Breaking NewsNEWSಸಿನಿಪಥ

ಇಂದು ಅಭಿಮಾನಿಗಳ ಅಂಬಿಯ 69ನೇ ಜನ್ಮದಿನ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಸ್ಯಾಂಡಲ್‍ವುಡ್ ನಟ ದಿವಂಗತ ರೆಬೆಲ್ ಸ್ಟಾರ್ ಅಂಬರೀಷ್‌ ಜನ್ಮದಿನ. ಪರಿಸ್ಥಿತಿ ಸರಿಯಿದ್ದು, ಅವರು ನಮ್ಮೊಂದಿಗೆ ಇದ್ದಿದ್ದರೆ ಅಭಿಮಾನಿಗಳ ಜತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಕೇಕ್ ಕತ್ತರಿಸಿ ಸಂಭ್ರಮಿಸುತ್ತಿದ್ದರು. ಆದರೆ, ಅಂಬರೀಷ್‌ ಈಗ ನಮ್ಮೊಂದಿಗಿಲ್ಲ. ಹೀಗಾಗಿ, ಅವರ ಪತ್ನಿ, ನಟಿ, ಮಂಡ್ಯ ಸಂಸದೆ ಸುಮಲತಾ ಕಂಠೀರವ ಸ್ಟುಡಿಯೋಗೆ ತೆರಳಿ ಅಂಬರೀಷ್‌ ಸಮಾಧಿಗೆ ನಮನ ಸಲ್ಲಿಸಿದ್ದಾರೆ.

ಅಭಿಮಾನಿಗಳಿಂದ ಪ್ರೀತಿಯಿಂದ ಕಲಿಯುಗದ ಕರ್ಣ, ಮಂಡ್ಯದ ಗಂಡು, ರೆಬೆಲ್ ಸ್ಟಾರ್ ಎಂದು ಕರೆಯಿಸಿಕೊಳ್ಳುವ ಅಂಬರೀಷ್ ಅವರ ಜನ್ಮಜಯಂತಿ ಇಂದು. 1952ರ ಮೇ 29ರಂದು ಮಂಡ್ಯ ಜಿಲ್ಲೆಯ ದೊಡ್ಡರಸಿನಕೆರೆ ಗ್ರಾಮದಲ್ಲಿ ಹುಚ್ಚೇಗೌಡ ಮತ್ತು ಅಮರನಾಥ್ ದಂಪತಿಯ ಏಳು ಮಕ್ಕಳಲ್ಲಿ ಆರನೆಯವನಾಗಿ ಹುಟ್ಟಿದ ಅಂಬರೀಷ್ ಅವರ ಮೊದಲ ಹೆಸರು ಮಳವಳ್ಳಿ ಹುಚ್ಚೇಗೌಡ ಅಮರನಾಥ.

ನಂತರ ಬೆಳೆದು ದೊಡ್ಡವರಾದ ಮೇಲೆ ಪುಟ್ಟಣ್ಣ ಕಣಗಾಲ್ ಅವರ ನಾಗರಹಾವು ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಬಂದು ಅಂಬರೀಷ್ ಆಗಿ ಜನಮಾನಸದಲ್ಲಿ ಮೆರೆದು ನಂತರದ ದಿನಗಳಲ್ಲಿ ರಾಜಕೀಯಕ್ಕೂ ಧುಮುಕಿ ಶಾಸಕನಾಗಿ, ಸಚಿವನಾಗಿ, ಸಂಸದನಾಗಿ, ಕೇಂದ್ರ ಸಚಿವರಾಗಿ ಬೆಳೆದದ್ದು ಈಗ ಇತಿಹಾಸ.

ಅವರು ಗತಿಸಿ ಎರಡೂವರೆ ವರ್ಷಗಳಾಗಿದೆ, ಅವರ ಜನ್ಮ ಜಯಂತಿ ಮತ್ತು ಪುಣ್ಯತಿಥಿಯನ್ನು ಕುಟುಂಬಸ್ಥರು, ಅಭಿಮಾನಿಗಳು ತಪ್ಪದೆ ಆಚರಿಸುತ್ತಾರೆ. ಈ ಬಾರಿ ಕೊರೊನಾ ಎರಡನೇ ಅಲೆ ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ ಆಚರಣೆ ಬೇಡ ಎಂದು ಅವರ ಪತ್ನಿ ಮಂಡ್ಯ ಕ್ಷೇತ್ರದ ಸಂಸದೆ ಸುಮಲತಾ ಮನವಿ ಮಾಡಿದ್ದಾರೆ.

ರೆಬೆಲ್ ಸ್ಟಾರ್ ಅಂಬರೀಷ್ ಅವರ 69ನೇ ವರ್ಷದ ಹುಟ್ಟುಹಬ್ಬ ಹಿನ್ನಲೆ ಅಂಬಿ ಸ್ಮಾರಕಕ್ಕೆ ಪೂಜೆ ಸಲ್ಲಿಸಿದ ಬಳಿಕ ಸಂಸದೆ ಸುಮಲತಾ ಅಂಬರೀಶ್ ಮಾಧ್ಯಮದವರೊಂದಿಗೆ ಮಾತನಾಡಿ, ಇಂದು ನಮ್ಮೆಲ್ಲರ ಪ್ರೀತಿಯ ಅಂಬರೀಷ್ ಅವರ ಜನ್ಮ ಜಯಂತಿ ಸಂಭ್ರಮದಿಂದ ಆಚರಿಸಲು ನೀವೆಲ್ಲರೂ ಕಾಯುತ್ತಿರುತ್ತೀರಿ. ಆದರೆ ಕೊರೊನಾ ತಡೆಯಲು ದೇಶವೆಲ್ಲ ಶ್ರಮಿಸುತ್ತಿರುವಾಗ ನಾವು ಯಾವುದೇ ಸಾರ್ವಜನಿಕ ಆಚರಣೆ ಅಥವಾ ಸಮಾರಂಭ ಮಾಡುವುದು ಬೇಡವೆಂದು ಅವರು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ವರ್ಷ ಅವರನ್ನು ನಮ್ಮ ಮನಸ್ಸು ಮನೆಗಳಲ್ಲೇ ಆಚರಿಸೋಣ ಎಂದು ಕೇಳಿಕೊಂಡಿದ್ದಾರೆ.

ಅಂಬರೀಷ್ ಅವರಿದ್ದಾಗ ಪ್ರತಿ ವರ್ಷ ಅಭಿಮಾನಿಗಳು ರಾಜ್ಯದ ಮೂಲೆ ಮೂಲೆಗಳಿಂದ ಬಂದು ಸಂಭ್ರಮದಿಂದ ಆಚರಿಸುತ್ತಿದ್ದರು. ಆದರೆ ಕಳೆದ ಎರಡು ವರ್ಷಗಳಿಂದ ನಾವೇ ಮಂಡ್ಯಕ್ಕೆ ತೆರಳಿ ಅಲ್ಲಿ ಆಚರಿಸುತ್ತಿದ್ದೇವೆ. ಆದರೆ ಈ ವರ್ಷ ಕೊರೊನಾ ಕಾರಣದಿಂದ ಸಂಭ್ರಮದ ಆಚರಣೆ ಇಲ್ಲ ಎಂದರು.

ಮನೆಯಲ್ಲೇ ಇದ್ದು ಎಲ್ಲರೂ ಆಚರಿಸಿ. ಅವರ ಜೀವನದಿಂದ ಸ್ಫೂರ್ತಿ ಪಡೆದು ಕೆಲಸ ಮಾಡುತ್ತಿದ್ದೇನೆ. ಇಲ್ಲಿಂದ ಈಗ ಮಂಡ್ಯಕ್ಕೆ ತೆರಳಲಿದ್ದೇನೆ. ಅಲ್ಲಿ ಐಸಿಯು ಆನ್ ವೀಲ್ಸ್ ಉದ್ಘಾಟನೆ ಹಾಗೂ ಇತರೆ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಚಿತ್ರರಂಗಕ್ಕೆ ನೆರವು ಸಂಬಂಧ ಸಿಎಂ ಭೇಟಿ ಮಾಡಿ ಬಂದಿದ್ದೇನೆ, ರಾಜ್ಯ ಸರ್ಕಾರ ಚಿತ್ರರಂಗದ ಸಮಸ್ಯೆಗೆ ಸ್ಪಂದಿಸಬೇಕು ಅನ್ನೋದೆ ನನ್ನ ಮನವಿ ಆಗಿದೆ ಎಂದು ತಿಳಿಸಿದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು