Vijayapatha – ವಿಜಯಪಥ
Saturday, November 2, 2024
NEWSನಮ್ಮರಾಜ್ಯ

ಫ್ರೀಡಂ ಪಾರ್ಕ್‌ನಲ್ಲಿ ದೊರೆಸ್ವಾಮಿ ಪ್ರತಿಮೆ ಸ್ಥಾಪಿಸಿ: ಪೃಥ್ವಿರೆಡ್ಡಿ ಆಗ್ರಹ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಫ್ರೀಡಂ ಪಾರ್ಕಿನಲ್ಲಿ ದೊರೆಸ್ವಾಮಿಯವರ ಪ್ರತಿಮೆ ಹಾಗೂ ಜಯನಗರ ಮೆಟ್ರೋ ನಿಲ್ದಾಣಕ್ಕೆ ಅವರ ಹೆಸರನ್ನಿಡಲು ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಆಗ್ರಹಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ರಾಜ್ಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅವರ ನಿಧನದಿಂದ ಶೋಕತಪ್ತವಾಗಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ದೇಶದ ಸೇವೆ ಮಾಡಿದ ತಮ್ಮ ಜೀವಮಾನವಿಡೀ ಆಳುವ ಸರಕಾರಗಳನ್ನು ಎಚ್ಚರಿಸುತ್ತಾ, ನೊಂದವರ, ಬಡವರ ನೋವಿನ ದನಿಯಾಗುತ್ತಾ ಜೀವಿಸಿದ ಮಹಾನ್ ಚೇತನ. ಸರಕಾರ ಇವರ ಪ್ರತಿಮೆಯನ್ನು ಫ್ರೀಡಂ ಪಾರ್ಕಿನಲ್ಲಿ ಸ್ಥಾಪಿಸಬೇಕು ಎಂದು ಒತ್ತಾಯಿಸಿದ್ದಾರೆ.

ಎಚ್ ಎಸ್ ದೊರೆಸ್ವಾಮಿಯವರು ಸ್ವಾತಂತ್ರ್ಯ ಸಂಗ್ರಾಮಕ್ಕೇ ತಮ್ಮ ಹೋರಾಟವನ್ನು ನಿಲ್ಲಿಸದೆ ತಮ್ಮ ಕೊನೆಯ ಉಸಿರಿನ ತನಕ ಹೋರಾಟವನ್ನೇ ಬದುಕಾಗಿ ಮಾಡಿಕೊಂಡವರು. ರಾಜ್ಯದ ಆಡಳಿತ ಹಳಿತಪ್ಪಿದಾಗ ಅಧಿಕಾರದಲ್ಲಿ ಇದ್ದ ಎಲ್ಲಾ ಪಕ್ಷಗಳನ್ನೂ ಪ್ರಶ್ನಿಸಿದವರು. ಇವರ ಶತಮಾನದ ಬದುಕು ನಮಗೆಲ್ಲರಿಗೂ ಆದರ್ಶಪ್ರಾಯವಾಗಿದೆ ಎಂದು ತಿಳಿಸಿದ್ದಾರೆ.

ಇವರ ಜೀವನ ಮತ್ತು ಹೋರಾಟವನ್ನು ಜೀವಂತವಾಗಿಡಲು ಮತ್ತು ಮುಂದಿನ ಪೀಳಿಗೆಗೆ ಪ್ರೇರಣೆಯಾಗಿಸಲು ಸರಕಾರ ತಮ್ಮ ಹೋರಾಟದ ಬದುಕಿನ ಬಹುಕಾಲವನ್ನು ಕಳೆದ ಫ್ರೀಡಂ ಪಾರ್ಕಿನಲ್ಲಿ ಅವರ ಪ್ರತಿಮೆ ಸ್ಥಾಪಿಸಬೇಕು. ಜಯನಗರ ಮೆಟ್ರೋ ನಿಲ್ದಾಣಕ್ಕೆ ಅವರ ಹೆಸರಿಡಬೇಕು. ಅಲ್ಲದೇ ರಾಜ್ಯದ ಸರ್ವೋನ್ನತ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು. ಅಭಿವೃದ್ಧಿಯ ಕನಸು ಹೊತ್ತು ಬದುಕಿದ, ಸ್ವಾತಂತ್ರ ಹೋರಾಟದ ಕೊಂಡಿಯಾಗಿದ್ದ ದೊರೆಸ್ವಾಮಿಯವರ ಹೆಸರನ್ನು ಅಜರಾಮರವಾಗಿಸಬೇಕು ಎಂದು ಪೃಥ್ವಿ ರೆಡ್ಡಿ ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ