ವಿಜಯಪಥ ಸಮಗ್ರ ಸುದ್ದಿ
ಮೈಸೂರು: ವಿಧಾನಸಭೆ ಮಾಜಿ ಸಭಾಪತಿ ಕೆ.ಆರ್.ಪೇಟೆ ಕೃಷ್ಣ (80) ಅವರು ಮೈಸೂರಿನ ನಿವಾಸದಲ್ಲಿ ಇಂದು ನಿಧನರಾಗಿದ್ದಾರೆ.
ಹಲವು ದಿನಗಳಿಂದ ಲಿವರ್ ಕ್ಯಾನ್ಸರ್ ನಿಂದ ಬಳಲಿತ್ತಿದ್ದ ಕೃಷ್ಣ ಅವರು ಚಿಕಿತ್ಸೆಗಾಗಿ ಚೆನ್ನೈಗೂ ಸಹ ತೆರಳಿದ್ದರು. ಚಿಕಿತ್ಸೆಗೆ ಸ್ಪಂದಿಸಿದ ಕಾರಣ ಕೃಷ್ಣ ಅವರನ್ನು ಮೈಸೂರಿನ ಕುವೆಂಪು ನಗರದ ನಿವಾಸಕ್ಕೆ ಕರೆತರಲಾಗಿತ್ತು.
ಇಂದು ಅವರು ನಿಧನರಾಗಿದ್ದು, ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕೊತ್ತಮಾರನಹಳ್ಳಿ ಗ್ರಾಮದಲ್ಲಿ ನಾಳೆ ಬೆಳಗ್ಗೆ 10 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕೊತ್ತಮಾರನಹಳ್ಳಿ ಕೃಷ್ಣ ಅವರ ಸ್ವಂತ ಗ್ರಾಮ. ಮೂರು ಬಾರಿ ಕೆ.ಆರ್.ಪೇಟೆ ಕ್ಷೇತ್ರದಿಂದ ಶಾಸಕರಾಗಿದ್ದು, 1996 ರಲ್ಲಿ ಮಂಡ್ಯದ ಸಂಸದರು ಸಹ ಆಗಿದ್ದರು. 1988ರಲ್ಲಿ ಎಸ್.ಆರ್.ಬೊಮ್ಮಾಯಿ ಅವರ ಸಂಪಟದಲ್ಲಿ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾಗಿ ಹಾಗೂ 2006 ರಿಂದ 2008ರ ವರೆಗೆ ವಿಧಾನಸಭೆ ಅಭಾಪತಿಯಾಗಿದ್ದರು.
ಕೃಷ್ಣ ಅವರ ನಿಧನಕ್ಕೆ ಗಣ್ಯರ ಸಂತಾಪ
ಕರ್ನಾಟಕ ವಿಧಾನಸಭೆಯ ಮಾಜಿ ಸ್ಪೀಕರ್, ಮಾಜಿ ಸಚಿವರು, ಮಾಜಿ ಸಂಸದರಾದ ಕೆ. ಆರ್. ಪೇಟೆಯ ಕೃಷ್ಣ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ನೋವುಂಟಾಯಿತು.
ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಈ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/iuBMvfEpTk— H D Devegowda (@H_D_Devegowda) May 21, 2021
ರಾಜ್ಯ ವಿಧಾನಸಭೆಯ ಮಾಜಿ ಸ್ಪೀಕರ್ ಕೆ.ಆರ್. ಪೇಟೆ ಕೃಷ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ @BSYBJP ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶಾಸಕರಾಗಿ, ಸಚಿವರಾಗಿ, ಸಂಸದರಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ್ದ ಅವರು ವಿಧಾನಸಭೆಯ ಸ್ಪೀಕರ್ ಆಗಿ ಸಂಸದೀಯ ಮೌಲ್ಯಗಳನ್ನು ಎತ್ತಿ ಹಿಡಿದವರು. (1/2)
— CM of Karnataka (@CMofKarnataka) May 21, 2021
ಸರಳ, ಸಜ್ಜನ ರಾಜಕಾರಣಿ, ಮಾಜಿ ಸ್ಪೀಕರ್ ಕೆ. ಆರ್. ಪೇಟೆ ಕೃಷ್ಣ ಅವರ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ.
ಅವರ ಅಗಲಿಕೆಯ ನೋವನ್ನು ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/4KYppRyNGc— H D Kumaraswamy (@hd_kumaraswamy) May 21, 2021