NEWSನಮ್ಮಜಿಲ್ಲೆವಿಜ್ಞಾನ

ಪ್ರಯಾಣಿಕರ ಜೇಬಿಗೆ ಕತ್ತರಿಹಾಕಲು ತಯಾರಾಗುತ್ತಿದೆ ಬಿಎಂಟಿಸಿ: ಶೇ.20ರಷ್ಟು ಬಸ್‌ ಟಿಕೆಟ್‌ ದರ ಹೆಚ್ಚಳ ಸಾಧ್ಯತೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಅನ್​ಲಾಕ್​ ಬಳಿಕ ಬಿಎಂಟಿಸಿ ಬಸ್​ ಟಿಕೆಟ್‌ ದರವನ್ನು ಶೇ.20ರಷ್ಟು ಹೆಚ್ಚಿಸಲು ಸಾರಿಗೆ ಸಂಸ್ಥೆ ಚಿಂತನೆ ನಡೆಸಿದ್ದು, ಪ್ರಯಾಣಿಕರ ಮೇಲೆ ಮತ್ತೆ ಆರ್ಥಿಕ ಹೊರೆ ಹೇರಲು ಮುಂದಾಗಿದೆ.

ಇಂದಿನಿಂದ ರಾಜ್ಯಾದ್ಯಂತ ಕೆಎಸ್​ಆರ್​ಟಿಸ್ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಈ ನಡುವೆ ಲಾಕ್‌ಡೌನ್‌ ತೆರವಾದ ಕೂಡಲೇ ಬೆಂಗಳೂರಿನಲ್ಲಿ ಬಿಎಂಟಿಸಿ ಟಿಕೆಟ್‌ ದರವನ್ನು ಹೆಚ್ಚಿಸಲು ಚಿಂತನೆ ನಡೆಸಲಾಗಿದೆ. ಇದರಿಂದ ಲಾಕ್​ಡೌನ್ ಬಳಿಕ ಬಿಎಂಟಿಸಿ ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳುವುದು ಬಹುತೇಕ ಖಚಿತ ಎನ್ನಲಾಗಿದೆ.

ಟಿಕೆಟ್ ದರ ಹೆಚ್ಚಿಸುವಂತೆ ಈಗಾಗಲೇ ಸರ್ಕಾರಕ್ಕೆ ಬಿಎಂಟಿಸಿ ನಿಗಮ ಪ್ರಸ್ತಾವನೆ ಸಲ್ಲಿಸಿದೆ. ಡೀಸೆಲ್ ಬೆಲೆ ಗಣನೀಯವಾಗಿ ಏರಿಕೆಯಾಗುತ್ತಿರುವುದರಿಂದ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಈ ಹಿಂದೆ ಬಜೆಟ್ ಸಂದರ್ಭದಲ್ಲಿ ಬಿಎಂಟಿಸಿ ಟಿಕೆಟ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಸರ್ಕಾರ ಆಗ ಹೆಚ್ಚಳದ ಪ್ರಸ್ತಾವನೆಯನ್ನು ತಿರಸ್ಕರಿಸಿತ್ತು. ಕಳೆದ ವರ್ಷ ಜೂನ್ ನಲ್ಲಿ 65.85 ರೂಪಾಯಿ ಇದ್ದ ಡಿಸೇಲ್ ಬೆಲೆ ಈ ವರ್ಷ ಜೂನ್ ನಲ್ಲಿ 91.18 ರೂಪಾಯಿಗೆ ಏರಿಕೆಯಾಗಿದೆ. ಕೊರೊನಾದಿಂದಾಗಿ ಬಿಎಂಟಿಸಿ ಬಸ್ ಸಂಚಾರ ಸಂಪೂರ್ಣ ಸ್ತಬ್ಧವಾಗಿತ್ತು. ಹೀಗಾಗಿ, ಆರ್ಥಿಕ ನಷ್ಟದಿಂದಾಗಿ ಟಿಕೆಟ್ ದರ ಹೆಚ್ಚಳ ಕುರಿತು ಬಿಎಂಟಿಸಿ ನಿಗಮ ಸರ್ಕಾರಕ್ಕೆ ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಸಿದೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು