NEWSನಮ್ಮಜಿಲ್ಲೆ

ಮೈಸೂರು ಡಿಸಿ ವರ್ಗಾವಣೆಗೆ ಆಗ್ರಹಿಸಿ ಪಾಲಿಕೆ ಸದಸ್ಯ ಲೋಕೇಶ್‌ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ಮೈಸೂರಿನಲ್ಲಿ ಕೋವಿಡ್​ ನಿರ್ವಹಣೆ ವಿಚಾರ ಸಂಬಂಧಿಸಿದಂತೆ ರೋಹಿಣಿ ಸಿಂಧೂರಿ ಅವರ ನಡೆಗೆ ಬೇಸತ್ತು ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್​ ಹುದ್ದೆಗೆ ರಾಜೀನಾಮೆ ನೀಡಿದ ಬರನ್ನಲ್ಲೇ ಮೈಸೂರು ಪಾಲಿಕೆ ಸದಸ್ಯ ಲೋಕೇಶ್‌ ಜಿಲ್ಲಾಧಿಕಾರಿ ವರ್ಗಾವಣೆಗೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದಾರೆ.

ಒಬ್ಬ ಐಎಎಸ್ ಅಧಿಕಾರಿಯಾಗಿ ಮತ್ತೊಬ್ಬ ಅಧಿಕಾರಿಗೆ ತೊಂದರೆ ಕೊಡುವುದು ಸರಿಯಲ್ಲ. ಜಿಲ್ಲಾಧಿಕಾರಿ ಪಾಲಿಕೆ ಅಧಿಕಾರಿಗಳಿಗೆ ತೊಂದರೆ ಕೊಡುತ್ತಿದ್ದಾರೆ. ಎಲ್ಲರಿಗೂ ಒಂದು ಸಹನೆ ಇರುತ್ತದೆ. ಪ್ರತಿದಿನ ನಮ್ಮ ಅಧಿಕಾರಿಗಳನ್ನು ಸಭೆ ಕರೆದು ಅವಮಾನ‌ ಮಾಡಲಾಗುತ್ತಿದೆ ಎಂದು ರೋಹಿಣಿ ಸಿಂಧೂರಿ ವಿರುದ್ಧ ಲೋಕೇಶ್‌ ಕಿಡಿಕಾರಿದರು.

ಜಿಲ್ಲಾಧಿಕಾರಿ ಶೋಮ್ಯಾನ್‌ ಇವರಿಂದ ಜಿಲ್ಲೆಗೆ ಯಾವುದೇ ಕೆಲಸವಾಗುತ್ತಿಲ್ಲ. ಜತೆಗೆ ಇವರು ಅಧಿಕಾರಿಗಳಿಗೆ ಕಿರುಕುಳಕೊಡುವುದನ್ನೇ ಕೆಲಸವಾಗಿಸಿಕೊಂಡಿದ್ದಾರೆ. ಎಲ್ಲೋ ಕುಳಿತುಕೊಂಡು ಕೆಲಸವಾಗಿದೆ ಎಂಬ ರೀತಿ ಬಿಂಬಿಸಿಕೊಳ್ಳಲು ಹೊರಟಿದ್ದಾರೆ. ಇದು ಅಕ್ಷಮ್ಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನು ಈ ಇಬ್ಬರು ಅಧಿಕಾರಿಗಳ ನಡುವೆ ಸಂಧಾನ ಸಭೆ ನಡೆಸಲು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಮತ್ತು ಸಿಎಸ್‌ ಆಗಮಿಸಲಿದ್ದು ಇಂದು ಸಂಧಾನವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...