NEWSನಮ್ಮಜಿಲ್ಲೆ

ಪಿರಿಯಾಪಟ್ಟಣ : ಪೌರಕಾರ್ಮಿಕರಿಗೆ ಸುರಕ್ಷತಾ ಪರಿಕರ ವಿತರಣೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಪಿರಿಯಾಪಟ್ಟಣ : ಕೋವಿಡ್ ನಿಯಂತ್ರಣದಲ್ಲಿ ಸ್ವಚ್ಛತಾ ಕಾರ್ಯದ ಮೂಲಕ ಶ್ರಮಿಸುತ್ತಿರುವ ಪೌರ ಕಾರ್ಮಿಕರ ಕಾರ್ಯ ಶ್ಲಾಘನೀಯವಾದದ್ದು ಎಂದು ಪುರಸಭೆ ಅಧ್ಯಕ್ಷ ಮಂಜುನಾಥ್ ಸಿಂಗ್ ತಿಳಿಸಿದರು.

ಪಟ್ಟಣದ ಪುರಸಭೆಯಲ್ಲಿ ಪೌರಕಾರ್ಮಿಕರಿಗೆ ಸುರಕ್ಷತಾ ಪರಿಕರಗಳನ್ನು ವಿತರಿಸಿ ಮಾತನಾಡಿದರು.

ನಾಡಿನಾದ್ಯಂತ ಕೋವಿಡ್ ನಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ವಿಷಮ ಪರಿಸ್ಥಿತಿಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಅನೇಕ ಇಲಾಖೆಗಳು, ಸ್ವಯಂಸೇವಾ ಸಂಸ್ಥೆಗಳು ಬಹಳ ಶ್ರಮ ಪಡುತ್ತಿದ್ದಾರೆ. ಇದರಲ್ಲಿ ಪೌರಕಾರ್ಮಿಕ ನೌಕರರು ತಮ್ಮ ಪ್ರಾಣದ ಹಂಗು ತೊರೆದು ನೈರ್ಮಲೀಕರಣ ಕಾರ್ಯ ಮಾಡುತ್ತಿದ್ದಾರೆ ಎಂದರು.

ಔಷಧಿ ಸಿಂಪಡಣೆ, ಸೊಂಕಿತ ವ್ಯಕ್ತಿಗಳ ಯೋಗಕ್ಷೇಮ ವಿಚಾರಣೆ, ಸಮೀಕ್ಷೆ ಮಾಡುವುದು ಹೀಗೆ ಅನೇಕ ಜವಾಬ್ದಾರಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಆದ್ದರಿಂದ ಇವರ ಸೇವೆಯನ್ನು ನಾಗರಿಕ ಸಮಾಜ ಕಡೆಗಣನೆ ಮಾಡಬಾರದು ಗೌರವದಿಂದ ಸ್ಮರಿಸಬೇಕು ಎಂದರು.

ಸಫಾಯಿ ಕರ್ಮಚಾರಿ ಮೇಲ್ವಿಚಾರಣ ಸಮಿತಿ ಸದಸ್ಯ ಎಚ್.ಕೆ. ಮಹೇಶ್ ಮಾತನಾಡಿ ಯಾವುದೇ ವೃತ್ತಿಯ ಮೂಲಕ ವ್ಯಕ್ತಿಯ ಸ್ಥಾನಮಾನವನ್ನು ಅಳಿಯಲು ಸಾಧ್ಯವಿಲ್ಲ. ಪ್ರತಿಯೊಂದು ವೃತ್ತಿಯೂ ಕೂಡ ಗೌರವಪೂರ್ವಕವಾಗಿದ್ದು ನೌಕರರು ತಮ್ಮಲ್ಲಿರುವ ಕೀಳರಿಮೆಯನ್ನು ಬಿಡಬೇಕು. ಇನ್ನು ಇಲಾಖಾಧಿಕಾರಿಗಳು ಪ್ರತಿನಿತ್ಯ ಪೌರಕಾರ್ಮಿಕರ ಯೋಗಕ್ಷೇಮ, ಆರೋಗ್ಯವನ್ನು ಗಮನಿಸಿ ಸೂಕ್ತ ಚಿಕಿತ್ಸೆ ನೀಡುವಲ್ಲಿ ಮುಂದಾಗಬೇಕು ಎಂದು ತಿಳಿಸಿದರು.

ಪುರಸಭೆ ಮುಖ್ಯಾಧಿಕಾರಿ ಎ. ಟಿ. ಪ್ರಸನ್ನ ಮಾತನಾಡಿದರು. ಸದಸ್ಯರಾದ ಪಿ.ಸಿ. ಕೃಷ್ಣ, ಪ್ರಕಾಶ್, ರವಿ, ಅಭಿಯಂತರ ವೈಶಾಲಿ, ವನಿತ, ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ. ಲತಾ, ಆರೋಗ್ಯ ನಿರೀಕ್ಷಕ ಪ್ರದೀಪ್, ಆದರ್ಶ, ಸಿಬ್ಬಂದಿ ಕುಮಾರ್, ಜಯರಾಮ್ ಪೌರಾಕಾರ್ಮಿಕರು ಇದ್ದರು.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ