NEWSನಮ್ಮರಾಜ್ಯರಾಜಕೀಯ

ಜೂನ್‌ 7ರವರೆಗೆ ಲಾಕ್‌ಡೌನ್‌ ವಿಸ್ತರಣೆ: ಸಿಎಂ ಬಿಎಸ್‌ವೈ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚೇನು ಇಳಿಕೆ ಕಾಣದ ಹಿನ್ನೆಲೆ ಮತ್ತೆ 14 ದಿನಗಳ ಕಾಲ ಲಾಕ್‍ಡೌನ್ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ರಾಜ್ಯದಲ್ಲಿ ಇನ್ನೂ ನಿರೀಕ್ಷಿತ ಮಟ್ಟದಲ್ಲಿ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಲಾಕ್​ಡೌನ್​​ವಿಸ್ತರಿಸಿದೆ. ಮೇ 24ರವರೆಗೆ ಲಾಕ್​ಡೌನ್​ ಘೋಷಿಸಿದ್ದ ಸಿಎಂ ಈಗ ಮತ್ತೆ ಜೂ.7ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.

ಕೋವಿಡ್ ಪರಿಸ್ಥಿತಿ ಮತ್ತು ಲಾಕ್‍ಡೌನ್ ವಿಸ್ತರಣೆ ಕುರಿತು ಇಂದು ಮುಖ್ಯಮಂತ್ರಿ ನಿವಾಸ ಕಾವೇರಿಯಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಡಿಸಿಎಂ ಅಶ್ವಥ್ ನಾರಾಯಣ, ಸಚಿವ ಆರ್.ಅಶೋಕ್, ಶಾಸಕ ಎಸ್.ಆರ್.ವಿಶ್ವನಾಥ್, ಸಿಎಸ್ ರವಿಕುಮಾರ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಆರೋಗ್ಯ ಇಲಾಖೆ ಎಸಿಎಸ್ ಜಾವೇದ್ ಅಖ್ತರ್ ಭಾಗಿಯಾಗಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಈ ಕುರಿತು ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಲಾಕ್‍ಡೌನ್‍ನಿಂದ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದ್ದು, ಜನರ ಹಿತದೃಷ್ಟಿಯಿಂದ ಮತ್ತೆ ಲಾಕ್‍ಡೌನ್ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಜನ ಸಹಕರಿಸಬೇಕು. ಕೊರೊನಾ ನಿಯಂತ್ರಣಕ್ಕೆ ಮತ್ತೆ ಎರಡು ವಾರಗಳ ಕಾಲ ಲಾಕ್‍ಡೌನ್ ವಿಧಿಸಲಾಗುತ್ತಿದ್ದು, ಮೇ 24 ರಿಂದ ಜೂನ್ 7ರ ವರೆಗೆ ಲಾಕ್‍ಡೌನ್ ವಿಸ್ತರಣೆ ಮಾಡಲಾಗಿದೆ. ಈ ಹಿಂದಿನ ಲಾಕ್‍ಡೌನ್ ಮಾರ್ಗಸೂಚಿಗಳೇ ಮುಂದುವರಿಯುತ್ತವೆ ಎಂದು ಸಿಎಂ ಸ್ಪಷ್ಟಪಡಿಸಿದರು.

ಇನ್ನು ಜನರು ಭಯಗೊಂಡಿರುವ ಬ್ಲ್ಯಾಕ್​​ ಫಂಗಸ್ ರೋಗಕ್ಕೆ ‌ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡುತ್ತೇವೆ. ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಿದ್ದೇವೆ ಎಂದು ಸಿಎಂ ಘೋಷಿಸಿದರು. ಹಿಂದಿನ ಮಾರ್ಗಸೂಚಿ ನಿಯಮಗಳೇ ಮುಂದುವರಿಯಲಿವೆ ಎಂದು ಬಿಎಸ್​ವೈ ತಿಳಿಸಿದರು. ಬೆಳಗ್ಗೆ 10 ಗಂಟೆ ಬಳಿಕ ಮನೆಯಿಂದ ಹೊರಬರದೇ ಲಾಕ್​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು ಎಂದು ಮನವಿ ಮಾಡಿಕೊಂಡರು.

ಬೆಳಗ್ಗೆ 10 ಗಂಟೆ ನಂತರ ಸಹ ಜನ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. 9 ಗಂಟೆಗೆ ಮನೆಗೆ ಸೇರಬೇಕು, 10 ಗಂಟೆ ಬಳಿಕ ಯಾರೂ ಸಂಚರಿಸಕೂಡದು ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಬೆಳಗ್ಗೆ 10 ಗಂಟೆ ಬಳಿಕ ಯಾರೇ ಓಡಾಡಿದರೂ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ. ಈ ಕುರಿತು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.

ಇನ್ನು ಈಗ ಜಾರಿಯಲ್ಲಿರುವ ಬೆಳಗ್ಗೆ 6ರಿಂದ ಬೆಳಗ್ಗೆ 10 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮುಂದುವರೆಯಲಿದೆ. ಈಗ ಜಾರಿಯಲ್ಲಿರುವ ಎಲ್ಲಾ ಲಾಕ್​ಡೌನ್​ ನಿಯಮಗಳೂ ಜೂನ್​ 7ರವರೆಗೆ ಮುಂದುವರೆಯಲಿದೆ.  ಅನುಮತಿ ನೀಡಿರುವ ಕ್ಷೇತ್ರಗಳ ನೌಕರರು, ವ್ಯಾಕ್ಸಿನ್​​ ಪಡೆಯುವವರು, ತುರ್ತು  ಕಾರಣಗಳಿರುವವರು ಮಾತ್ರ ಸಂಚರಿಸಲು ಅನುಮತಿ ನೀಡಲಾಗಿದೆ ಎಂದರು.

ಜೂನ್​​ 7ರವರೆಗೆ ಬಸ್​​, ಮೆಟ್ರೋ ಸಂಚಾರ ಸಂಪೂರ್ಣ ಬಂದ್​​​ ಇರಲಿದೆ. ಮಾಲ್​​, ಚಿತ್ರಮಂದಿರಗಳು, ಪಾರ್ಕ್​ಗಳು, ಈಜುಕೊಳಗಳನ್ನು ತೆರೆಯುವಂತಿಲ್ಲ. ಧಾರ್ಮಿಕ ಕಾರ್ಯಗಳಾದ ಜಾತ್ರೆ, ಮಹೋತ್ಸವಗಳು, ದೇವರ ಉತ್ಸವಗಳು, ದೇವಸ್ಥಾನಗಳು, ಧಾರ್ಮಿಕ ಸ್ಥಳಗಳ ಮೇಲಿನ ನಿರ್ಬಂಧ ಮುಂದುವರಿಯಲಿದೆ.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ