NEWSನಮ್ಮರಾಜ್ಯರಾಜಕೀಯ

ರಾಜ್ಯ ಬಿಜೆಪಿಯಲ್ಲಿ ಒಳಬೇಗುದಿ: ಸಿಎಂ ಬದಲಾವಣೆಗೆ ಹೆಚ್ಚಾಯಿತ ಒತ್ತಡ?

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕಿನ ಅಬ್ಬರದ ನಡುವೆಯೇ ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಗುಸುಗುಸು ಕೇಳಿ ಬರುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಇನ್ನೆರಡು ವರ್ಷದ ಅಧಿಕಾರವಧಿ ಪೂರೈಸಬೇಕಾಗಿದೆ.

ಸರ್ಕಾರ ಮತ್ತು ಪಕ್ಷದ ನಾಯಕರು ನಡುವಿನ ಅಂತರ, ಸಂಪುಟ ಸಚಿವರ ಒಳಜಗಳ ಹಾಗೂ ಸಿಎಂ ಪಟ್ಟಕ್ಕಾಗಿ ದೆಹಲಿಯಲ್ಲಿ ವಿವಿಧ ನಾಯಕರು ಲಾಬಿ ನಡೆಸುತ್ತಿದ್ದಾರೆ ಎಂದು ಬಲ್ಲ ಮೂಲಗಳು ಹೇಳುತ್ತಿವೆ. ಈ ನಡುವೆ ಹೈಕಮಾಂಡ್ ಒಪ್ಪಿದರೇ ರಾಜ್ಯದಲ್ಲಿ ಸಿಎಂ ಬದಲಾವಣೆ ಖಚಿತ ಎನ್ನುತ್ತಿವೆ ಇದೇ ಮೂಲಗಳು.

ಸಿಎಂ ಹುದ್ದೆ ಆಕಾಂಕ್ಷಿಗಳು ಮತ್ತವರ ತಂಡ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಡಿಸಿಎಂ ಲಕ್ಷ್ಮಣ ಸವದಿ, ಬಸವರಾಜ ಬೊಮ್ಮಾಯಿ ಮತ್ತು ಮುರುಗೇಶ್ ನಿರಾಣಿ ಅವರು ನಾಯಕತ್ವ ಬದಲಾವಣೆ ಸಂಬಂಧ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ. ಆದರೆ ಕೊರೊನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಸದ್ಯಕ್ಕೆ ನಾಯಕತ್ವ ಬದಲಾವಣೆ ಸಾಧ್ಯವಿಲ್ಲ ಎಂದು ಪಕ್ಷದ ನಾಯಕರು ಮಾಧ್ಯಮಗಳ ಮುಂದೆ ಹೇಳಿಕೆ ನೀಡುತ್ತಲೇ ಇದ್ದಾರೆ. ಆದರೆ ಒಳಗೊಳಗೆ ಬದಲಾವಣೆಯ ಮಾತು ತೇಲಿ ಬರುತ್ತಲೇ ಇದೆ.

ರಾಜ್ಯ ಬಿಜೆಪಿಯ ಹಲವು ಶಾಸಕರ ಹೆಸರು ಮುಖ್ಯಮಂತ್ರಿ ಹುದ್ದೆಗೆ ಕೇಳಿ ಬರುತ್ತಿವೆ. ಆದರೇ ಇದೆಲ್ಲವನ್ನು ತುಂಬ ಹತ್ತಿರದಿಂದಲೇ ಗಮನಿಸುತ್ತಿರುವ ಬಿಎಸ್‌ವೈ ಅವರು ತುಂಬ ಬೇಜಾರಾಗಿದ್ದು, ನನ್ನ ಈಗಾಗಲೇ ನನ್ನ ಕೈ ಕಟ್ಟಿಹಾಕಿ ಇವರ ಇಷ್ಟ ಬಂದಂತೆ ಆಡಳಿತ ನಡೆಸುತ್ತಿದ್ದಾರೆ. ಆದರೆ, ಇದನ್ನು ಇನ್ನು ಎಷ್ಟು ದಿನ ಸಹಿಸಿಕೊಂಡು ಕೂರಲು ಸಾಧ್ಯವಿಲ್ಲ. ಹೀಗಾಗಿ ನಾನು ರಾಜ್ಯದ ಜನರಿಗೆ ಏನಾದರೊಂದು ಒಳ್ಳೆ ಕೆಲಸ ಮಾಡುವಂತ ನಿರ್ಧಾರ ತೆಗೆದುಕೊಳ್ಳಬೇಕು ಎಂದು ತಮ್ಮ ಅತ್ಯಾಪ್ತರ ಬಳಿ ಹೇಳಿಕೊಂಡಿರುವುದು ಈಗ ಗುಟ್ಟಾಗಿ ಉಳಿದಿಲ್ಲ.

ಈ ನಡುವೆ ಸರ್ಕಾರ ಕೋವಿಡ್‌ 19 ವಿರುದ್ಧ ಹೋರಾಟ ನಡೆಸುತ್ತಿದ್ದರೆ, ಅತ್ತ ಕರ್ನಾಟಕ ಬಿಜೆಪಿ ತನ್ನದೇ ಪಕ್ಷದ ನಾಯಕರ ವಿರುದ್ಧ ಸಮರ ಸಾರಿದೆ. ಇನ್ನು ಕೋವಿಡ್ ರೋಗ ನಿಯಂತ್ರಿಸುವ ಉಸ್ತುವಾರಿ ಸಚಿವರ ನಡುವೆ ದ್ವೇಷ ಮತ್ತು ಶೀತಲ ಸಮರಗಳು ಆರಂಭವಾಗಿದ್ದು, ಅವು ಅತಿರೇಖಕ್ಕೆ ಹೋಗುತ್ತಿವೆ. ಇದೆಲ್ಲದರ ನಡುವೆಯೂ ಯಡಿಯೂರಪ್ಪ ಅವರನ್ನು ಬದಲಾಯಿಸುವುದು ಉತ್ತಮ ಎಂದು ಕೇಂದ್ರ ನಾಯಕರಿಗೆ ಮನವರಿಕೆ ಮಾಡಿಕೊಡಬೇಕಾದ ಅಗತ್ಯವಿದೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಯಡಿಯೂರಪ್ಪ ವಿರುದ್ಧ ಜಗಳ, ದೂರು ಸೇರಿದಂತೆ ಹಲವು ಆರೋಪಗಳು ಕೇಳಿ ಬಂದಿದ್ದರೂ ಕೊರೊನಾ ಸಾಂಕ್ರಾಮಿಕ ಒಂದು ತಹಬದಿಗೆ ಬರುವವರೆಗೂ ಯಾವುದೇ ಬದಲಾವಣೆ ಸಾಧ್ಯವಿಲ್ಲ ಎಂದು ಕೇಂದ್ರ ನಾಯಕರು ಹೇಳಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.

ಯಡಿಯೂರಪ್ಪ ಅವರಿಗೆ ವಯಸ್ಸಾಗಿದ್ದು ಕೂತರೆ ಎಳುವುದಕ್ಕೂ ಎದ್ದರೆ ಕೂರುವುದುಕ್ಕೆ ಕಷ್ಟಪಡುವ ಅವರು, ಜತೆಗೆ ಅವರ ಪುತ್ರ ವಿಜಯೇಂದ್ರ ವಿರುದ್ಧ ಕೇಳಿ ಬಂದಿರುವ ಭ್ರಷ್ಟಾಚಾರ ಆರೋಪಗಳು. ಈ ಎಲ್ಲದರ ನಡುವೆಯೂ ಸದ್ಯದ ಪರಿಸ್ಥಿತಿಯಲ್ಲಿ ಯಡಿಯೂರಪ್ಪ ಅವರ ಬದಲಿಗೆ ಸೂಕ್ತರು ಯಾರೂ ಎಂಬ ಲೆಕ್ಕಚಾರದಲ್ಲಿ ಕೇಂದ್ರ ನಾಯಕರು ತೊಡಗಿರುವುದರಿಂದ ಯಡಿಯೂರಪ್ಪ ಅವರನ್ನು ಶೀಘ್ರದಲ್ಲೇ ಬದಲಿಸಲು ಸಾಧ್ಯವಿಲ್ಲ ಎಂದು ಕೇಂದ್ರ ನಾಯಕರು ಹೇಳುತ್ತಿರುವುದಾಗಿ ಮೂಲಗಳು ತಿಳಿಸಿವೆ.

Editordev
the authorEditordev

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...