NEWSನಮ್ಮರಾಜ್ಯ

ತಾಯಿ- ವಿದೇಶದಿಂದ ಬಂದ ಮಗನನ್ನು ಬಲಿ ಪಡೆದ ಕೊರೊನಾ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೀದರ್: ವಿಶ್ವಮಾರಿ ಕೊರೊನಾ ತಾಯಿಯ ಜತೆಗೆ ಮಗನನ್ನು ಬಲಿ ಪಡೆದಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಮೂಲತಃ ಹುಮ್ನಬಾದ್ ತಾಲೂಕಿನ ಹಳ್ಳಿಖೇಡ್ ಗ್ರಾಮದ ಹಾಲಿ ಬೀದರ್ ನ ಬಸವನಗರದಲ್ಲಿ ನಿವಾಸಿ ತಾಯಿ ಪಾರ್ವತಿ(55) ಹಾಗೂ ಮಗ ಶಿವಕಾಂತ್ ಪಾಟೀಲ್(30) ಕೊರೊನಾಗೆ ಬಲಿಯಾದವರು. ಸರ್ಕಾರಿ ಶಾಲೆಯ ಶಿಕ್ಷಕಿಯಾಗಿದ್ದ ಪಾರ್ವತಿ ಕೋವಿಡ್‌ಗೆ ಏಪ್ರಿಲ್ 22 ರಂದು ಬಲಿಯಾಗಿದ್ದರು. ತಾಯಿ ಮೃತಪಟ್ಟ ಸುದ್ದಿ ತಿಳಿದು ಕೆನಾಡಾದಿಂದ ಬಂದ ಮಗನಿಗೂ ಕೊರೊನಾ ವಕ್ಕರಿಸಿತ್ತು. ಬಳಿಕ ಆತನಿಗೆ ಬ್ರಿಮ್ಸ್ ನಲ್ಲಿ ಹಲವು ದಿನಗಳು ಚಿಕಿತ್ಸೆ ನೀಡಲಾಯಿತ್ತು.

ಚಿಕಿತ್ಸೆ ನೀಡಿದರೂ ಅನಾರೋಗ್ಯ ಹೆಚ್ಚಾದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೈದರಾಬಾದ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಆನೂ ಅಸುನೀಗಿದ್ದಾನೆ.

ಎರಡು ವರ್ಷಗಳಿಂದ ಕೆನಡಾದಲ್ಲಿ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಹಲವು ವರ್ಷಗಳಿಂದ ಬೀದರ್ ನ ಬಸವನಗರದಲ್ಲಿ ವಾಸವಾಗಿದ್ದರು. ತಾಯಿಯನ್ನು ನೋಡಲು ವಿದೇಶದಿಂದ ಬಂದ ಮಗನೂ ಸೋಂಕಿನಿಂದ ಅಸುನೀಗಿದ್ದಾನೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು