Breaking NewsNEWSನಮ್ಮರಾಜ್ಯ

ಕೊರೊನಾದಿಂದ ಮೃತಪಟ್ಟ ಶಿಕ್ಷಕರಿಗೆ ಕನಿಷ್ಠ 50 ಲಕ್ಷ ರೂ. ಪರಿಹಾರ ನೀಡಿ: ಎಚ್‌ಡಿಕೆ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೊರೊನಾ ಸೋಂಕಿನಿಂದ ಮೃತಪಟ್ಟ ಎಲ್ಲ ಶಿಕ್ಷಕರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ ಕನಿಷ್ಠ 50 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಕುರಿತು ಸೋಮವಾರ ಬೆಳಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಚುನಾವಣೆ ಕರ್ತವ್ಯದಲ್ಲಿ ದುಡಿದ ಮತ್ತು ವಿದ್ಯಾಗಮ ಯೋಜನೆ ಮೂಲಕ ಪಾಠ ಮಾಡಿದ ಕಲ್ಯಾಣ ಕರ್ನಾಟಕದ 145 ಶಿಕ್ಷಕರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಉಳಿದ ಕಡೆ ಮೃತಪಟ್ಟವರ ಲೆಕ್ಕ ಸಿಗುತ್ತಿಲ್ಲ. ಮೃತಪಟ್ಟ ಎಲ್ಲ ಶಿಕ್ಷಕರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ ಕನಿಷ್ಠ 50 ಲಕ್ಷ ರೂ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸದ್ದಾರೆ.

145ಕ್ಕೂ ಹೆಚ್ಚು ಶಿಕ್ಷಕರು ಹೈದರಾಬಾದ್-ಕರ್ನಾಟಕದಲ್ಲಿ ಅಂದರೆ ಕಲ್ಯಾಣ ಕರ್ನಾಟಕದಲ್ಲಿ ಸಾವನ್ನಪ್ಪಿದ್ದಾರೆ. ಸರ್ಕಾರ ಕೊಟ್ಟ ಆದೇಶ ಪಾಲಿಸಿ ರಾಜ್ಯದಾದ್ಯಂತ ಇನ್ನೂ ಹಲವು ಶಿಕ್ಷಕರ ಪ್ರಾಣ ಹೋಗಿದೆ ಎಂದು ತಿಳಿಸಿದ್ದಾರೆ.

ಎಲ್ಲ ಶಿಕ್ಷಕರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಬೇಕು. ಅವರನ್ನು ಚುನಾವಣೆ ಹಾಗೂ ಮತ್ತ್ಯಾವುದೋ ಕಾರಣಕ್ಕೆ ನಿಯೋಜಿಸಿದ ಸರ್ಕಾರವೇ ಈ ಸಾವುಗಳ ಸಂಪೂರ್ಣ ಹೊಣೆ ಹೊರಬೇಕು. ಇನ್ನೂ ಸಾವಿರಾರು ಶಿಕ್ಷಕರು ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಹೇಳಿದ್ದಾರೆ.

ದೇಶದ ಭವಿಷ್ಯ ಕಟ್ಟುವ ಶಿಕ್ಷಕರ ಬಗ್ಗೆ ಸರ್ಕಾರದ ಉಡಾಫೆ ಹಾಗೂ ದಿವ್ಯ ನಿರ್ಲಕ್ಷ್ಯ ಧೋರಣೆ ಬಗ್ಗೆ ನನ್ನ ಧಿಕ್ಕಾರವಿದೆ ಎಂದಿರುವ ಅವರು, ಸರ್ಕಾರ ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...