NEWSದೇಶ-ವಿದೇಶಶಿಕ್ಷಣ-

ದ್ವಿತೀಯ ಪಿಯುಸಿ ಸಿಬಿಎಸ್ಇ ಪರೀಕ್ಷೆ ರದ್ದು: ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ನಿರ್ಧಾರ ಎಂದ ಪ್ರಧಾನಿ ಮೋದಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ಮಹಾಮಾರಿ ಕೊರೊನಾ ಎರಡನೇ ಅಲೆ ದೇಶದಲ್ಲಿ ಆತಂಕ ಸೃಷ್ಟಿಸುತ್ತಿದ್ದು ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ 2021ನೇ ಸಾಲಿನ ಸಿಬಿಎಸ್ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಂಗಳವಾರ ಸಂಜೆ ನಡೆದ 12ನೇ ತರಗತಿ ಪರೀಕ್ಷೆ ಕುರಿತಂತೆ ನಿರ್ಣಾಯಕ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಕೋವಿಡ್ ಕಾರಣದಿಂದ ಅನಿಶ್ಚಿತ ಪರಿಸ್ಥಿತಿ ಹಿನ್ನೆಲೆಯಲ್ಲಿ ಮತ್ತು ವಿವಿಧ ಭಾಗೀದಾರರ ಅಭಿಪ್ರಾಯಗಳನ್ನು ಪರಿಗಣಿಸಿ ಸಿಬಿಎಸ್ಇ 12ನೇ ತರಗತಿ ಪರೀಕ್ಷೆಗಳನ್ನು ಈ ವರ್ಷ ನಡೆಸದಿರಲು ನಿರ್ಧರಿಸಲಾಗಿದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ ವರ್ಷದಂತೆ, ಪರೀಕ್ಷೆಗಳನ್ನು ತೆಗೆದುಕೊಳ್ಳಲು ವಿದ್ಯಾರ್ಥಿಗಳು ಇಚ್ಛಿಸಿದರೆ, ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ನಂತರ ಸಿಬಿಎಸ್ಇ ಇಂತಹ ಆಯ್ಕೆಯನ್ನು ಪರಿಗಣಿಸಲು ಸಹ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದಕ್ಕೂ ಮುನ್ನ ಸರ್ಕಾರ 10ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸಿತ್ತು.

ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಕೆಲ ರಾಜ್ಯಗಳಲ್ಲಿ ಸೂಕ್ತ ಕ್ರಮಗಳೊಂದಿಗೆ ಸಾಂಕ್ರಾಮಿಕವನ್ನು ನಿರ್ವಹಿಸಲಾಗುತ್ತಿದೆ. ಕೆಲ ರಾಜ್ಯಗಳು ಲಾಕ್ ಡೌನ್ ಅನ್ನು ಇನ್ನೂ ಮುಂದುವರಿಸುತ್ತಿವೆ. ಪೋಷಕರು ಮತ್ತು ಶಿಕ್ಷಕರು ಸ್ವಾಭಾವಿಕವಾಗಿ ಸದ್ಯದ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಆತಂಕಗೊಂಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳನ್ನು ಬಲವಂತವಾಗಿ ಪರೀಕ್ಷೆಗೆ ಕಳುಹಿಸುವುದು ಸೂಕ್ತವಲ್ಲ ಎಂದು ಪ್ರಧಾನಿ ಹೇಳಿರುವುದಾಗಿ ಪ್ರಕಟಣೆ ತಿಳಿಸಿದೆ.

“ಭಾರತ ಸರ್ಕಾರವು ಸಿಬಿಎಸ್ಇ 12ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಲು ನಿರ್ಧರಿಸಿದೆ. ವ್ಯಾಪಕ ಸಮಾಲೋಚನೆಯ ನಂತರ, ನಾವು ವಿದ್ಯಾರ್ಥಿ-ಸ್ನೇಹಿಯಾಗಿರುವ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ಅದು ವಿದ್ಯಾರ್ಥಿಗಳ ಆರೋಗ್ಯ ಮತ್ತು ನಮ್ಮ ಯುವ ಭವಿಷ್ಯದ ರಕ್ಷಣೆ ದೃಷ್ಟಿಯಿಂದಾಗಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್