NEWSನಮ್ಮರಾಜ್ಯ

ಕೇರಳ ಪಾಲಾದ ಕೆಎಸ್‌ಆರ್‌ಟಿಸಿ: ಮುಂದೆ ಯಾವ ಪದನಾಮ?

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ತಿರುವನಂತಪುರ: ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳೆರಡೂ ಕೆಎಸ್‌ಆರ್‌ಟಿಸಿ ಎಂದು ಬಳಕೆ ಮಾಡುತ್ತಿರುವ ಟ್ರೇಡ್‌ ಮಾರ್ಕ್ ವಿಷಯಕ್ಕೆ ಸಂಬಂಧಿಸಿದಂತೆ 7 ವರ್ಷಗಳಿಂದ ನಡೆಯುತ್ತಿದ್ದ ವ್ಯಾಜ್ಯಕ್ಕೆ ಕೊನೆಗೂ ತೆರೆ ಬಿದ್ದಿದೆ. ʻಕೆಎಸ್‌ಆರ್‌ಟಿಸಿʼ ಹೆಸರನ್ನು ಬಳಸಿಕೊಳ್ಳಲು ನಮಗೆ ಅವಕಾಶ ನೀಡಲಾಗಿದೆ ಎಂದು ಕೇರಳ ಸರ್ಕಾರ ಹೇಳಿದೆ.

ಕರ್ನಾಟಕ ಮತ್ತು ಕೇರಳ ಸಾರಿಗೆ ಸಂಸ್ಥೆಗಳೆರಡೂ ‘ಕೆಎಸ್‌ಆರ್‌ಟಿಸಿ’ ಎಂದು ತಮ್ಮ ಹೆಸರಿನ ಸಂಕ್ಷಿಪ್ತ ರೂಪವನ್ನು ಬಳಸಿಕೊಳ್ಳುತ್ತಿದ್ದವು. ಆದರೆ, ಇನ್ಮುಂದೆ ‘ಕೆಎಸ್‌ಆರ್‌ಟಿಸಿ’ ಎಂಬುದನ್ನು ಬಳಸಲು ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಮಾತ್ರ ಅವಕಾಶ ಇದೆ ಎಂದು ಕೇರಳದ ಸಾರಿಗೆ ಸಚಿವ ಆ್ಯಂಟನಿ ರಾಜು ಹೇಳಿದ್ದಾರೆ.

ಟ್ರೇಡ್ ಮಾರ್ಕ್‌ ರಿಜಿಸ್ಟ್ರಿ ಸಂಸ್ಥೆಯು ಟ್ರೇಡ್‌ಮಾರ್ಕ್‌ ಕಾಯ್ದೆ 1999ರ ಅನ್ವಯ ಕೆಎಸ್‌ಆರ್‌ಟಿಸಿ, ಅದರ ಲಾಂಛನ ಮತ್ತು ವ್ಯಾಪಕವಾಗಿ ಬಳಕೆಯಲ್ಲಿರುವ ‘ಆನ ವಂಡಿ’ ಎಂಬ ಹೆಸರನ್ನು ಕೇರಳ ರಸ್ತೆ ಸಾರಿಗೆ ನಿಗಮಕ್ಕೆ ನೀಡಿದೆ ಎನ್ನಲಾಗಿದೆ.

ಕೇರಳ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಬಿಜು ಪ್ರಭಾಕರ್‌ ಅವರು, ʻಕೆಎಸ್‌ಆರ್‌ಟಿಸಿ ಹೆಸರನ್ನು ಬಳಸದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ನೋಟಿಸ್ ನೀಡಲಾಗುವುದುʼ ಎಂದು ಹೇಳಿದ್ದಾರೆ.

ಈ ಸಂಬಂಧ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ಪ್ರತಿಕ್ರಿಯಿಸಿ, ಈ ವಿವಾದಕ್ಕೆ ಸಂಬಂಧಿಸಿದಂತೆ 7 ವರ್ಷಗಳಿಂದ ವ್ಯಾಜ್ಯ ನಡೆಯುತ್ತಿತ್ತು. ಕೇರಳ ಪರವಾಗಿ ಆದೇಶ ನೀಡಲಾಗಿದೆ ಎಂಬ ಮಾಹಿತಿ ಇದೆ. ಇನ್ನೂ ಅಧಿಕೃತವಾಗಿ ವಿಷಯ ಮುಟ್ಟಿಲ್ಲ. ಮೊದಲು ಮೈಸೂರು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಎಂಎಸ್‌ಆರ್‌ಟಿಸಿ) ಆಗಿತ್ತು. ಬಳಿಕ ಕೆಎಸ್‌ಆರ್‌ಟಿಸಿ ಎಂದು ಬದಲಿಸಿಕೊಳ್ಳಲಾಗಿದೆ. ಅದಕ್ಕೂ ಮೊದಲೇ ಕೇರಳದಲ್ಲಿ ಕೆಎಸ್‌ಆರ್‌ಟಿಸಿ ಎಂದು ಬಳಕೆಯಲ್ಲಿದ್ದ ಕಾರಣ ಅವರ ಪರವಾಗಿ ಆದೇಶ ನೀಡಿರಬಹುದು. ಅಧಿಕೃತವಾಗಿ ಆದೇಶ ತಲುಪಿದ ಬಳಿಕ ಕಾನೂನು ಅಭಿಪ್ರಾಯ ಪಡೆದುಕೊಂಡು ಮುಂದಿನ ಹೆಜ್ಜೆ ಇಡಲಾಗುವುದುʼ ಎಂದು ತಿಳಿಸಿದ್ದಾರೆ.

ಕೆಎಸ್‌ಆರ್‌ಟಿಸಿ ಸಂಕ್ಷಿಪ್ತ ಹೆಸರಿಗಾಗಿ ಕರ್ನಾಟಕ ಮತ್ತು ಕೇರಳದ ನಡುವೆ 7 ವರ್ಷಗಳಿಂದಲೂ ವಿವಾದ ಇದೆ. ಈ ಹೆಸರನ್ನು ಬಳಸಬಾರದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಕೇರಳ ರಸ್ತೆ ಸಾರಿಗೆ ನಿಗಮಕ್ಕೆ ನೋಟಿಸ್‌ ನೀಡಿತ್ತು. ತಾವು 1965ರಿಂದಲೇ ಪದ ಬಳಕೆ ಮಾಡುತ್ತಿದ್ದು, ನಮಗೆ ಅವಕಾಶ ನೀಡಬೇಕು ಎಂದು ಕೇರಳ ರಸ್ತೆ ಸಾರಿಗೆ ನಿಗಮವು ಟ್ರೇಡ್ ಮಾರ್ಕ್ ರಿಜಿಸ್ಟ್ರಿಗೆ ಅರ್ಜಿ ಕೊಟ್ಟಿತು.

ಅಲ್ಲದೆ 1973ರ ಬಳಿಕ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕೆಎಸ್‌ಆರ್‌ಟಿಸಿ ಎಂದು ಬಳಕೆ ಮಾಡುತ್ತಿದೆ. ಹೀಗಾಗಿ ಮೊದಲು ನಾವು ಕೆಎಸ್‌ಆರ್‌ಟಿಸಿ ಪದ ಬಳಕೆ ಮಾಡುತ್ತಿದ್ದು ನಮಗೇ ನೀಡಬೇಕು ಎಂದು ಕೇಳಿತ್ತು. ಈಗ ಹಲವು ವರ್ಷಗಳ ಕಾನೂನು ಹೋರಾಟದ ಬಳಿಕ ಕೆಎಸ್‌ಆರ್‌ಟಿಸಿ ಕೇರಳಕ್ಕೆ ಸಿಕ್ಕಿದೆ ಎಂದು ಕೇರಳ ರಸ್ತೆ ಸಾರಿಗೆ ನಿಗಮ ತಿಳಿಸಿದೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್