ವಿಜಯಪಥ ಸಮಗ್ರ ಸುದ್ದಿ
ಮೈಸೂರು: ಕೊರೊನಾ ಸೋಂಕು ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಗ್ಗುತ್ತಿದೆ. ಇದಕ್ಕೂ ಮೊದಲು ಕೊರೊನಾ ನಿಯಂತ್ರಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜೂ.14ರವರೆಗೆ ಲಾಕ್‌ಡೌನ್ ವಿಸ್ತರಣೆ ಮಾಡಿದೆ. ಹೀಗಾಗಿ ಮೈಸೂರು ಜಿಲ್ಲೆಯಲ್ಲಿ ಎರಡು ದಿನಗಳ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿತ್ತು. ಈಗ ಮೂರು ದಿನಗಳ ಕಾಲ ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಮೇ 29ರಿಂದ ಜೂ.7ರವರೆಗೆ ಸೋಮವಾರ ಮತ್ತು ಗುರುವಾರ ಎರಡೂ ದಿನ ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡುವ ಮೂಲಕ ಲಾಕ್‌ಡೌನ್ ಕಠಿಣಗೊಳಿಸಲಾಗಿತ್ತು.
ಈಗ ಮತ್ತೆ ಜೂ.14ರವರೆಗೂ ಲಾಕ್‌ಡೌನ್ ವಿಸ್ತರಣೆ ಆಗಿದ್ದು, ಜೂ.7ರಿಂದ 14ರ ವರೆಗೆ ಸೋಮವಾರ, ಬುಧವಾರ, ಶುಕ್ರವಾರ ಮೂರು ದಿನ ಅಗತ್ಯ ವಸ್ತು ಮತ್ತು ದಿನಸಿ ಮಾರಾಟಕ್ಕೆ ಅವಕಾಶ ನೀಡಿದೆ. ಈ ಮೂರು ದಿನಗಳಲ್ಲಿ ಬೆಳಗ್ಗೆ 6ರಿಂದ ಬೆಳಗ್ಗೆ 10 ಗಂಟೆಯವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.