CrimeNEWSನಮ್ಮರಾಜ್ಯ

ಕೊರೊನಾ ಸೋಂಕು: ಹೆದರಿದ ಸಾರಿಗೆ ನೌಕರ ಸೇರಿ ಇಬ್ಬರು ಆತ್ಮಹತ್ಯೆಗೆ ಶರಣು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು, ಶಿವಮೊಗ್ಗ: ಪ್ರತ್ಯೇಕ ಘಟನೆಗಳೆರಡರಲ್ಲಿ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮತ್ತು ಪಾಸಿಟಿವ್‌ ಇರಬಹುದು ಎಂದು ಹೆದರಿದ ಸಾರಿಗೆ ನೌಕರ ಸೇರಿ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕೊರೊನಾ ಸೋಂಕಿಗೆ ಹೆದರಿದ ವ್ಯಕ್ತಿಯೊಬ್ಬ ಕಾಲುವೆಗೆ ಹಾರಿ ಜೀವ ಕಳೆದುಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ‌ ಕಾರ್ಗಲ್ ಬಳಿ ಶನಿವಾರ ನಡೆದಿದ್ದರೆ, ಮೈಸೂರಿನಲ್ಲಿ ಕೆಎಸ್‌ಆರ್‌ಟಿ ನೌಕರನೊಬ್ಬ ಕೊರೊನಾ ಪಾಸಿಟಿವ್‌ ಇರಬಹುದು ಎಂದು ಅನುಮಾನಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಲಿಂಗೇಗೌಡ (68) ಕಾರ್ಗಲ್ ಬಳಿ ಆತ್ಮಹತ್ಯೆ ಮಾಡಿಕೊಂಡವರು. ಕೆಪಿಸಿ ಮಾಜಿ ಉದ್ಯೋಗಿಯಾಗಿದ್ದ ಲಿಂಗೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಈ ಕಾರಣ ಕೋವಿಡ್ ಟೆಸ್ಟ್ ಗೆ ಒಳಗಾಗಿದ್ದರು. ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆ ಶನಿವಾರ ಆಸ್ಪತ್ರೆಗೆ ದಾಖಲಾಗಲು ವೈದ್ಯರು ಸೂಚಿಸಿದ್ದರು. ಆಸ್ಪತ್ರೆಗೆ ದಾಖಲಾಗಲು ಹೆದರಿದ ಅವರು ಕಾರ್ಗಲ್ ನ ಚೈನಾ ಗೇಟ್ ಬಳಿ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನು ಮೈಸೂರಿನಲ್ಲಿ ಕೆಎಸ್‌ಆರ್‌ಟಿಸಿಯ ನೌಕರ, ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಸಾಸನೂರ್‌ ಗ್ರಾಮದ ರಾಮಣ್ಣಗೌಡ (31) ತಾನಿದ್ದ ಬಾಡಿಗೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಾಡಿಗೆ ಮನೆಯಲ್ಲಿ ಒಬ್ಬರೆ ವಾಸವಾಗಿದ್ದರು. ಆನಾರೋಗ್ಯ ಕಾರಣ ನನಗೆ ಸೋಂಕು ಇರಬಹುದು ಎಂದು ಭಯ ಮತ್ತು ಅನುಮಾನಗೊಂಡು ಮನೆಯ ಕಿಟಕಿಯ ಸರಳಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ