NEWSನಮ್ಮರಾಜ್ಯ

ಸಾರಿಗೆ ನೌಕರರಿಗೆ ಕೂಡಲೇ ಏಪ್ರಿಲ್‌ ತಿಂಗಳ ಸಂಬಳ ನೀಡಿ: ಜಗದೀಶ್ ವಿ. ಸದಂ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯ ಸರ್ಕಾರ ಲಾಕ್ ಡೌನ್ ಹೇರಿ ದುರ್ಬಲ ವರ್ಗಗಳಿಗೆ ಪರಿಹಾರ ಧನವನ್ನು ವಿತರಿಸುವುದು ದೂರದ ಮಾತು. ತನ್ನದೇ ಸರ್ಕಾರದ ಅಧೀನದಲ್ಲಿರುವ ಸಾರಿಗೆ ನೌಕರರಿಗೆ ಸಂಬಳವನ್ನು ನೀಡದೆ ಶೋಷಣೆ ಮಾಡುತ್ತಿರುವುದು ನಿಜಕ್ಕೂ ಕಳವಳಕಾರಿಯಾದ ಸಂಗತಿ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಖೇದ ವ್ಯಕ್ತಪಡಿಸಿದರು.

ಸೋಮವಾರ ಪಕ್ಷದ ಮಾಧ್ಯಮ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯ ಮಾತನಾಡಿದ ಅವರು, ಸಾರಿಗೆ ಇಲಾಖೆಯ ಸುಮಾರು 1.30 ಲಕ್ಷ ನೌಕರರಿಗೆ ಕಳೆದ ಏಪ್ರಿಲ್ ತಿಂಗಳ ಸಂಬಳ ಇನ್ನೂ ಸಹ ನೀಡದೆ ಸತಾಯಿಸುತ್ತಿದೆ. ಸರ್ಕಾರದ ಈ ಧೋರಣೆಯಿಂದ ಲಕ್ಷಾಂತರ ನೌಕರರ ಕುಟುಂಬಗಳು ಒಪ್ಪತ್ತಿನ ಊಟಕ್ಕೂ ಸಂಚಕಾರ ಬಂದು ಯಕಶ್ಚಿತ್ ಬೀದಿಗೆ ಬೀಳುವ ಸನ್ನಿವೇಶ ಎದುರಾಗಿದೆ. ಏಪ್ರಿಲ್ ತಿಂಗಳಿನಲ್ಲಿ ನಡೆದ ಸಾರಿಗೆ ನೌಕರರ ಮುಷ್ಕರವನ್ನು ಮುಂದಿಟ್ಟುಕೊಂಡು ಈ ರೀತಿಯ ಸೇಡಿನ ಕ್ರಮವನ್ನು ಸರ್ಕಾರ ಮಾಡಲು ಹೊರಟಿರುವುದು ಸಲ್ಲದು ಎಂದು ಹೇಳಿದರು.

ಮುಷ್ಕರದಲ್ಲಿ ಭಾಗವಹಿಸದೆ ಇರುವ ನೌಕರರಿಗೂ ಸಹ ಇದುವರೆವಿಗೂ ಸಂಬಳವನ್ನೂ ನೀಡಿಲ್ಲ. ಅಲ್ಲದೆ ಮುಷ್ಕರ ಮುಗಿದ ನಂತರ ಕೆಲಸಕ್ಕೆ ಆಗಮಿಸಿದ್ದ ನೌಕರರಿಗೆ ಕೆಲಸವನ್ನು ನೀಡದೆ ಇಲ್ಲಸಲ್ಲದ ಕಾರಣಗಳನ್ನು ಹೇಳುತ್ತಾ ಆಡಳಿತ ವರ್ಗ ಸತತವಾಗಿ ಗೈರು ಹಾಜರಿಯನ್ನು ಹಾಕುತ್ತಿರುವುದು ಕಂಡುಬಂದಿದೆ ಎಂದು ಜಗದೀಶ್ ಆರೋಪಿಸಿದರು.

ನ್ಯಾಯಾಲಯದಲ್ಲಿ ಅನೇಕ ನೌಕರರ ವರ್ಗಾವಣೆ, ಅಮಾನತು ಆದೇಶಗಳನ್ನು ವಾಪಸು ತೆಗೆದುಕೊಳ್ಳಬೇಕೆಂದು ಆದೇಶವಾಗಿದ್ದರೂ ಸಹ ಸರ್ಕಾರವು ಇತ್ತಕಡೆ ಗಮನ ಹರಿಸದಿರುವುದು ನ್ಯಾಯಾಲಯಕ್ಕೆ ಮಾಡಿರುವ ಅಪಮಾನ. ಕೂಡಲೇ ನ್ಯಾಯಾಲಯದ ಆದೇಶವನ್ನು ಪಾಲಿಸಿ ಕಾರ್ಮಿಕರಿಗೆ ನ್ಯಾಯ ಒದಗಿಸಬೇಕು ಹಾಗೂ ಈ ಕೂಡಲೇ ಏಪ್ರಿಲ್ ತಿಂಗಳ ಸಂಬಳವನ್ನು ಬಿಡುಗಡೆ ಮಾಡಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ