Vijayapatha – ವಿಜಯಪಥ
Saturday, November 2, 2024
NEWSನಮ್ಮರಾಜ್ಯರಾಜಕೀಯ

ಶವ ಸಾಗಿಸುವ ಆಂಬುಲೆನ್ಸ್‌ ಸೇವೆ ಉಚಿತ : ಕಂದಾಯ ಸಚಿವ ಅಶೋಕ್​

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಶವಗಳನ್ನು ಸಾಗಿಸಲು ಆಂಬುಲೆನ್ಸ್​ ಸೇವೆಯನ್ನು ಉಚಿತವಾಗಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಜತೆಗೆ ರೋಗಿಗಳನ್ನು ಸಾಗಿಸಲೂ ಬೇಕಾಬಿಟ್ಟಿ ಹಣ ಕೇಳುವಂತಿಲ್ಲ. ಆಂಬುಲೆನ್ಸ್​​ ಸೇವೆಗೂ ಸರ್ಕಾರ‌ ದರ ನಿಗದಿ ಮಾಡಿದೆ ಎಂದು ಕಂದಾಯ ಸಚಿವ ಆರ್​.ಅಶೋಕ್​ ತಿಳಿಸಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ವಿಧಾನಸೌಧದಲ್ಲಿ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ಶವ ಸಾಗಿಸುವ ಆಂಬುಲೆನ್ಸ್‌ ಸೇವೆಯನ್ನು ಉಚಿತವಾಗಿ ನೀಡಲಾಗುವುದು. ಯಾರೂ ಕೂಡ ಹಣ ಪಡೆಯುವಂತಿಲ್ಲ. ಅಸ್ಥಿ ನೀಡುವಾಗಲೂ ಹಣ ಪಡೆಯುವಂತಿಲ್ಲ. ಚಾಲಕರು ಹಣ ಪಡೆದರೆ ಮೂರು ವರ್ಷ ಡ್ರೈವಿಂಗ್ ಲೈಸೆನ್ಸ್ ರದ್ದು ಮಾಡಲಾಗುವುದು ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದರು.

ಇನ್ನು ಸಭೆಯಲ್ಲಿ ಮುಖ್ಯವಾಗಿ ಬ್ಲ್ಯಾಕ್ ಫಂಗಸ್, ರೆಮ್‌ಡಿಸಿವಿರ್ ಔಷಧದ ಬಗ್ಗೆ ಚರ್ಚೆ ನಡೆಸಲಾಯಿತು. ವಿವಿಧ ಅಧಿಕಾರಿಗಳ ಜತೆ ಚರ್ಚಿಸಿದ್ದೇನೆ. ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ 1,050 ಡೋಸ್ ಔಷಧ ಬಂದಿದೆ. ರಾಜ್ಯದಲ್ಲಿ ರೆಮ್‌ಡಿಸಿವಿರ್ ಕೊರತೆ ಸದ್ಯಕ್ಕಿಲ್ಲ, ಕೇಳಿದಷ್ಟು ರೆಮ್‌ಡಿಸಿವಿರ್ ಕೊಡುವ ವ್ಯವಸ್ಥೆ ಇದೆ ಎಂದು ತಿಳಿಸಿದರು.

ಮೊದಲು18ರಿಂದ 20ಸಾವಿರ ರೆಮ್‌ಡಿಸಿವಿರ್ ಅಗತ್ಯವಿತ್ತು. ಈಗ 5 ಸಾವಿರ ರೆಮ್‌ಡಿಸಿವಿರ್ ಮಾತ್ರ ಬೇಕಿದೆ. ದಿನ‌‌ಕಳೆದಂತೆ ಇದರ ಬೇಡಿಕೆ ಕಡಿಮೆ ಆಗುತ್ತಿದೆ. ರಾಜ್ಯದಲ್ಲಿ ಈವರೆಗೆ 150 ಮಂದಿ ಬ್ಲ್ಯಾಕ್ ಫಂಗಸ್ ಕಾಯಿಲೆಗೆ ತುತ್ತಾಗಿದ್ದು, ಅವರಿಗೆ ಅಗತ್ಯ ಚಿಕಿತ್ಸೆ ಕೊಡಲಾಗುತ್ತದೆ. ಫಂಗಸ್ ಔಷಧ ಸಂಬಂಧ ಕೇಂದ್ರ ಸಚಿವ ಸದಾನಂದಗೌಡರಿಗೂ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

ರಾಜ್ಯದಲ್ಲಿ ಆಕ್ಸಿಜನ್ ಬೆಡ್ ಕೊರತೆ ಎಲ್ಲೂ ಇಲ್ಲ, ಆಕ್ಸಿಜನ್ ಸಾಂಧ್ರಕ ಬೆಡ್​ಗಳು ಖಾಲಿ ಇವೆ. ಬೆಡ್ ಸಮಸ್ಯೆ ಸದ್ಯಕ್ಕೆ ಬಗೆಹರಿದಿದೆ, ಒತ್ತಡ ಕಡಿಮೆ ಆಗಿದೆ. ಟೆಸ್ಟಿಂಗ್ ಕಡಿಮೆ‌ ಮಾಡಿರುವ ಆರೋಪವನ್ನು ತಳ್ಳಿ ಹಾಕಿದ ಅಶೋಕ್​​ ಹಳ್ಳಿ ಹಳ್ಳಿಗೆ ತೆರಳಿ ಟೆಸ್ಟ್ ಮಾಡಿಸಲು ತೀರ್ಮಾನಿಸಿರುವುದಾಗಿ ತಿಳಿಸಿದರು.

ಜಿಲ್ಲಾಧಿಕಾರಿಗಳು ತಂಡ ಮಾಡಿ‌ ಕಳಿಸಲಿದ್ದು, ಪ್ರತಿ ಹಳ್ಳಿಗೆ ಎರಡು ದಿನಕ್ಕೊಮ್ಮೆ ತಂಡ ಹೋಗಲಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಿದೆ. ವೈದ್ಯಾಧಿಕಾರಿಗಳೇ ಹಳ್ಳಿಗೆ ನಡೆಯಿರಿ ಎಂಬ ಯೋಜನೆ ಮಾಡಲಿದ್ದೇವೆ ಎಂದರು.

ಸಾವಿನ‌ ವಿಚಾರದಲ್ಲಿ ರಾಜಕೀಯ ಮಾಡಬಾರದು. ರಾಜಕೀಯ ಮಾಡಿದವರು ಮೂಲೆ ಸೇರಿದ್ದಾರೆ. ವಿಪಕ್ಷ ನಾಯಕರು ಅಧಿಕಾರಿಗಳ ಸಭೆ ನಡೆಸಲು ಬರುವುದಿಲ್ಲ. ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೇ ಈ ಪತ್ರ ಬರೆದಿದ್ದರು. ಪತ್ರ ಬರೆದು ಮಾಹಿತಿ ಪಡೆಯಲಿ ಎಂದು ವಿಪಕ್ಷ ನಾಯಕರಿಗೆ ತಿರುಗೇಟು ನೀಡಿದರು.

ಇನ್ನು ಒಂದು ಸಾವಿರ ಅನಾಥ ಶವಗಳ ಅಸ್ಥಿ ಸರ್ಕಾರದ ಬಳಿ ಇದೆ. ಮೃತರ ಸಂಬಂಧಿಕರು ಮೊಬೈಲ್ ಸ್ವಿಚ್ ಆಫ್ ಇದೆ. ನಾವು ಅಸ್ಥಿ ತೆಗೆದುಕೊಳ್ಳಲು ಮನವಿ ಮಾಡುತ್ತಿದ್ದೇವೆ. ಆದರೆ ಅವರವರ ಪರಿಸ್ಥಿತಿಯಿಂದ ಅಸ್ಥಿ ಪಡೆಯುತ್ತಿಲ್ಲ. ಹೀಗಾಗಿ ಸರ್ಕಾರವೇ ಸಂಸ್ಕಾರ ಮಾಡಲು ತೀರ್ಮಾನಿಸಿದೆ.

ಕಂದಾಯ ಇಲಾಖೆ ಗೌರವಯುತವಾಗಿ ಸಂಸ್ಕಾರ ಮಾಡಲಿದೆ. ಬಡವ ಬಲ್ಲಿದ ಎಂದು ಭೇದ ಭಾವ ಮಾಡಲ್ಲ. ಪಂಚಭೂತಗಳಲ್ಲಿ ಲೀನವಾಗುವಂತೆ ನೀರಿನಲ್ಲಿ ಸಂಪ್ರದಾಯಬದ್ಧವಾಗಿ ವಿಸರ್ಜನೆ ಮಾಡಲಿದ್ದೇವೆ ಎಂದು ಅಶೋಕ್‌ ತಿಳಿಸಿದರು.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ