Vijayapatha – ವಿಜಯಪಥ
Friday, November 1, 2024
CrimeNEWSದೇಶ-ವಿದೇಶ

ಪದ್ಮಶ್ರೀ ಪುರಸ್ಕೃತ ಡಾ. ಕೆ.ಕೆ.ಅಗರ್‌ವಾಲ್‌ ಕೋವಿಡ್‌ಗೆ ಬಲಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ಭಾರತೀಯ ವೈದ್ಯಕೀಯ ಸಂಸ್ಥೆ (ಐಎಂಎ) ಮಾಜಿ ಅಧ್ಯಕ್ಷ, ಪದ್ಮಶ್ರೀ ಪುರಸ್ಕೃತ ಕೆ.ಕೆ.ಅಗರವಾಲ್‌ (61) ಕೋವಿಡ್‌ನಿಂದ ಸೋಮವಾರ ನಿಧನರಾದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕೆಲ ದಿನಗಳ ಹಿಂದೆ ಕೋವಿಡ್‌ನಿಂದ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದರು. ವೆಂಟಿಲೇಟರ್‌ ಸಹಾಯದಲ್ಲಿದ್ದ ಅಗರ್‌ವಾಲ್‌ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಅಗರ್‌ವಾಲ್‌ ಕೋವಿಡ್‌-19 ಲಸಿಕೆ ಎರಡು ಡೋಸ್‌ ಪಡೆದಿದ್ದರು. ಖ್ಯಾತ ವೈದ್ಯರಾಗಿದ್ದ ಅಗರ್‌ವಾಲ್‌ ಅವರು ಜನತೆಯಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸುತ್ತಿದ್ದರು. ಕೋವಿಡ್‌ ಸಾಂಕ್ರಾಮಿಕ ಸಂದರ್ಭದಲ್ಲೂ ಜನರಲ್ಲಿ ಜಾಗೃತಿ ಮೂಡಿಸಲು ಸಾಕಷ್ಟು ಶ್ರಮವಹಿಸಿದ್ದರು. ವಿಡಿಯೋ, ಶೈಕ್ಷಣಿಕ ಕಾರ್ಯಕ್ರಮಗಳ ಮೂಲಕ 100 ಮಿಲಿಯನ್‌ಗೂ ಹೆಚ್ಚು ಮಂದಿಯಲ್ಲಿ ಕೋವಿಡ್‌ ಜಾಗೃತಿ ಉಂಟುಮಾಡಿದ್ದರು. ಅಗಣಿತ ಮಂದಿ ಜೀವವನ್ನೂ ಉಳಿಸಿದ್ದರು.

ಇಂಧ ವೈದ್ಯರು ಈಗ ಕೊರೊನಾಗೆ ಬಲಿಯಾಗಿರುವುದು ಕೋವಿಡ್‌ ಎನ್ನುವ ಮಹಾಮಾರಿ ಎಷ್ಟು ಅಪಾಯಕಾರಿ ಎಂಬುದನ್ನು ಎಚ್ಚರಿಸಿದೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ