Vijayapatha – ವಿಜಯಪಥ
Friday, November 1, 2024
Breaking NewsNEWSನಮ್ಮರಾಜ್ಯ

ಸಾರಿಗೆ ನೌಕರರ ಏಪ್ರಿಲ್‌, ಮೇ ತಿಂಗಳ ವೇತನ ಬಿಡುಗಡೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಏಪ್ರಿಲ್‌ ತಿಂಗಳ ವೇತನ ಇನ್ನು ಬರಲಿಲ್ಲ ಎಂದು ಕಣ್ಣು ಬಾಯಿ ಬಿಡುತ್ತಿರುವ ಸಾರಿಗೆ ಸಿಬ್ಬಂದಿಗೆ ಸರ್ಕಾರ ಸಿಹಿ ಸುದ್ದಿ ನೀಡಿದ್ದು ಎರಡು ತಿಂಗಳ ವೇತನ ಬಿಡುಗಡೆ ಮಾಡಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಕೋರಿಕೆ ಮೇರೆಗೆ ಸರ್ಕಾರ ಸಾರಿಗೆ ಸಂಸ್ಥೆಗಳ ಸಿಬ್ಬಂದಿಗೆ 2 ತಿಂಗಳ ವೇತನಕ್ಕಾಗಿ 325 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಅದರಲ್ಲಿ ಏಪ್ರಿಲ್‌ ತಿಂಗಳ ವೇತನಕ್ಕಾಗಿ ಶೇ.50ರಷ್ಟು ಮೂಲ ವೇತನ ಮತ್ತು 15 ದಿನಗಳ ತುಟ್ಟಿಭತ್ಯೆಯನ್ನು ಹಾಗೂ ಮೇ ತಿಂಗಳ ಶೇ. 75ರಷ್ಟು ಮೂಲ ವೇತನ ಮತ್ತು ತುಟ್ಟಿಭತ್ಯಯನ್ನು ಸರ್ಕಾರ ಬಿಡುಗಡೆ ಮಾಡಿ ಅದೇಶಿಸಿದೆ.

ಏಪ್ರಿಲ್‌ ಮತ್ತು ಮೇ ಈ 2 ತಿಂಗಳ ಸಂಬಳದ ಒಟ್ಟು ಮೊತ್ತ ಸುಮಾರು 650 ಕೋಟಿ ರೂ.ಗಳು. ಆದರೆ ಸರ್ಕಾರ ಬಿಡುಗಡೆ ಮಾಡಿರುವುದು 325 ಕೋಟಿ ರೂ.ಗಳು. ಹೀಗಾಗಿ ಸಾರಿಗೆ ನೌಕರರಿಗೆ ಏಪ್ರಿಲ್‌ ತಿಂಗಳಲ್ಲಿ ಮೂಲ ವೇತನದ ಅರ್ಧ ಮತ್ತು 15 ದಿನಗಳ ತುಟ್ಟುಭತ್ಯೆ ಯನ್ನು ಮಾತ್ರ ಬಿಡುಗಡೆ ಮಾಡಿದೆ.

ಇನ್ನು ಮೇ ತಿಂಗಳ ಶೇ.75ರಷ್ಟು ಮೂಲ ವೇತನದ ಜತೆಗೆ ತುಟ್ಟಿಭತ್ಯೆಯನ್ನು ಸಾರಿಗೆ ಸಂಸ್ಥೆಗಳ ಸಿಬ್ಬಂದಿಗೆ ಬಿಡುಗಡೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.

ಇದರಿಂದಾಗಿ ಸಾರಿಗೆ ಸಿಬ್ಬಂದಿಯ ಒಟ್ಟು ಎರಡು ತಿಂಗಳಿನ ಅಂದರೆ, ಏಪ್ರಿಲ್‌ನಲ್ಲಿ ಶೇ. 50ರಷ್ಟು ಮತ್ತು ಮೇ ತಿಂಗಳಿನಲ್ಲಿ ಶೇ. 75 ರಷ್ಟು ಮೂಲ ವೇತನ ಮತ್ತು ತುಟ್ಟಿಭತ್ಯೆ ಸೇರಿ 325 ಕೋಟಿ ರೂಪಾಯಿಗಳನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದಂತ್ತಾಗಿದೆ.

ಉಳಿದ  ಏಪ್ರಿಲ್‌ ತಿಂಗಳ ಶೇ. 50 ಮತ್ತು ಮೇ ತಿಂಗಳ 25 ರಷ್ಟು ವೇತನವನ್ನು ಸಾರಿಗೆ ಸಂಸ್ಥೆಗಳೇ ತಮ್ಮ ಸಂಪನ್ಮೂಲಗಳಿಂದ ಭರಿಸಬೇಕಿದೆ. ಇನ್ನು ಕೆಎಸ್ಆರ್ಟಿಸಿ, ಬಿಎಂಟಿಸಿ, ಈಶಾನ್ಯ ಮತ್ತು ವಾಯವ್ಯ ಸಾರಿಗೆ ಸಂಸ್ಥೆಗಳ ಸುಮಾರು 1.30 ಲಕ್ಷ ಸಿಬ್ಬಂದಿಗೆ ವೇತನ ಪಾವತಿಗೆ ಇದರಿಂದ ಸಾಧ್ಯವಾದಂತಾಗಿದೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ