NEWSದೇಶ-ವಿದೇಶ

ಕೊರೊನಾದಿಂದ ಪಾಲಕರ ಕಳೆದುಕೊಂಡು ಅನಾಥರಾದ ಮಕ್ಕಳಿಗೆ ತಕ್ಷಣ ಪರಿಹಾರ ನೀಡಬೇಕು: ಎಲ್ಲಾ ರಾಜ್ಯಗಳಿಗೂ ಸುಪ್ರೀಂ ಸೂಚನೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ದೇಶವನ್ನು ಇನ್ನಿಲದಂತೆ ಕಾಡುತ್ತಿರುವ ಸೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಈ ದೇಶದಲ್ಲಿ ಎಷ್ಟು ಮಕ್ಕಳು ಅನಾಥರಾಗಿದ್ದಾರೆಂದು ಊಹಿಸಿಕೊಳ್ಳುವುದು ಸಾಧ್ಯವಿಲ್ಲ ಎಂದು ಹೇಳಿರುವ ಸುಪ್ರೀಂ ಕೋರ್ಟ್ ಕೂಡಲೇ ಅಂಥ ಮಕ್ಕಳನ್ನು ಗುರುತಿಸಿ ಪರಿಹಾರ ನೀಡುವಂತೆ ರಾಜ್ಯಗಳಿಗೆ ನಿರ್ದೇಶನ ನೀಡಿದೆ.

ಕೊರೊನಾ ಕಾರಣದಿಂದಾಗಿ ಅನಾಥ ಮಕ್ಕಳನ್ನು ಗುರುತಿಸಲು ಮತ್ತು ರಾಜ್ಯ ಸರ್ಕಾರಗಳಿಗೆ ತಕ್ಷಣದ ಪರಿಹಾರವನ್ನು ನೀಡುವಂತೆ ಕೋರಿ ಅಮಿಕಸ್ ಕ್ಯೂರಿ ಗೌರವ್ ಅಗ್ರವಾಲ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.

ಬೀದಿಗಳಲ್ಲಿ ಹಸಿವಿನಿಂದ ಬಳಲುತ್ತಿರುವ ಮಕ್ಕಳ ಸಂಕಷ್ಟವನ್ನು ಅರ್ಥಮಾಡಿಕೊಳ್ಳಬೇಕೆಂದು ಸರ್ವೋಚ್ಚ ನ್ಯಾಯಾಲಯ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ. ಅಲ್ಲದೆ ನ್ಯಾಯಾಲಯಗಳಿಂದ ಹೆಚ್ಚಿನ ಆದೇಶಗಳಿಗಾಗಿ ಕಾಯದೆ ತಕ್ಷಣವೇ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶನವನ್ನೂ ನೀಡಿದೆ.

ನ್ಯಾಯಮೂರ್ತಿಗಳಾದ ಎಲ್.ಎನ್. ರಾವ್ ಮತ್ತು ಅನಿರುದ್ಧ ಬೋಸ್ ಅವರ ರಜಾ ಪೀಠವು, ತಮ್ಮ ಪ್ರದೇಶಗಳಲ್ಲಿನ ಅನಾಥ ಮಕ್ಕಳನ್ನು ಗುರುತಿಸಿ ಅದರ ಸಂಪೂರ್ಣ ಡೇಟಾವನ್ನು ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗದ(ಎನ್‌ಸಿಪಿಸಿಆರ್) ವೆಬ್‌ಸೈಟ್‌ನಲ್ಲಿ ಶನಿವಾರ ಸಂಜೆ ವೇಳೆಗೆ ಅಪ್‌ಲೋಡ್ ಮಾಡುವಂತೆ ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಿದೆ.

ಕೋವಿಡ್ ಕಾರಣದಿಂದಾಗಿ ಮಹಾರಾಷ್ಟ್ರದಲ್ಲಿ 2,900ಕ್ಕೂ ಹೆಚ್ಚು ಮಕ್ಕಳು ತಮ್ಮ ಒಬ್ಬ ಅಥವಾ ಇಬ್ಬರು ಪೋಷಕರನ್ನು ಕಳೆದುಕೊಂಡಿದ್ದಾರೆ ಎಂದು ನಾವು ಎಲ್ಲೋ ಓದಿದ್ದೇವೆ. ಇದನ್ನು ನೋಡಿದರೆ ಈ ದೊಡ್ಡ ದೇಶದಲ್ಲಿ ಇಂತಹ ಎಷ್ಟು ಮಕ್ಕಳು ಇದ್ದಾರೆಂದು ನಾವು ಊಹಿಸಿಕೊಳ್ಳಲೂ ಸಾಧ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ.

ರಾಜ್ಯ ಸರ್ಕಾರಗಳ ಪರವಾಗಿ ಭಾಗವಹಿಸಿದ್ದು ಸಲಹೆಗಾರರಿಗೆ, ‘ಬೀದಿಗಳಲ್ಲಿ ಹಸಿವಿನಿಂದ ಬಳಲುತ್ತಿರುವ ಮಕ್ಕಳ ಸಂಕಟವನ್ನು ನೀವು ಅರ್ಥಮಾಡಿಕೊಂಡಿದ್ದೀರಿ ಎಂದು ನಾನು ಭಾವಿಸುತ್ತೇನೆ. ದಯವಿಟ್ಟು ಅವರ ಮೂಲಭೂತ ಅಗತ್ಯಗಳನ್ನು ತಕ್ಷಣ ಪೂರೈಸುವಂತೆ ನೀವು ರಾಜ್ಯದ ಅಧಿಕಾರಿಗಳನ್ನು ತಿಳಿಸಿ.

ಕೋವಿಡ್ ನಿಂದಾಗಿ ಪಾಲಕರನ್ನು ಕಳೆದುಕೊಂಡಿರುವ ಮಕ್ಕಳ ರಕ್ಷಣೆಗಾಗಿ ಕೇಂದ್ರ ಸರ್ಕಾರ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲಹೆ ನೀಡಿದೆ ಎಂದು ಉನ್ನತ ನ್ಯಾಯಾಲಯ ಉಲ್ಲೇಖಿಸಿದೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್