NEWSದೇಶ-ವಿದೇಶಶಿಕ್ಷಣ-

ವಿದೇಶಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಆದ್ಯತೆ ಮೇಲೆ ಕೊರೊನಾ ಲಸಿಕೆಗೆ ಮಾಜಿ ಸಿಎಂ ಎಚ್‌ಡಿಕೆ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮುಂದಿನ 2-3 ತಿಂಗಳಲ್ಲಿ ಸಾವಿರಾರು ಯುವ ಕನ್ನಡಿಗರು ವಿದ್ಯಾಭ್ಯಾಸಕ್ಕಾಗಿ ಹೊರದೇಶಗಳಿಗೆ ಹೋಗುವವರಿದ್ದಾರೆ. ಹಲವು ದೇಶಗಳು/ವಿಶ್ವವಿದ್ಯಾಲಯಗಳು ಈ ವಿದ್ಯಾರ್ಥಿಗಳು ಆಗಮಿಸುವ ಮುನ್ನ ಕೊರೊನಾ ಲಸಿಕೆ ತೆಗೆದುಕೊಂಡಿರಬೇಕು ಎಂಬ ಷರತ್ತು ವಿಧಿಸಿವೆ. ಇಂತಹ ವಿದ್ಯಾರ್ಥಿಗಳಿಗೆ ಶೀಘ್ರವಾಗಿ ಲಸಿಕೆ ನೀಡುವುದು ಸರ್ಕಾರದ ಕರ್ತವ್ಯ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಕೇರಳ, ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಹೊರದೇಶಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡುವ ಕ್ರಮ ಕೈಗೊಳ್ಳಲಾಗಿದೆ. ಅವರಂತೆ ರಾಜ್ಯ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಮುಖ್ಯ ಕಾರ್ಯದರ್ಶಿಗಳು ಕೂಡಲೇ ಗಮನಹರಿಸಿ ಕರ್ನಾಟಕದಲ್ಲಿಯೂ ಆದ್ಯತೆಯ ಮೇರೆಗೆ ಲಸಿಕೆ ನೀಡಿ ಓದುವ ಮಕ್ಕಳಿಗೆ ನೆರವಾಗಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯದಾದ್ಯಂತ ಕೋವಿಡ್ ವ್ಯಾಕ್ಸಿನೇಷನ್ ಕೇಂದ್ರಗಳನ್ನು ಕೂಡಲೇ ಜಾರಿಗೆ ಬರುವಂತೆ ಪ್ರಮುಖ ಆಸ್ಪತ್ರೆಗಳ ಬಳಿ ಇರುವ ಶಾಲೆಗಳು ಮತ್ತು ಕಾಲೇಜುಗಳನ್ನು ವ್ಯಾಕ್ಸಿನೇಷನ್ ಕೇಂದ್ರವನ್ನಾಗಿ ಪರಿವರ್ತಿಸಿ ಜನರ ಆರೋಗ್ಯವನ್ನು ಕಾಪಾಡಬೇಕು ಎಂದು ಸಲಹೆ ನೀಡಿದ್ದಾರೆ.

ವ್ಯಾಕ್ಸಿನ್ ಪಡೆಯುವ ಜಾಗದ ಪಕ್ಕದಲ್ಲೇ ಪಾಸಿಟಿವ್ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ವಾರ್ಡ್‌ಗಳಿವೆ. ಹೀಗಾಗಿ ಜನರಿಗೆ ಸೋಂಕು ತಗುಲುವ ಆತಂಕ ಎದುರಾಗಿದೆ. ಕೂಡಲೇ ಜಾರಿಗೆ ಬರುವಂತೆ ವ್ಯಾಕ್ಸಿನೇಷನ್ ಕೇಂದ್ರಗಳನ್ನು ಹತ್ತಿರದ ಶಾಲಾ-ಕಾಲೇಜುಗಳು, ಸಮುದಾಯ ಭವನಗಳಿಗೆ ಬದಲಾವಣೆ ಮಾಡಬೇಕೆಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...