ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಪಡಿತರ ಚೀಟಿ ಹೊಂದಿದವರಿಗೆ ಯಾವುದೇ ಕಾರಣಕ್ಕೂ ನ್ಯಾಯಬೆಲೆ ಅಂಗಡಿಗಳು ಪಡಿತರ ನಿರಾಕರಿಸುವಂತಿಲ್ಲ ಎಂದು ಆಹಾರ ಇಲಾಖೆ ತಿಳಿಸಿದೆ.
ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ವಲಸೆ ಹೋಗಿರುವ ಪಡಿತರ ಚೀಟಿದಾರರು ಪೋರ್ಟಬಿಲಿಟಿ ಯೋಜನೆಯಡಿ ಯಾವುದೇ ಸ್ಥಳದಲ್ಲಿನ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆದುಕೊಳ್ಳಲು ಅವಕಾಶ ಇದೆ.
ನ್ಯಾಯಬೆಲೆ ಅಂಗಡಿ ಮಾಲೀಕರು ಪಡಿತರ ನೀಡಲು ನಿರಾಕರಿಸಿದ್ದಲ್ಲಿ ಕೇಂದ್ರ ಸರ್ಕಾರದ ಸಹಾಯವಾಣಿ 14445, ರಾಜ್ಯ ಸರ್ಕಾರದ ಸಹಾಯವಾಣಿ 1967 ಕ್ಕೆ ದೂರು ಸಲ್ಲಿಸಬಹುದಾಗಿದೆ. ಪಡಿತರ ಚೀಟಿ ಹೊಂದಿದ್ದವರು ತಾವು ಇರುವ ಸ್ಥಳದಲ್ಲಿ ಪಡಿತರ ಚೀಟಿ, ಆಧಾರ್ ಸಂಖ್ಯೆ ನೀಡಿ ಬಯೋಮೆಟ್ರಿಕ್ ನಲ್ಲಿ ಹೆಬ್ಬೆಟ್ಟಿನ ಗುರುತು ನೀಡಿ ಪಡಿತರ ಪಡೆಯಬಹುದು ಎಂದು ತಿಳಿಸಿದೆ.