ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ಕೊರೊನಾ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಈಗಾಗಲೇ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಇದರ ಬೆನ್ನಲ್ಲೇ 12ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಬೇಕೆ, ನಡೆಸಬೇಕೆ ಎಂಬ ಬಗ್ಗೆ ಮಹತ್ವದ ಸಭೆ ನಡೆಯಲಿದೆ.
ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಕ್ರಿವಾಲ್ ಅವರ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಸಚಿವರಾದ ರಾಜನಾಥ್ ಸಿಂಗ್, ಸ್ಮೃತಿ ಇರಾನಿ ಸೇರಿದಂತೆ ಎಲ್ಲಾ ರಾಜ್ಯಗಳ ಶಿಕ್ಷಣ ಸಚಿವರು ಕೂಡ ಭಾಗವಹಿಸಲಿದ್ದಾರೆ.
ಕರ್ನಾಟಕ, ಮಹಾರಾಷ್ಟ್ರ, ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೊರೊನಾ ಸೋಂಕು ತೀವ್ರವಾಗುತ್ತಿದ್ದು, ಲಾಕ್ ಡೌನ್ ಜಾರಿಯಲ್ಲಿದೆ. ಕೊರೊನಾ ಸೋಂಕಿನ ಜೊತೆಗೆ ಬ್ಲ್ಯಾಕ್ ಹಾಗೂ ವೈಟ್ ಫಂಗಸ್ ಸೋಂಕು ಪತ್ತೆಯಾಗುತ್ತಿದೆ. ಹೀಗಾಗಿ ಮಹತ್ವದ ಆದೇಶ ಹೊರ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.