Vijayapatha – ವಿಜಯಪಥ
Saturday, November 2, 2024
Breaking NewsNEWSನಮ್ಮರಾಜ್ಯ

ಕೊರೊನಾದಿಂದ ಪಾಲಕರನ್ನು ಕಳೆದುಕೊಂಡ ಮಕ್ಕಳಿಗೆ ಮಾಸಿಕ 3500 ರೂ. ಸಹಾಯಧನ: ಸಿಎಂ ಬಿಎಸ್‌ವೈ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೊರೊನಾ ಸೋಂಕಿನ ಕಾರಣವಾಗಿ ಪಾಲಕರನ್ನು ಕಳೆದುಕೊಂಡ ಮಕ್ಕಳ ನೆರವಿಗೆ ರಾಜ್ಯ ಸರ್ಕಾರದಿಂದ “ಬಾಲ ಸೇವಾ ಯೋಜನೆ”ಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಶನಿವಾರ ಸರ್ಕಾರ ಈ ಯೋಜನೆ ರೂಪಿಸಿದ್ದು, ಈ ಯೋಜನೆಯಡಿ, ಕೊರೊನಾದಿಂದ ಪಾಲಕರನ್ನು ಕಳೆದುಕೊಂಡಿರುವ ಮಕ್ಕಳಿಗೆ ಪ್ರತಿ ತಿಂಗಳು 3500 ರೂ. ಹಾಗೂ ಹಲವು ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ವಿವರಿಸಿದರು.

ಕೇಂದ್ರ ಸರ್ಕಾರದ ಸಲಹೆ ಮೇರೆಗೆ, ಅನಾಥ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ನೆರವು ನೀಡಲಾಗುತ್ತಿದೆ. ಮಕ್ಕಳ ಭವಿಷ್ಯವನ್ನು ಉತ್ತಮವಾಗಿ ರೂಪಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.

21 ವರ್ಷ ತುಂಬಿರುವ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಸೇರಿದಂತೆ ಮುಂದಿನ ಜೀವನಕ್ಕೆ ಅನುಕೂಲ ಕಲ್ಪಿಸಲು 1 ಲಕ್ಷ ರೂ. ನೆರವು ನೀಡಲಾಗುವುದು. ರಕ್ಷಣೆಗೆ ಯಾರೂ ಇಲ್ಲದಂತಹ ಅನಾಥ ಮಕ್ಕಳನ್ನು ನೋಡಿಕೊಳ್ಳಲು ಸರ್ಕಾರದಿಂದ ಮಾರ್ಗದರ್ಶಿ/ ಹಿತೈಷಿಗಳನ್ನು ನೇಮಿಸಲಾಗುವುದು.

ವಿಸ್ತೃತ ಕುಟುಂಬದ ಆಸರೆಯಿಲ್ಲದ, 10 ವರ್ಷದೊಳಗಿನ ಅನಾಥರಾಗಿರುವ ಮಕ್ಕಳ ಪೋಷಣೆ ಮತ್ತು ಅವರಿಗೆ ಉತ್ತಮ ಶಿಕ್ಷಣ ಒದಗಿಸುವ ದೃಷ್ಟಿಯಿಂದ ಅಂತಹ ಮಕ್ಕಳನ್ನು ಸರ್ಕಾರಿ ಸ್ವಾಮ್ಯದ ಮಾದರಿ ವಸತಿ ಶಾಲೆಗಳಲ್ಲಿ ದಾಖಲು ಮಾಡಿಕೊಳ್ಳಲಾಗುವುದು. 10ನೇ ತರಗತಿ ಪೂರೈಸಿದ ಮಕ್ಕಳಿಗೆ ಉಚಿತ ಲ್ಯಾಪ್ ಟಾಪ್ ನೀಡಲಾಗುವುದು ಎಂದು ಹೇಳಿದರು.

ಇನ್ನು ಈ ಯೋಜನೆಯ ಸಮಗ್ರ ವಿವರಗಳನ್ನು ಶೀಘ್ರದಲ್ಲಿ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ