡೌನ್ ಪರಿಣಾಮ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಉತ್ತಮ ಬೆಳವಣಿಗೆಗಳು ಕಂಡು ಬಂದಿವೆ. ಸೋಂಕು ಪ್ರಕರಣಗಳ ಸಂಖ್ಯೆಯಲ್ಲೂ ಭಾರೀ ಇಳಿಕೆ ಕಂಡು ಬಂದಿದೆ ಎಂದು ಹೇಳಿದ್ದಾರೆ.
ಕೊರೊನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಕಡಿಯಾಗುತ್ತಿದೆ. ಹೀಗಾಗಿ ಇನ್ನಷ್ಟು ದಿನ ಲಾಕ್ಡೌನ್ ವಿಸ್ತರಿಸುವುದರಿಂದ ಇಷ್ಟು ದಿನಗಳು ನಾವು ಪಟ್ಟ ಪರಿಶ್ರಮಕ್ಕೆ ಫಲಸಿಗುವುದು. ಈ ಹಿನ್ನೆಲೆಯಲ್ಲಿ ಮತ್ತೊಂದು ವಾರ ಲಾಕ್ಡೌನ್ ವಿಸ್ತರಿಸಲಾಗುತ್ತಿದೆ. ಮುಂದಿನ ಸೋಮವಾರ ಬೆಳಗ್ಗೆ 5 ಗಂಟೆಯವರೆಗೂ ಲಾಕ್ಡೌನ್ ಜಾರಿಯಲ್ಲಿರಲಿದೆ ಎಂದು ತಿಳಿಸಿದ್ದಾರೆ.
ದೆಹಲಿಯಲ್ಲಿ ಶುಕ್ರವಾರ 8,506 ಹೊಸ ಪ್ರಕರಣಗಳು ಪತ್ತೆಯಾಗಿವೆ. ಒಂದು ತಿಂಗಳ ಬಳಿಕ ದೆಹಲಿಯಲ್ಲಿ 10,000ಕ್ಕಿಂತಲೂ ಕಡಿಮೆ ಪ್ರಕರಣಗಳು ಪತ್ತೆಯಾಗಿವೆ. ಇದಕ್ಕೆ ಲಾಕ್ಡೌನ್ ಕಾರಣ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.