NEWSನಮ್ಮರಾಜ್ಯ

ಗಾಂಧಿವಾದಿ ದೊರೆಸ್ವಾಮಿ ನಿಧನಕ್ಕೆ ರಾಜ್ಯ ಒಕ್ಕಲಿಗರ ಒಕ್ಕೂಟ ಸಂತಾಪ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೊರಾಟಗಾರ, ಗಾಂಧಿ ಯುಗದ ಕೊಂಡಿ, ಶತಾಯುಷಿ ಎಚ್.ಎಸ್.
ದೊರೆಸ್ವಾಮಿ ಅವರ ಅಗಲಿಕೆ ಅಪಾರ ನೋವನ್ನುಂಟು ಮಾಡಿದೆ ಎಂದು ರಾಜ್ಯ ಒಕ್ಕಲಿಗರ ಒಕ್ಕೂಟದ ಅಧ್ಯಕ್ಷ ಸಿ.ವಿ. ದೇವರಾಜ್ ಹೇಳಿದ್ದಾರೆ.

ಬೆಂಗಳೂರು ನಗರವೊಂದರಲ್ಲೇ ನೂರಾರು ಎಕರೆ ಭೂ ಕಬಳಿಕೆ ನಿಂತಿದ್ದು ದೊರೆಸ್ವಾಮಿ ಅವರ ಹೋರಾಟದ ಫಲ ಎನ್ನುವುದು ಅತಿಶಯೋಕ್ತಿಯೇನಲ್ಲ. ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಭಾಗಗಳಲ್ಲಿ ಸಾಮಾಜಿಕ ಹೋರಾಟಗಳಲ್ಲಿ ಭಾಗವಹಿಸುವ ಮೂಲಕ ಪ್ರೇರಣೆ ನೀಡುತ್ತಿದ್ದರು ಎಂದು ಅವರ ಸಾಮಾಜಿಕ ಕಳಕಳಿಯನ್ನು ನೆನೆಪಿಸಿಕೊಂಡರು.

ಇಂಥ ಹಿರಿಯ ಹೋರಾಟಗಾರ ಬುದ್ಧ ಪೂರ್ಣಿಮೆಯ ದಿನ ಭೌತಿಕವಾಗಿ ನಮ್ಮನ್ನು ಅಗಲಿದ್ದರೂ ಅವರು ಹಚ್ಚಿರುವ ಹೋರಾಟದ ಕಿಚ್ಚು ಅವರನ್ನು ಸದಾ ನೆನಪಿನಲ್ಲಿ ಉಳಿಸುತ್ತದೆ. ನಮ್ಮ ಅನೇಕ ಹೊರಾಟಗಳಿಗೆ ಅವರು ಮಾರ್ಗದರ್ಶನ ಮಾಡಿದ್ದನ್ನು ಮರೆಯುವಂತಿಲ್ಲ ಎಂದು ಹೇಳಿದರು.

ಭೂ ಕಬಳಿಕೆ, ಪರಿಸರ, ಅರಣ್ಯ ಸಂರಕ್ಷಣೆ ಸೇರಿದಂತೆ ಯಾವುದೇ ಸಾಮಾಜಿಕ ಹೊರಾಟಗಳ ಮುಂಚೂಣಿಯಲ್ಲಿ ಇರುತ್ತಿದ್ದ ದೊರೆಸ್ವಾಮಿ ಅವರು ಇನ್ನಿಲ್ಲ ಎನ್ನುವುದನ್ನು ಅರಗಿಸಿಕೊಳ್ಳುವುದು ಕಷ್ಟ. ಅವರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ಭಗವಂತ ಕರುಣಿಸಲಿ
ಎಂದು ಒಕ್ಕೂಟದ ಎಲ್ಲಾ ಪದಾಧಿಕಾರಿಗಳ ಪರವಾಗಿ ಪ್ರಾರ್ಥಿಸುತ್ತೇನೆ ಎಂದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?