NEWSದೇಶ-ವಿದೇಶ

ಸರ್ಕಾರದ ಸಿಎಸ್‌ ಬಿಡಲು ಸದ್ಯಕ್ಕೆ ಸಾಧ್ಯವಿಲ್ಲ: ಪ್ರಧಾನಿ ಮೋದಿಗೆ ಟಾಂಗ್‌ ಕೊಟ್ಟ ದೀದಿ

ವಿಜಯಪಥ ಸಮಗ್ರ ಸುದ್ದಿ

ವಿಯಜಪಥ ಸಮಗ್ರ ಸುದ್ದಿ
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಿಂದ ಆರಂಭಗೊಂಡ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡುವಿನ ಹಗ್ಗ-ಜಗ್ಗಾಟ ಈಗ ಮತ್ತೊಂದು ವಿಷಯದಲ್ಲಿ ತಾರಕಕ್ಕೇರುತ್ತಿದೆ.

ಪಶ್ಚಿಮ ಬಂಗಾಳ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡೋಪಾಧ್ಯಾಯ ಅವರ ಸೇವೆ ಹಿಂಪಡೆಯುವಂತೆ ಕೇಂದ್ರ ಸರ್ಕಾರ ನೀಡಿರುವ ಆದೇಶವನ್ನು ಹಿಂಪಡೆಯಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಈ ಸಮಯದಲ್ಲಿ ಅವರನ್ನು ತಕ್ಷಣಕ್ಕೆ ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ಬಿಟ್ಟುಬಿಡಲು ಸಾದ್ಯವಿಲ್ಲ ಎಂದು ಕೂಡ ಮಮತಾ ಬ್ಯಾನರ್ಜಿ ಪಟ್ಟು ಹಿಡಿದಿದ್ದಾರೆ.

ಈ ಕುರಿತು ಸೋಮವಾರ 5 ಪುಟಗಳ ಪತ್ರವನ್ನು ಪ್ರಧಾನಿಗೆ ಬರೆದಿರುವ ಸಿಎಂ ಮಮತಾ, ಮೂರು ತಿಂಗಳ ವಿಸ್ತರಣೆ ನೀಡಿ ಮುಖ್ಯ ಕಾರ್ಯದರ್ಶಿಗಳ ಸೇವೆಯನ್ನು ವಿಸ್ತರಿಸಿ ಇದೀಗ ಹಿಂತೆಗೆದುಕೊಳ್ಳುವ ನಿರ್ಧಾರ ಮಾಡಿರುವ ಕೇಂದ್ರ ಸರ್ಕಾರ ತನ್ನ ನಿಲುವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ.

ಕೊರೊನಾದ ಈ ಕ್ಲಿಷ್ಟ ಪರಿಸ್ಥಿತಿಯಲ್ಲಿ ನಮ್ಮ ಸರ್ಕಾರ ಮುಖ್ಯ ಕಾರ್ಯದರ್ಶಿಗಳನ್ನು ಬಿಟ್ಟುಕೊಡುವುದಿಲ್ಲ, ಮುಖ್ಯ ಕಾರ್ಯದರ್ಶಿಗಳನ್ನು ಇಲ್ಲಿಗೆ ಕಳುಹಿಸುವಾಗ ಹೊರಡಿಸಿದ್ದ ಕಾನೂನಾತ್ಮಕ ಸಮಾಲೋಚನೆ ಮತ್ತು ಸೂಕ್ತ ಕಾನೂನಿಗೆ ಬದ್ಧವಾಗಿ ಸರ್ಕಾರ ಅದನ್ನು ಮೌಲ್ಯಯುತ ಎಂದು ಪರಿಗಣಿಸಿ ಮುಖ್ಯ ಕಾರ್ಯದರ್ಶಿಗಳನ್ನು ಮುಂದುವರಿಸಲಿದೆ ಎಂದು ಮಮತಾ ಪತ್ರದಲ್ಲಿ ವಿವರಿಸಿದ್ದಾರೆ.

ಕೇಂದ್ರ ಸರ್ಕಾರದ ಈ ಏಕಪಕ್ಷೀಯ ಆದೇಶ, ಒಂದು ಅವಿವೇಕದ ನಿರ್ಧಾರವಾಗಿದ್ದು, ನಿಮ್ಮ ಈ ಅವಿವೇಕತನದ ನಿರ್ಧಾರ ಪಶ್ಚಿಮ ಬಂಗಾಳ ಜನರ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ. ನಿಮ್ಮ ಆದೇಶವನ್ನು ಸಾರ್ವಜನಿಕ ಹಿತಾಸಕ್ತಿಯಿಂದ ಹಿಂತೆಗೆದುಕೊಳ್ಳುವಂತೆ ನಾನು ವಿನಮ್ರವಾಗಿ ವಿನಂತಿಸುತ್ತೇನೆ. ಪಶ್ಚಿಮ ಬಂಗಾಳದ ಜನರ ಪರವಾಗಿ ನಿಮ್ಮ ಆತ್ಮಸಾಕ್ಷಿಗೆ ಮತ್ತು ಉತ್ತಮ ಪ್ರಜ್ಞೆಗೆ ನಾನು ಮನವಿ ಮಾಡುತ್ತೇನೆ ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ಬ್ಯಾನರ್ಜಿ ಹೇಳಿದ್ದಾರೆ.

ಕೇಂದ್ರ ಸರ್ಕಾರದ ನಿರ್ಧಾರ ಆಘಾತವನ್ನುಂಟುಮಾಡಿದೆ. ತಮ್ಮ ಜೊತೆ ಸಮಾಲೋಚನೆ ನಡೆಸದೆ ಕೇಂದ್ರ ಏಕಪಕ್ಷೀಯವಾಗಿ ತೀರ್ಮಾನ ತೆಗೆದುಕೊಂಡಿದೆ ಎಂದು ಬ್ಯಾನರ್ಜಿ ಆರೋಪಿಸಿದ್ದು, ಕೇಂದ್ರ ಸರ್ಕಾರ ಅಚ್ಚರಿಯ ನಡೆಯೊಂದರಲ್ಲಿ ಮೇ 28ರಂದು ರಾತ್ರಿ, ತಮಗೆ ಅಲಪನ್ ಬಂಡೋಪಾಧ್ಯಾಯ ಅವರ ಸೇವೆ ಬೇಕಾಗಿದ್ದು, ತಕ್ಷಣವೇ ಅವರನ್ನು ಬಿಟ್ಟುಕೊಡಿ ಎಂದು ಕೇಳಿತ್ತು ಎಂದು ತಿಳಿಸಿದ್ದಾರೆ.

1987ರ ವಿಭಾಗದ ಪಶ್ಚಿಮ ಬಂಗಾಳ ಕ್ಯಾಡರ್‌ನ ಐಎಎಸ್ ಅಧಿಕಾರಿಯಾಗಿರುವ ಬಂಡೋಪಾಧ್ಯಾಯ ಅವರಿಗೆ 60 ವರ್ಷವಾಗಿದ್ದು ಸೋಮವಾರ ಸೇವೆಯಿಂದ ನಿವೃತ್ತರಾಗಬೇಕಾಗಿತ್ತು. ಆದರೆ ಕೋವಿಡ್ ನಿರ್ವಹಣೆಗೆಂದು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿ ಮೂರು ತಿಂಗಳ ಸೇವಾವಧಿ ವಿಸ್ತರಣೆಗೆ ಅನುಮತಿ ನೀಡಿತ್ತು.

ಮೇ 28ರಂದು ಸಿಬ್ಬಂದಿ ಸಚಿವಾಲಯವು ಭಾರತೀಯ ಆಡಳಿತ ಸೇವೆ (ಕೇಡರ್) ನಿಯಮಗಳು, 1954 ರ ನಿಬಂಧನೆಗಳ ಪ್ರಕಾರ, ತಕ್ಷಣದ ಜಾರಿಗೆ ಬರುವಂತೆ ಬಂಡೋಪಾಧ್ಯಾಯರ ಸೇವೆಗಳನ್ನು ಭಾರತ ಸರ್ಕಾರದೊಂದಿಗೆ ನಿಯೋಜಿಸಲು ಕ್ಯಾಬಿನೆಟ್ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ ಎಂದು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇಂದು ಸೋಮವಾರ ಬೆಳಗ್ಗೆ 10 ಗಂಟೆಗೆ ಬಂಡೋಪಾಧ್ಯಾಯ ಅವರು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ದೆಹಲಿಯಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಕೂಡ ಕೇಂದ್ರ ಆದೇಶ ನೀಡಿದೆ.

ಇದು ಕಿತ್ತಾಡುವ ಸಮಯವಲ್ಲ: ಅರವಿಂದ್ ಕೇಜ್ರಿವಾಲ್
ಮುಖ್ಯ ಕಾರ್ಯದರ್ಶಿಗಳ ವರ್ಗಾವಣೆ ವಿಚಾರದಲ್ಲಿ ರಾಜಕೀಯ ಮಾಡುವ, ಕಿತ್ತಾಡುವ ಸಮಯ ಇದಲ್ಲ, ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳ ಸರ್ಕಾರದೊಂದಿಗೆ ಈ ರೀತಿ ಕೊರೊನಾ ಸಮಯದಲ್ಲಿ ವರ್ತಿಸಬಾರದು, ಬದಲಿಗೆ ಕೊರೊನಾ ವಿರುದ್ಧ ಹೋರಾಟದಲ್ಲಿ ರಾಜ್ಯ ಸರ್ಕಾರಗಳಿಗೆ ಸಹಕಾರ ನೀಡಬೇಕು ಎಂದು ಟ್ವೀಟ್‌ ಮೂಲಕ  ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯಿಸಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು