Please assign a menu to the primary menu location under menu

Breaking NewsNEWSನಮ್ಮರಾಜ್ಯ

1ಕೋಟಿ ಕೊಲ್ಚಿಸಿನ್ ಟ್ಯಾಬ್ಲೆಟ್‍ಗಳ ಪೂರೈಕೆಗೆ ಕೇಂದ್ರ ಒಪ್ಪಿಗೆ : ಡಿಸಿಎಂ ಡಾ. ಅಶ್ವತ್ಥನಾರಾಯಣ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೋವಿಡ್ ಸೋಂಕಿತರಿಗೆ ಅತ್ಯಗತ್ಯವಾಗಿ ಬೇಕಾಗಿರುವ ಒಂದು ಕೋಟಿ ಕೊಲ್ಚಿಸಿನ್ ಟ್ಯಾಬ್ಲೆಟ್‍ಗಳನ್ನು ಕೂಡಲೇ ಪೂರೈಸಬೇಕು ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷ, ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾಡಿದ್ದ ಮನವಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.

ರಾಜ್ಯದಲ್ಲಿ 5.17 ಲಕ್ಷದಷ್ಟು ಕೋವಿಡ್ ಸೋಂಕಿತರಿದ್ದು, ಒಂದು ಕೋಟಿಯಷ್ಟು ಕೊಲ್ಚಿಸಿನ್ ಟ್ಯಾಬ್ಲೆಟ್‍ಗಳನ್ನು ರಾಜ್ಯಕ್ಕೆ ಪೂರೈಕೆ ಮಾಡಬೇಕು ಎಂದು ಡಿಸಿಎಂ ಅವರು ಕೇಂದ್ರದ ರಾಸಾಯನಿಕ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು.

ಈ ಬಗ್ಗೆ ಕೂಡಲೇ ಕ್ರಮ ವಹಿಸಿರುವ ಕೇಂದ್ರ ಸಚಿವರು, ಕೊಲ್ಚಿಸಿನ್ ಟ್ಯಾಬ್ಲೆಟ್ ತಯಾರಿಸುವ ಜೈದಸ್ ಕ್ಯಾಡಿಲ್ಲಾ ಕಂಪನಿಯ ಅಧ್ಯಕ್ಷ ಪಂಕಜ್ ಪಟೇಲ್ ಅವರ ಜೊತೆ ಮಾತುಕತೆ ನಡೆಸಿದ್ದರು. ರಾಜ್ಯದ ಬೇಡಿಕೆಯಂತೆ ಅಷ್ಟೂ ಪ್ರಮಾಣದ ಟ್ಯಾಬ್ಲೆಟ್‍ಗಳನ್ನು ಪೂರೈಸಲು ಕಂಪನಿ ಒಪ್ಪಿಕೊಂಡಿದ್ದು, ರಾಜ್ಯದ ಆರೋಗ್ಯ ಇಲಾಖೆ ಅಧಿಕಾರಿಗಳು ಖರೀದಿಸಲು ಆದೇಶ ಕೊಟ್ಟ ಕೂಡಲೇ ರಾಜ್ಯಕ್ಕೆ ಟ್ಯಾಬ್ಲೆಟ್‍ಗಳು ಪೂರೈಕೆಯಾಗುತ್ತವೆ ಎಂದು ಕೇಂದ್ರ ಸಚಿವರು ತಮ್ಮ ಪತ್ರಕ್ಕೆ ಉತ್ತರಿಸಿದ್ದಾರೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದ್ದಾರೆ.

Leave a Reply

error: Content is protected !!
LATEST
ಬಿಬಿಎಂಪಿ: 13 ಕೆರೆಗಳ ಒತ್ತುವರಿ ತೆರವು- ₹242.5 ಕೋಟಿ ಮೌಲ್ಯದ 7 ಎಕರೆ ಪ್ರದೇಶ ವಶ -ಪ್ರೀತಿ ಗೆಹ್ಲೋಟ್ ಫೆಂಗಲ್ ಚಂಡಮಾರುತದ ಪರಿಣಾಮ ಎಲ್ಲಾ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ: ತುಷಾರ್ ಗಿರಿನಾಥ್ KSRTC: ಸರಿ ಸಮಾನ ವೇತನಕ್ಕಾಗಿ ಮತ್ತೊಮ್ಮೆ ನಾಲ್ಕೂ ನಿಗಮಗಳ ಸಂಚಾರ ಮೇಲ್ವಿಚಾರಕ ಸಿಬ್ಬಂದಿಗಳ ಒತ್ತಾಯ ಸಾರಿಗೆ ಅಧಿಕಾರಿಗಳು-ನೌಕರರ ಬೇಡಿಕೆಯಂತೆ ಸರಿ ಸಮಾನ ವೇತನ ಕೊಡಿ: BMS ತಾಕೀತು NWKRTC: ಹುಬ್ಬಳ್ಳಿ-ಧಾರವಾಡ ಹೈಕೋರ್ಟ್‌ ನಡುವೆ ಹೊಸ ಬಸ್‌ಗಳ ಸಂಚಾರ- ವಕೀಲರ ಮನವಿ ಸ್ಪಂದಿಸಿದ ಅಧಿಕಾರಿಗಳು ಡಿ.1ರಂದು ಲಾಲ್‌ಬಾಗ್‌ನಲ್ಲಿ ಇಪಿಎಸ್ ಪಿಂಚಿಣಿದಾರರ 83ನೇ ತಿಂಗಳ ಸಭೆ ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ