Vijayapatha – ವಿಜಯಪಥ
Saturday, November 2, 2024
CrimeNEWSನಮ್ಮರಾಜ್ಯ

ಹುಂಡಿ ಕಾಣಿಕೆ ಖ್ಯಾತಿಯ ವೈದ್ಯ ಡಾ.ಅಶೋಕ ರಾಮಣ್ಣ ಇನ್ನಿಲ್ಲ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬಾಗಲಕೋಟೆ: ಹುಂಡಿ ಕಾಣಿಕೆ ವೈದ್ಯರೆಂದು ಪ್ರಖ್ಯಾತಿ ಹೊಂದಿದ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಿರಿಯ ವೈದ್ಯ ಡಾ.ಅಶೋಕ ರಾಮಣ್ಣ ಸೋನ್ನದ (83) ವಯೋಸಹಜವಾಗಿ ನಿಧನವಾಗಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಮುಧೋಳ ತಾಲೂಕು ಭಂಟನೂರಿನ ಡಾ.ಅಶೋಕ ರಾಮಣ್ಣ ಸೊನ್ನದ, ಅಮೆರಿಕದ ಮಿಚಿಗನ್‌ ರಾಜ್ಯದ ಸಮುದಾಯ ಆರೋಗ್ಯ ಕೇಂದ್ರದಲ್ಲಿ 38 ವರ್ಷಗಳು ತಜ್ಞ ವೈದ್ಯರಾಗಿ ಸೇವೆ ಸಲ್ಲಿಸಿದ ಬಳಿಕ 2010ರಲ್ಲಿ ಭಾರತಕ್ಕೆ ಮರಳಿದ್ದರು ಆಗಿನಿಂದ ಹಳೆ ಬಾಗಲಕೋಟೆಯಲ್ಲಿ ತಾಯಿ ಪಾರ್ವತಿಬಾಯಿ ಹೆಸರಿನಲ್ಲಿ ಕ್ಲಿನಿಕ್ ನಡೆಸುತ್ತಿದ್ದರು.

ಭಂಟನೂರಿನ ರಾಮಣ್ಣ ಸೊನ್ನದ ಹಾಗೂ ಪಾರ್ವತಿ ಬಾಯಿ ದಂಪತಿಯ ಪುತ್ರ ಡಾ.ಅಶೋಕ ಬಾಗಲಕೋಟೆಯ ಸಕ್ರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿ, ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಪಿಯುಸಿ, ಹುಬ್ಬಳ್ಳಿಯ ಕಿಮ್ಸ್‌ನಲ್ಲಿ 1965ರಲ್ಲಿ ಎಂಬಿಬಿಎಸ್ ಮುಗಿಸಿದ್ದರು. ನಂತರ ಅಹಮದಾಬಾದ್‌ನಲ್ಲಿ ಎಂ.ಡಿ. ಮುಗಿಸಿದ ಡಾ. ಅಶೋಕ್, 1972ರಲ್ಲಿ ಅಮೆರಿಕಗೆ ತೆರಳಿ ಅಲ್ಲಿಯೇ ನೆಲೆ ನಿಂತಿದ್ದರು. ಅಮೆರಿಕ ಪ್ರಜೆ ಐಲಿನ್‌ ಅವರನ್ನು ಮದುವೆಯಾಗಿದ್ದು, ದಂಪತಿಗೆ ನಾಲ್ವರು ಮಕ್ಕಳಿದ್ದಾರೆ.

ಅಶೋಕ ಸೊನ್ನದ ಅವರ ಬಳಿ ಚಿಕಿತ್ಸೆ ಪಡೆಯಲು ಬಂದ ರೋಗಿಗಳಿಗೆ ಅವರ ಸೇವೆ ತೃಪ್ತಿಯಾದರೆ ಮಾತ್ರ ಕ್ಲಿನಿಕ್‌ನ ಪ್ರವೇಶ ದ್ವಾರದಲ್ಲಿ ಇಟ್ಟಿರುವ ಕಾಣಿಕೆ ಹುಂಡಿಗೆ ನಿಮ್ಮ ಕೈಲಾದಷ್ಟು ದುಡ್ಡು ಹಾಕಿ ಎಂದು ಸೂಚಿಸುತ್ತಿದ್ದ ಕಾರಣ ಅವರು ಹುಂಡಿ ಕಾಣಿಕೆ ವೈದ್ಯ ಎಂದು ಜನಪ್ರಿಯವಾಗಿದ್ದರು.

ಅವರ ಜನಸೇವೆಗೆ ಮೆಚ್ಚಿ 2020ರಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಇನ್ನು ಇವರ ಮನೆಯಲ್ಲಿ ಏಳು ಜನ ಪಿಎಚ್‌ಡಿ ಪದವೀಧರರಿದ್ದು ಡಾಕ್ಟರೇಟ್ ಕುಟುಂಬ ಎಂಬ ಗಿನ್ನಿಸ್ ದಾಖಲೆಯೂ ಇವರ ಕುಟುಂಬಕ್ಕಿದೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ