NEWSನಮ್ಮರಾಜ್ಯ

ಕೊರೊನಾ ಸೋಂಕಿತರಿಗೆ 2ಡಿಜಿ ಔ‍ಷಧ ಖರೀದಿಸಿ ಉಚಿತವಾಗಿ ಹಂಚಲು ಜೆಡಿಎಸ್‌ ಚಿಂತನೆ: ಎಚ್‌ಡಿಕೆ

ಜೆಡಿಎಸ್‌ನಿಂದ ರಾಜ್ಯದಲ್ಲಿ ನಡೆಸುತ್ತಿರುವ ಕೋವಿಡ್‌ ಪರಿಹಾರ ಕಾರ್ಯಗಳ ಬಗೆಗೆ ವಿಡಿಯೋ ಸಮಾಲೋಚನೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯದ ಕೋವಿಡ್‌ ಸ್ಥಿತಿಗತಿ ಮತ್ತು ಜೆಡಿಎಸ್‌ನಿಂದ ಜನರಿಗೆ ನೀಡಲಾಗುತ್ತಿರುವ ಪರಿಹಾರ ಕಾರ್ಯಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಪಕ್ಷದ ಶಾಸಕರು, ಮುಖಂಡರೊಂದಿಗೆ ಸೋಮವಾರ ವಿಡಿಯೋ ಮೂಲಕ ಸಮಾಲೋಚನೆ ನಡೆಸಿದರು.

ಕೊರೊನಾ ವೈರಸ್‌ ಸೋಂಕು ಪತ್ತೆ ಪರೀಕ್ಷೆ ಕಡಿಮೆ ಪ್ರಮಾಣದಲ್ಲಿ ನಡೆಯುತ್ತಿರುವುದು, ಪರೀಕ್ಷಾ ವರದಿಗಳು ವಿಳಂಬವಾಗಿ ಬರುತ್ತಿರುವುದು ಮತ್ತು ವರದಿ ವಿಳಂಬವಾಗುತ್ತಿರುವುದರಿಂದ ಆಗುತ್ತಿರುವ ಅನಾಹುತಗಳು, ಲಸಿಕೆ ಅಭಿಯಾನ ಅವ್ಯವಸ್ಥೆ, ಆಕ್ಸಿಜನ್‌ ಪೂರೈಕೆಯಲ್ಲಿ ಅಗುತ್ತಿರುವ ಸಮಸ್ಯೆ, ತಾರತಮ್ಯ, ಆಸ್ಪತ್ರೆಗಳು ರೋಗಿಗಳಿಂದ ಲಕ್ಷಾಂತರ ರೂಪಾಯಿ ವಸೂಲಿ ಮಾಡುತ್ತಿರುವುದನ್ನು ಶಾಸಕರು ಕುಮಾರಸ್ವಾಮಿ ಅವರ ಗಮನಕ್ಕೆ ತಂದರು. ಈ ವೇಳೆ ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತರುವುದಾಗಿ ಕುಮಾರಸ್ವಾಮಿ ಭರವಸೆ ನೀಡಿದರು.

ಹಳ್ಳಿಗಳಲ್ಲಿ ಸೋಂಕಿಗೆ ಒಳಗಾಗಿರುವವರಿಗೆ ಮಾಹಿತಿ, ಜಾಗೃತಿ ನೀಡಲು ಆಶಾ ಕಾರ್ಯಕರ್ತೆಯರು ಶ್ರಮ ವಹಿಸುತ್ತಿರುವುದಾಗಿ ಶಾಸಕರು ಮಾಹಿತಿ ನೀಡಿದರು. ಆಶಾ ಕಾರ್ಯಕರ್ತರ ಕಾರ್ಯಕ್ಕೆ ಎಚ್‌ಡಿಕೆ ಹರ್ಷ ವ್ಯಕ್ತಪಡಿಸಿದರು. ಕಾರ್ಯಕರ್ತೆಯರು ಸೋಂಕಿತರಿಗೆ ಔಷಧ ತಲುಪಿಸಲು ಉತ್ಸಕರಾಗಿದ್ದರೂ, ಸರ್ಕಾರ ಔಷಧ ಪೂರೈಸದೇ ಇರುವುದನ್ನು ಶಾಸಕ ಅಶ್ವಿನ್‌ ಕುಮಾರ್‌ ಈ ವೇಳೆ ಎಚ್‌ಡಿಕೆ ಗಮನಕ್ಕೆ ತಂದರು.

ಇನ್ನು ಕೊರೊನಾ ಸೋಂಕಿತರ ಚಿಕಿತ್ಸೆಗೆ ನೆರವಾಗುತ್ತಿರುವವರ,  ವೈಯಕ್ತಿಕ ಸಹಾಯ ನೀಡುತ್ತಿರುವ ಪಕ್ಷದ ಶಾಸಕರ ನಡೆಗೆ ಕುಮಾರಸ್ವಾಮಿ ಪ್ರಶಂಸೆ ವ್ಯಕ್ತಪಡಿಸಿದರು.

2ಡಿಜಿ ಔ‍ಷಧ ಖರೀದಿಸಿ ಹಂಚಲು ಚಿಂತನೆ
ಡಿಆರ್‌ಡಿಒ ಅಭಿವೃದ್ಧಪಡಿಸಿರುವ 2ಡಿಜಿ ಔ‍ಷಧದ ಪೊಟ್ಟಣಗಳನ್ನು ಖರೀದಿ ಮಾಡಿ ರಾಜ್ಯದಾದ್ಯಂತ ಜೆಡಿಎಸ್‌ ವತಿಯಿಂದ ಉಚಿತವಾಗಿ ವಿತರಿಸುವ ಬಗ್ಗೆ  ಸಮಾಲೋಚನೆ ನಡೆಯಿತು. ಔ‍ಷಧ ಪರಿಣಾಮಕಾರಿ ಎಂದು ಕಂಡು ಬಂದರೆ ಅದನ್ನು ಖರೀದಿಸಿ ಹಂಚಲು ನಿರ್ಧರಿಸಲಾಯಿತು. ಎಚ್‌.ಡಿ ಕುಮಾರಸ್ವಾಮಿ ಅವರ ಈ ನಿರ್ಧಾರಕ್ಕೆ ಶಾಸಕರು, ಮುಖಂಡರು ಹರ್ಷ ವ್ಯಕ್ತಪಡಿಸಿ ಪ್ರಶಂಸಿದರು.

ಪಡಿತರ ಸಮಸ್ಯೆಗೆ ಶಾಸಕರ ಆಕ್ರೋಶ
ಪಡಿತರ ತೆಗೆದುಕೊಳ್ಳಲು ಥಂಬ್‌ ಇಂಪ್ರೆಶನ್‌ ರದ್ದು ಮಾಡಿ, ಆಧಾರ್‌ ಕಡ್ಡಾಯಗೊಳಿಸಿರುವುದನ್ನು ಬಹುತೇಕ ಶಾಸಕರು ವಿರೋಧಿಸಿದರು. ಆಧಾರ್‌ ಲಿಂಕ್‌ ಆಗದೇ, ಪಡಿತರ ಸಿಗದೇ ಜನ ಪರದಾಡುತ್ತಿದ್ದಾರೆ ಎಂದು ಶಾಸಕರು, ಮುಖಂಡರು ದೂರಿದರು. ಚೆಕ್‌ ಲೀಸ್ಟ್‌ ಮೂಲಕ ಪಡಿತರ ವಿತರಿಸಬೇಕು. ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತಾರಬೇಕಾಗಿ ಬಹುತೇಕ ಶಾಸಕರು  ಮನವಿ ಮಾಡಿದರು. ಸರ್ಕಾರಕ್ಕೆ ಈ ವಿಷಯ ತಲುಪಿಸಿ ಸಮಸ್ಯೆ ಪರಿಹರಿಸುವುದಾಗಿ ಎಚ್‌ಡಿಕೆ ಹೇಳಿದರು.

ಕೋವಿಡ್‌ಗೆ ಹೆಚ್ಚಾಗಿ ಯುವಕರೇ ಬಲಿ – ಆತಂಕ
ರಾಜ್ಯದಾದ್ಯಂತ ಯುವಕರೇ ಹೆಚ್ಚಾಗಿ ಕೋವಿಡ್‌ಗೆ ಬಲಿಯಾಗುತ್ತಿರುವ ಗಂಭೀರ ವಿಚಾರವನ್ನು ಶಾಸಕರು ಕುಮಾರಸ್ವಾಮಿ ಅವರ ಗಮನಕ್ಕೆ ತಂದರು.

ಯುವಕರೇ ಸಾವಿಗೀಡಾಗುತ್ತಿರುವುದು ಏಕೆ ಎಂಬುದರ ಕುರಿತು ಸರ್ಕಾರ ಅಧ್ಯಯನ ನಡೆಸುವ ಅಗತ್ಯವಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾದವು. ಅಲ್ಲದೆ, ಈ ಬಗ್ಗೆ ಯುವ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕಾದ ಅಗತ್ಯವಿರುವುದಾಗಿ ಕುಮಾರಸ್ವಾಮಿ ಅಭಿಪ್ರಾಯಪಟ್ಟರು.

ಕೋವಿಡ್‌ ಸ್ಥಿತಿಗತಿ ಬಗ್ಗೆ ನಡೆದ ಆನ್‌ಲೈನ್‌ ಸಮಾಲೋಚನೆಯಲ್ಲಿ ಎಚ್‌ಡಿಕೆ ಜತೆ ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು ಜಿಲ್ಲೆಯ ಶಾಸಕರು, ಮುಖಂಡರು ಭಾಗವಹಿಸಿ ಚರ್ಚಿಸಿದರು.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...