Vijayapatha – ವಿಜಯಪಥ
Saturday, November 2, 2024
NEWSನಮ್ಮಜಿಲ್ಲೆ

ತಿ.ನರಸೀಪುರ: ದಲಿತ ಯುವಕನ ಮೇಲೆ ದೌರ್ಜನ್ಯ ಎಸಗಿದ ಪಿಎಸ್‌ಐ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ತಿ.ನರಸೀಪುರ: ದಲಿತ ಯುವಕನಿಗೆ ಮೂತ್ರ ಕುಡಿಸಿ, ಹಲ್ಲೇ ಮಾಡಿ ಜಾತಿನಿಂದನೆ ಮಾಡಿರುವ ಗೋಣಿಬೀಡು ಪಿಎಸ್ಐ ಅರ್ಜುನ್ ಅವರನ್ನು ದಲಿತ ದೌರ್ಜನ್ಯ ಕಾಯ್ದೆಯಡಿ ಬಂಧಿಸಿ, ಗಡಿಪಾರು ಮಾಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ತಾಲೂಕು ಕಚೇರಿಯ ಮುಂಭಾಗ ಮಂಗಳವಾರ ಸಮಿತಿಯ ಕಾರ್ಯಕರ್ತರು ಹಾಗೂ ಮುಖಂಡರು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ದಲಿತ ಯುವಕನಿಗೆ ಮೂತ್ರ ಕೊಡಿಸಿರುವ ಪಿಎಸ್ಐ ಅರ್ಜುನ್‌ನನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಜಿಲ್ಲಾ ಪ್ರಧಾನ ಸಂಚಾಲಕ ಬನ್ನಹಳ್ಳಿ ಸೋಮಣ್ಣ ಮಾತನಾಡಿ, ದುರ್ಬಲ ಜನರು ಹಾಗೂ ಸಮುದಾಯಗಳಿಗೆ ರಕ್ಷಣೆ ನೀಡಬೇಕಾದ ಪೊಲೀಸರೇ ದಲಿತ ಯುವಕನಿಗೆ ಮೂತ್ರ ಕುಡಿಸುವುದು ಅಕ್ಷಮ್ಯವಾಗಿದೆ. ಇಂತಹ ಕೃತ್ಯ ಎಸಗಿದ ಅರ್ಜುನ್ ಅವರನ್ನು ಕರ್ತವ್ಯದಿಂದ ಅಮಾನತು ಮಾಡಿದರಷ್ಟೇ ಸಾಲದು. ಕೆಲಸದಿಂದಲೇ ವಜಾಗೊಳಿಸಿ ಕೂಡಲೇ ಬಂಧಿಸಬೇಕು. ಆತನನ್ನ ಗಡಿಪಾರು ಮಾಡಬೇಕು. ಇಲ್ಲದಿದ್ದರೆ ದಲಿತ ಸಂಘಟನೆಗಳು ಬೀದಿಗಿಳಿದು ಹೋರಾಟವನ್ನು ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಉಪ ತಹಸೀಲ್ದಾರ್ ಬಾಲಸುಬ್ರಮಣ್ಯ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ನಾಗರಾಜು ವಾಟಾಳು, ತಾಲೂಕು ಸಂಚಾಲಕ ಬಸವರಾಜು ಬನ್ನಹಳ್ಳಿ, ಮುಖಂಡರಾದ ಸುರೇಶ, ಶಾಂತರಾಜು, ಬಸವರಾಜು, ಮಹೇಶ, ತೇಜು, ಚೇತನ್ ಇನ್ನಿತರರು ಭಾಗವಹಿಸಿದ್ದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ