Vijayapatha – ವಿಜಯಪಥ
Saturday, November 2, 2024
NEWSನಮ್ಮರಾಜ್ಯ

ಶತಾಯುಷಿ ದೊರೆಸ್ವಾಮಿ ನಿಧನಕ್ಕೆ ಕಂಬನಿ ಮಿಡಿದ ಮಾಜಿ ಸಿಎಂ ಎಚ್‌ಡಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್‌ ರಾಜ್ಯ ವರಿಷ್ಠ ಎಚ್‌.ಡಿ. ಕುಮಾರಸ್ವಾಮಿ ತೀವ್ರ ಕಂಬನಿ ಮಿಡಿದಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಗಾಂಧಿವಾದಿ, ಪ್ರಾತಃಸ್ಮರಣೀಯರು ಹಾಗೂ ನಾಡಿನ ಸಾಕ್ಷಿಪ್ರಜ್ಞೆಯಂತಿದ್ದ ದೊರೆಸ್ವಾಮಿ ಅವರ ನಿಧನದಿಂದ ಶತಮಾನದ ಮಹಾನ್ ಹೋರಾಟಗಾರರನ್ನು ಕಳೆದುಕೊಳ್ಳುವ ಮೂಲಕ ನಾಡು ಹಾಗೂ ದೇಶ ಬಡವಾಗಿದೆ ಎಂದು ತಿಳಿಸಿದ್ದಾರೆ.

ಶತಾಯುಷಿಯಾಗಿದ್ದರೂ ದಣಿವರಿಯದ ಅವರ ಹೋರಾಟದ ಕಿಚ್ಚು ಮತ್ತು ಸಾಮಾಜಿಕ ಬದ್ಧತೆ ಅನನ್ಯ. ಹತ್ತಾರು ಬಾರಿ ಅವರನ್ನು ಭೇಟಿ ಮಾಡಿ ಚರ್ಚಿಸಿ, ಮಾರ್ಗದರ್ಶನ ಮತ್ತು ಆಶೀರ್ವಾದ ಪಡೆದಿದ್ದೇನೆ. ಅದು ನನ್ನ ಭಾಗ್ಯ ಎಂದು ಹೇಳಿದ್ದಾರೆ.

ಇತ್ತೀಚೆಗಷ್ಟೇ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದ ದೊರೆಸ್ವಾಮಿ (103) ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದು ನನ್ನ ಮನಸ್ಸಿಗೆ ತೀವ್ರ ನೋವನ್ನುಂಟು ಮಾಡಿದೆ ಎಂದರು.

ಸ್ವಾತಂತ್ರ್ಯಪೂರ್ವ, ಸ್ವಾತಂತ್ರ್ಯೋತ್ತರ ನಂತರ ಸೆರೆವಾಸ ಅನುಭವಿಸಿದ್ದ ದೊರೆಸ್ವಾಮಿಯವರ ಬದುಕಿನ ಆದರ್ಶ, ಮೌಲ್ಯಗಳು ಎಲ್ಲರಿಗೂ ಸ್ಫೂರ್ತಿ.ಇಂತಹ ಮಹಾನ್ ಚೇತನ ಎರಡು ಶತಮಾನಗಳ ಕಾಲಘಟ್ಟದಲ್ಲಿ ನಮ್ಮೆಲ್ಲರಿಗೂ ಹೋರಾಟದ ಸ್ಫೂರ್ತಿಯ ಸೆಲೆಯಾಗಿ ಮುಂಚೂಣಿಯ ಮಾರ್ಗದರ್ಶಕರಾಗಿದ್ದರು ಎಂಬುದನ್ನು ಅತ್ಯಂತ ವಿನೀತ ಭಾವದಿಂದ ಸ್ಮರಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

ಮೃತರ ಕುಟುಂಬದ ಸದಸ್ಯರು, ಅವರ ಅಸಂಖ್ಯ ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ