Vijayapatha – ವಿಜಯಪಥ
Saturday, November 2, 2024
Breaking NewsNEWSನಮ್ಮಜಿಲ್ಲೆ

ಔಷಧಕ್ಕೆ ಹಣವಿಲ್ಲ ಆದರೆ, ಈಜುಕೊಳ ನಿರ್ಮಾಣಕ್ಕೆ ಹಣವಿದೆಯಾ?: ಡಿಸಿ ವಿರುದ್ಧ ಪ್ರತಾಪ್‌ ಸಿಂಹ ಕೆಂಡ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ಕೊರೊನಾದ ಈ ಸಂಕಷ್ಟದಲ್ಲಿ ಔಷಧಕ್ಕೆ ಹಣವಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳುತ್ತಾರೆ. ಆದರೆ ಅವರು ತಮ್ಮ ವೈಯಕ್ತಿಕ ಮೋಜಿಗಾಗಿ ಈಜುಕೊಳವನ್ನು ಸರ್ಕಾರದ 28 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿಕೊಂಡಿರುವುದಕ್ಕೆ ಹಣ ಇತ್ತ ಎಂದು ಸಂಸದ ಪ್ರತಾಪ್‌ ಸಿಂಹ ಹರಿಹಾಯ್ದಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್‌ ಬಂದಿರುವ ಈ ವೇಳೆ ಸರಕಾರದ ಬೊಕ್ಕಸವೆ ಬರಿದಾಗಿದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರೆ ಹೇಲುತ್ತಿದ್ದಾರೆ.  ಈ ನಡುವೆ ಪಿಎಂ ಕೇರ್ಸ್‌ ನಿಧಿಯಡಿ ಜಿಲ್ಲೆಗೆ 40 ವೆಂಟಿಲೇಟರ್‌ ಕೊಟ್ಟಿದ್ದಾರೆ. ಅದನ್ನು ಎಲ್ಲಿ ಅಳವಡಿಸಿದ್ದೀರಿ ಎಂದು ತರಾಟೆಗೆ ತೆಗೆದುಕೊಂಡರು.

ಇನ್ನು 41 ಕೋಟಿ ರೂ.ಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್‌ ಅವರು ಬಿಡುಗಡೆ ಮಾಡಿಸಿ ಜಿಲ್ಲೆಗೆ ತಂದಿದ್ದಾರೆ. ಆದರೆ ಈ ಹಣದಲ್ಲಿ 39 ಕೋಟಿ ರೂ. ವೆಚ್ಚವಾಗಿದೆ ಎಂದು ಜಿಲ್ಲಾಧಿಕಾರಿ ಹೇಳುತ್ತಿದ್ದಾರೆ. ಈ ಬಗ್ಗೆ ಲೆಕ್ಕಕೊಡಬೇಕು. ಈ ಹಣವನ್ನು ಯಾವುದಕ್ಕೆ ಖರ್ಚು ಮಾಡಿದ್ದೀರಿ, ಯಾವ ಗುತ್ತಿಗೆದಾರರಿಗೆ ವಿತರಿಸಿದ್ದೀರಿ ಎಂಬ ಬಗ್ಗೆ ಲೆಕ್ಕ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನು ಔಷಧ ಖರೀದಿಸಲು 25 ಲಕ್ಷ ರೂ. ಬಿಡುಗಡೆ ಮಾಡಿ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಕೇಳಿದರೆ ಹಣವಿಲ್ಲ ಎಂದು ಹೇಳಿದ್ದಾರೆ. ಆದರೆ, ಸ್ವಿಮ್ಮಿಂಗ್‌ ಪೂಲ್‌ ಕಟ್ಟಿರುವುದಕ್ಕೆ ಹಣವಿದೆ, ಔಷಧ ಖರೀದಿಸುವುದಕ್ಕೆ ಹಣವಿಲ್ಲ ಜತೆಗೆ ಅನುಮತಿ ಸಿಕ್ಕಿಲ್ಲ, ಟೆಂಟರ್‌ ಕರೆದಿಲ್ಲ ಎಂದು ಸಬೂಬು ಹೇಳುತ್ತೀರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಇವರಿಗೆ ಹೆರಿಟೇಜ್‌ ಕಟ್ಟದಲ್ಲಿ ಈಜುಕೊಳ ಕಟ್ಟಿಸಿಕೊಳ್ಳಲು ಯಾರು ಅನುಮತಿ ನೀಡಿದರು, ಹೆರಿಟೇಜ್‌ ಸಂಘಟನೆ ಮತ್ತು ಪಾಲಿಕೆಯಿಂದ ಅನುಮತಿ ಪಡೆದಿದ್ದಾರೆಯೇ ಎಂದು ಕಿಡಿಕಾರಿದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ