Vijayapatha – ವಿಜಯಪಥ
Saturday, November 2, 2024
NEWSನಮ್ಮರಾಜ್ಯರಾಜಕೀಯ

ಲೋ ಅಣ್ಣ ನನ್ನ ಮುಂದೆ ಇರೋದು ಕೋವಿಡ್‌: ಸಿಎಂ ಬಿಎಸ್‌ವೈ ಗರಂ

ಸಿಎಂ ಬದಲಾವಣೆ ಬಗ್ಗೆ ಕೋಪದಿಂದಲೇ ಹೇಳಿಕೆ ಕೊಟ್ಟ ಯಡಿಯೂರಪ್ಪ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಲೋ ಅಣ್ಣ ದಯಮಾಡಿ ನಾ ಹೇಳುತ್ತೇನೆ ಸದ್ಯಕ್ಕೆ ನನ್ನ ಮುಂದೆ ಇರೋದು ಕೋವಿಡ್‌. ಕೊರೊನಾದಿಂದ ರಾಜ್ಯದಲ್ಲಿ ಸಾವುಗಳ ಸಂಖ್ಯೆ ಏರಿಕೆಯಾಗುತ್ತಿದೆ ಹೀಗಾಗಿ ನಾನು ಆ ಕಡೆ ಗಮನಕೊಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಗರಂ ಆಗಿಯೇ ಹೇಳಿಕೆ ನೀಡಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ಸದ್ಯಕ್ಕೆ ನನ್ನ ಆದ್ಯತೆ ಕೋವಿಡ್ ನಿಯಂತ್ರಣಕ್ಕಷ್ಟೇ ಆಗಿದೆ. ಜನರ ಹಿತ ಕಾಪಾಡುವುದೇ ನನ್ನ ಮೊದಲ ಆದ್ಯತೆ. ಬೇರೆ ವಿಷಯ ನನ್ನ ಮುಂದೆ ಇಲ್ಲ ಎಂದು ಹೇಳುವ ಮೂಲಕ ವಿರೋಧಿಗಳಿಗೆ ಟಕ್ಕರ್ ಕೊಟ್ಟರು.

ಇನ್ನು ಈ ನಡುವೆಯೂ ರಾಜ್ಯ ರಾಜಕೀಯದಲ್ಲಿ ದಿಢೀರ್ ಬೆಳವಣಿಗೆಗಳು ನಡೆಯುತ್ತಿದ್ದು, ಸಿಎಂ ಬದಲಾವಣೆಯ ಮಾತು ಹೆಚ್ಚಾಗಿ ಸೌಂಡ್‌ ಮಾಡುತ್ತಿದೆ. ಈ ನಾಯಕತ್ವ ಬದಲಾವಣೆಯ ಆಟಕ್ಕೆ ಯಡಿಯೂರಪ್ಪ ಗರಂ ಆಗಿದ್ದು, ದೆಹಲಿಗೆ ಹೋಗಿ ಬಂದವರಿಗೆ ಈಗಾಗಲೇ ರಾಷ್ಟ್ರೀಯ ನಾಕರು ಉತ್ತರ ಕೊಟ್ಟು ಕಳುಹಿಸಿದ್ದಾರೆ ಎಂದು ಕೋಪದಿಂದಲೇ ಪ್ರತಿಕ್ರಿಯೇ ನೀಡಿದರು.

ಸದ್ಯಕ್ಕೆ ರಾಜ್ಯದಲ್ಲಿ ಕೋವಿಡ್ ಎದುರಿಸುವುದು ಮೊದಲ ಕೆಲಸ. ಬೇರೆ ಯಾವುದರ ಬಗ್ಗೆಯೂ ನನ್ನ ಗಮನ ಇಲ್ಲ. ಒಟ್ಟಾಗಿ ಸಚಿವರು, ಶಾಸಕರು ಕೋವಿಡ್ ಎದುರಿಸಬೇಕು ಎಂದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ