ವಿಜಯಪಥ ಸಮಗ್ರ ಸುದ್ದಿ
ಮೈಸೂರು: ಜಿಲ್ಲೆಯಲ್ಲಿ ಇನ್ನೊಂದು ತಿಂಗಳಲ್ಲಿ ಕೊರೊನಾವನ್ನು ನಿಯಂತ್ರಣಕ್ಕೆ ತರುತ್ತೇವೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಜನತೆಗೆ ಭರವಸೆ ನೀಡಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯನ್ನು ಸಂಪೂರ್ಣವಾಗಿ ಕೊರೊನಾ ಮುಕ್ತ ಮಾಡುವ ಪಣತೊಟ್ಟಿದ್ದು, ನಿಯಂತ್ರಣಕ್ಕೆ ತರುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದರು.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಿರುವುದಕ್ಕೆ ಆತಂಕ ಪಡಬೇಡಿ. ನಮ್ಮಲ್ಲಿ ಟೆಸ್ಟಿಂಗ್ ಕೂಡ ಹೆಚ್ಚಿನ ಪ್ರಮಾಣದಲ್ಲಿ ಮಾಡುತ್ತಿದ್ದೇವೆ. ಎಲ್ಲಾ ಅಂಕಿಅಂಶಗಳನ್ನು ವಾರ್ ರೂಂ ಮೂಲಕ ಬಿಡುಗಡೆ ಮಾಡುತ್ತಿದ್ದೇವೆ. ಬೆಂಗಳೂರಿನ ನಂತರ ಮೈಸೂರಿನಲ್ಲಿ ಹೆಚ್ಚಿನ ಅಂಕಿ-ಅಂಶಗಳನ್ನು ನೀಡುತ್ತಿದ್ದೇವೆ ಎಂದು ವಿವರಿಸಿದರು.
ಜುಲೈ 1ರ ವೈದ್ಯರ ದಿನದಂದು ವೈದ್ಯರ ಸೇವೆ ಸ್ಮರಿಸಿ ಕೊರೊನಾ ಮುಕ್ತ ಮೈಸೂರಿನ ಘೋಷಣೆಯನ್ನು ಅವರಿಗೆ ಅರ್ಪಿಸೋಣ. ಇದು ನಮ್ಮ ಸಂಕಲ್ಪ ಎಂದ ಅವರು, ಇನ್ನು ನಾಳೆಯ ಲಾಕ್ಡೌನ್ ಬಗ್ಗೆ ಯಾವುದೇ ಗೊಂದಲ ಬೇಡ. ಜನರು ತೀರಾ ಅಗತ್ಯವಿದ್ದರೆ ಮಾತ್ರ ಹೊರಬನ್ನಿ, ಜಜತಾ ಕರ್ಫ್ಯೂ ಅಳವಡಿಸಿಕೊಂಡು ನಿಯಮ ಪಾಲಿಸಿ ಎಂದು ಸಿಂಧೂರಿ ಮನವಿ ಮಾಡಿದರು.