Breaking NewsNEWSನಮ್ಮಜಿಲ್ಲೆ

ಕೊರೊನಾ ಸೋಂಕಿತರ ಹಾಸಿಗೆ ಹಂಚಿಕೆಗೆ ಸರತಿ ವ್ಯವಸ್ಥೆ: ಸಚಿವ ಅರವಿಂದ ಲಿಂಬಾವಳಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಆಸ್ಪತ್ರೆ ಗಳಲ್ಲಿ ಹಾಸಿಗೆ ಹಂಚಿಕೆಗಾಗಿ ಇನ್ನು ಮುಂದೆ ಸರತಿ ಸಾಲಿನ ಕ್ರಮ ಅನುಸರಿಸಲಾಗುವುದು. ಬೆಡ್ ಬುಕ್ ಮಾಡಲು ಕರೆ ಮಾಡುವವರಿಗೆ ಕ್ಯೂ ವ್ಯವಸ್ಥೆ ಮೂಲಕ ಹಾಸಿಗೆ ಹಂಚಿಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ ರೂಂ, ಕಾಲ್ ಸೆಂಟರ್ ನಿರ್ವಹಣೆ ಮತ್ತು ಸೋಂಕಿತರಿಗೆ ವೈದ್ಯಕೀಯ ಸಲಹೆ ವ್ಯವಸ್ಥೆ ಮೇಲ್ವಿಚಾರಣೆ ನೋಡಲ್, ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಬುಧವಾರ ಮಾಗಡಿ ರಸ್ತೆಯಲ್ಲಿರುವ ಆರೋಗ್ಯ ಸೌಧದಲ್ಲಿ ಕೋವಿಡ್ ವಾರ್ ರೂಮ್ ನಿರ್ವಹಣೆ ಮಾಡುತ್ತಿರುವ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಸೋಂಕಿತರು ಬೆಡ್ ಬುಕ್ ಮಾಡಲು ಕರೆ ಮಾಡಿದಾಗ ಅವರಿಗೆ ಆಟೋಮ್ಯಾಟಿಕ್ ಕ್ಯೂ ಸಂಖ್ಯೆ ಕೊಡಲಾಗುತ್ತದೆ. ಒಟ್ಟು ರಿಜಿಸ್ಟ್ರೇಷನ್ ಸಂಖ್ಯೆ ಆಧಾರದಲ್ಲಿ ಅವರು ಯಾವ ಸಂಖ್ಯೆಯಲ್ಲಿದ್ದಾರೆ, ಈಗ ಯಾವ ಸಂಖ್ಯೆಯ ದಾಖಲಾತಿ ನಡೆಯುತ್ತಿದೆ ಎಂಬ ಮಾಹಿತಿ ಅವರಿಗೆ ತಲುಪುವ ವ್ಯವಸ್ಥೆ ಮಾಡಲಾಗುತ್ತಿದ್ದು, ಈ ವ್ಯವಸ್ಥೆ ಎರಡು ದಿನಗಳಲ್ಲಿ ಆರಂಭವಾಗಲಿದೆ. ಇದರ ಪರಿಣಾಮಗಳನ್ನು ಅನುಸರಿಸಿ ಮುಂದೆ ಇದನ್ನು ಇಡೀ ರಾಜ್ಯಕ್ಕೆ ಅನ್ವಯಿಸುವಂತೆ ಮಾಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಹೇಳಿದರು.

ತುರ್ತು ಚಿಕಿತ್ಸೆ ಅಗತ್ಯವಿರುವ ರೋಗಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು. ರೋಗದ ತೀವ್ರತೆ ಅನುಸರಿಸಿ ಅವರಿಗೆ ಹಾಸಿಗೆ ಹಂಚಿಕೆ ಮಾಡಲಾಗುತ್ತದೆ ಎಂದು ತಿಳಿಸಿದರು.

ವಾರ್ ರೂಮ್ ನ ಕಾರ್ಯನಿರ್ವಹಣೆ ಹೆಚ್ಚು ಪರಿಣಾಮಕಾರಿ ಹಾಗೂ ಜನಸ್ನೇಹಿಯಾಗಿ ಮಾಡಲು ಈಗಿರುವ ಸಾಫ್ಟ್ವೇರ್ ಗೆ ಅನೇಕ ಸುಧಾರಣೆ ಮಾಡಲು ಉದ್ದೇಶಿಸಿದೆ ಅದು ಕೆಲವೇ ದಿನಗಳಲ್ಲಿ ಅನುಷ್ಠಾನಕ್ಕೆ ಬರಲಿದೆ ಎಂದರು.

ಈಗಿರುವ ಎಸ್ಎಂಎಸ್ ವ್ಯವಸ್ಥೆಯಲ್ಲಿ ಸುಧಾರಣೆ ಮಾಡಿ ಹಾಸಿಗೆ ಹಂಚಿಕೆಯಾಗಿರುವ ರೋಗಿಗಳು ನಾಲ್ಕು ಗಂಟೆಯ ಒಳಗೆ ಆಸ್ಪತ್ರೆಯ ತಲುಪದೇ ಹೋದರೆ ಅವರಿಗೆ ಮತ್ತೆ ಎಸ್ಎಂಎಸ್ ಮೂಲಕ ಜಾಗೃತ ಗೊಳಿಸುವ ಮೆಸೇಜ್ ಕಳುಹಿಸಲಾಗುತ್ತದೆ ಮತ್ತು ಆಸ್ಪತ್ರೆಯಲ್ಲಿನ ನೋಡಲ್ ಅಧಿಕಾರಿಗೂ ಕೂಡ ಮೆಸೇಜ್ ಹೋಗುತ್ತದೆ. ಪ್ರಸ್ತುತ ಟ್ರಯಾಜಿಂಗ್ ಕೇಂದ್ರಗಳಲ್ಲಿ ದೈಹಿಕ ತಪಾಸಣೆಗೆ ಒಳಗಾಗುವವರಿಗೆ ವೈದ್ಯರ ಸಲಹೆ ಮೇರೆಗೆ ಅದರ ವ್ಯಾಪ್ತಿಯ ರೆಫರಲ್ ಆಸ್ಪತ್ರೆ ಗಳಲ್ಲಿ ಹಾಸಿಗೆ ಕಾಯ್ದಿರಿಸಲು ವ್ಯವಸ್ಥೆ ರೂಪಿಸಿ ಎಂದು ಹೇಳಿದರು.

ರೋಗಿಗಳ ವಿವರಗಳನ್ನು ಬಿಬಿಎಂಪಿ ಸಿದ್ಧಪಡಿಸಿರುವ ಮಾದರಿ ಅರ್ಜಿಯಲ್ಲಿ ತುಂಬುವ ಕುರಿತು ಟ್ರೈಯಾಜಿಂಗ್ ಕೇಂದ್ರದ ವೈದ್ಯರಿಗೆ ಹಾಗೂ ಸಹಾಯಕರಿಗೆ ತರಬೇತಿ ಶಿಬಿರಗಳನ್ನು ಸಹ ಆಯೋಜಿಸಲಾಗುತ್ತಿದೆ ಎಂದು ಸಚಿವ ಲಿಂಬಾವಳಿ ತಿಳಿಸಿದರು.

ಮುಂಬರುವ ದಿನಗಳಲ್ಲಿ ರಾಜ್ಯ ವಾರ್ ರೂಮ್ ಹಾಗೂ ಬಿಬಿಎಂಪಿ ವಾರ್ ರೂಮ್ ಇವುಗಳನ್ನು ಒಂದೇ ಸೂರಿನಡಿ ತರಲು ಕ್ರಮವಹಿಸಲಾಗುವುದು. ಅವಶ್ಯ ಇರುವ ಕಡೆಗಳಲ್ಲಿ ಮತ್ತು ಉತ್ಸಾಹಿ ಸ್ವಯಂಸೇವಕ ಸಂಸ್ಥೆಗಳು ಸರ್ಕಾರದೊಂದಿಗೆ ಕೈ ಜೋಡಿಸಿ ಕೋವಿಡ್ 19 ನಿರ್ವಹಣೆಯಲ್ಲಿ ಸಹಕರಿಸಲು ಮುಂದೆ ಬಂದರೆ ಅವರ ನೆರವು ಪಡೆದುಕೊಂಡು ಸೋಂಕಿತರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಮುಂದಾಗುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಮುಂದೆ ಬರಲಿರುವ ಮೂರನೇ ಅಲೆ ಮಕ್ಕಳನ್ನು ಬಾಧಿಸಲಿದೆ ಎಂಬ ವರದಿಯ ಹಿನ್ನೆಲೆಯಲ್ಲಿ ಮುಂಬಯಿನಲ್ಲಿ ಮಾಡಿರುವ ಮಾದರಿಯನ್ನು ಅನುಸರಿಸಿ ಮಕ್ಕಳಿಗಾಗಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ವಿಶೇಷ ವಾರ್ಡಗಳ ಸೃಜನೆಗೆ ಕ್ರಮ ವಹಿಸಲು ಸಚಿವರು ಸೂಚಿಸಿದರು.

ಬಿಬಿಎಂಪಿ ಕೋವಿಡ್ ವಾರ್ ರೂಮ್ ನಿರ್ವಹಾಧಿಕಾರಿ ಪೊನ್ನುರಾಜ್, ಕುಮಾರ್ ಪುಷ್ಕರ್, ವಿಶ್ವಜಿತ್, ವಿಶೇಷ ಆಯುಕ್ತ ರಣದೀಪ್, ಡಾಕ್ಟರ್ ಅರುಂಧತಿ ಚಂದ್ರಶೇಖರ್,ಎನ್. ಟಿ. ಅಬ್ರೂ ಹಾಗೂ ಡಾ. ಭಾಸ್ಕರ್, ಉನ್ನತ ಅಧಿಕಾರಿಗಳು ಇದ್ದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?