Vijayapatha – ವಿಜಯಪಥ
Friday, November 1, 2024
Breaking NewsNEWSಕೃಷಿನಮ್ಮಜಿಲ್ಲೆ

ಕೃಷಿ ಉತ್ಪನ್ನ ಖರೀದಿಗೆ ಕಾಲ್ ಸೆಂಟರ್ ಆರಂಭಿಸಿ: ಸಿಎಂಗೆ ಒಕ್ಕಲಿಗರ ಒಕ್ಕೂಟ ಮನವಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೊರೊನಾ ಕಾರಣ ಲಾಕ್‍ಡೌನ್ ಘೋಷಣೆಯಾಗಿರುವುದರಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ರೈತರನ್ನು ರಕ್ಷಿಸಲು ರಾಜ್ಯ ಸರಕಾರ ಕೂಡಲೇ ಎಲ್ಲ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಿಸಬೇಕು ಮತ್ತು ಕೃಷಿ ಉತ್ಪನ್ನಗಳನ್ನು ಖರೀದಿಸಲು ಮುಂದಾಗುವ ಮೂಲಕ ರೈತರ ನೆರವಿಗೆ ಧಾವಿಸಬೇಕು ಎಂದು ರಾಜ್ಯ ಒಕ್ಕಲಿಗರ ಒಕ್ಕೂಟದ ಅಧ್ಯಕ್ಷ ಸಿ.ವಿ. ದೇವರಾಜ್ ಆಗ್ರಹಪಡಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ಸಂಬಂಧ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದು, ಅನ್ನದಾತರು ಬೆಳೆದ ಹಣ್ಣು ತರಕಾರಿ, ಹೂ, ಸೊಪ್ಪು ಮತ್ತಿತರ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲಾರದೆ ರಸ್ತೆಗೆ ಸುರಿಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಅವರಿಗೆ ಈಗ ಜೀವನ ನಿರ್ವಾಹಣೆ ಕಷ್ಟವಾಗುತ್ತಿದ್ದು, ನೆರವಿಗೆ ಧಾವಿಸಬೇಕು ಎಂದು ಮನವಿ ಮಾಡಿದ್ದಾರೆ.

ರೈತರ ಕೃಷಿ ಉತ್ಪನ್ನಗಳ ಖರೀದಿಗೆ ಸರಕಾರ ಕೃಷಿ ಇಲಾಖೆ ಮೂಲಕ ಕಾಲ್ ಸೆಂಟರ್ ಆರಂಭಿಸಬೇಕು. ಈ ಕಾಲ್ ಸೆಂಟರ್‍ಗೆ ಕರೆ ಮಾಡುವ ರೈತರ ಕೃಷಿ ಉತ್ಪನ್ನಗಳ ಖರೀದಿಯನ್ನು ಸರಕಾರ ಮಾಡಬೇಕು. ಕೃಷಿ ಭೂಮಿಗೇ ತೆರಳಿ ಅಲ್ಲಿಯೇ ಖರೀದಿ ಮಾಡಬೇಕು. ಯಾವ ಭಾಗದಲ್ಲಿ ಬೇಡಿಕೆ ಇರುತ್ತದೆಯೋ ಅಲ್ಲಿಗೆ ತ್ವರಿತ ಸಾಗಾಣಿಕೆ ಮಾಡಬೇಕು ಎಂದು ಹೇಳಿದ್ದಾರೆ.

ಕೋವಿಡ್ ಸೃಷ್ಟಿಸಿರುವ ಈ ಬಿಕ್ಕಟ್ಟನ್ನು ಬಳಸಿಕೊಂಡು ಖಾಸಗಿ ಸಹ ಭಾಗಿತ್ವದಲ್ಲಿ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಕೋಲ್ಡ್ ಸ್ಟೋರೇಜ್ ಮತ್ತು ಗೋದಾಮುಗಳನ್ನು ನಿರ್ಮಾಣ ಮಾಡಬೇಕು. ಕನಿಷ್ಠ ದರ ವಿಧಿಸಿ ರೈತರಿಗೆ ತಮ್ಮ ಉತ್ಪನ್ನಗಳನ್ನು ಸಂರಕ್ಷಿಸಿಡಲು ಅವಕಾಶ ಕಲ್ಪಸಬೇಕು ಎಂದೂ ತಿಳಿಸಿದ್ದಾರೆ.

ಇನ್ನು ಕೊರೊನಾ ಮತ್ತು ಲಾಕ್ ಡೌನ್ ಕಾರಣದಿಂದಾಗಿ ಕಾರ್ಮಿಕರು ಅತಂತ್ರ ಸ್ಥಿತಿಯಲ್ಲಿದ್ದು, ಜೀವನವನ್ನು ನಡೆಸುವುದೇ ದುಸ್ತರವಾಗಿದೆ. ಕಾರ್ಮಿಕರು ಸೇರಿದಂತೆ ರಾಜ್ಯದಲ್ಲಿ ಸುಮಾರು 1.10 ಕೋಟಿ ಬಿಪಿಎಲ್ ಕುಟುಂಬಗಳಿದ್ದು ಈ ಕುಟುಂಬಗಳಿಗೆ ಎರಡು ತಿಂಗಳ ಕಾಲ ತಲಾ ಐದೈದು ಸಾವಿರ ರೂಪಾಯಿಗಳನ್ನು ಅವರ ಖಾತೆಗೆ ವರ್ಗಾಯಿಸಬೇಕು ಎಂದೂ ದೇವರಾಜ್ ಒತ್ತಾಯಿಸಿದ್ದಾರೆ.

ರಾಜ್ಯಾದ್ಯಂತ ರೈತರು, ಗಾರ್ಮೆಂಟ್ಸ್ ನೌಕರರು, ಚಾಲಕರು, ದಿನಗೂಲಿ ನೌಕರರು, ಅಸಂಘಟಿತ ವಲಯದ ಕಾರ್ಮಿಕರ ಜೀವನ ಹಸನಾಗಲು ತಾವು ಕಾರಣೀಭೂತರಾಗಬೇಕು ಎಂದು ಮುಖ್ಯಮಂತ್ರಿ ಬಿಎಸ್‌ವೈ ಅವರನ್ನು ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ