NEWSನಮ್ಮಜಿಲ್ಲೆ

ಮೈಸೂರು ನನಗೆ ತಾಯಿ ಮನೆ ಅನುಭವ ನೀಡಿದೆ: ಭಾವುಕರಾದ ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ಮೈಸೂರಿನಲ್ಲಿ ಕಳೆದ 8 ತಿಂಗಳಿಂದ ಉತ್ತಮ ಕೆಲಸ ಮಾಡಿದ್ದೇನೆ. ಹೀಗಾಗಿ ನಾನು ವರ್ಗಾವಣೆ ಆದೇಶವನ್ನು ನಿರೀಕ್ಷಿಸಿರಲಿಲ್ಲ ಎಂದು ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೊರೊನಾ ಪರಿಸ್ಥಿತಿಯನ್ನು ನಿಯಂತ್ರಿಸಿದ್ದೆ, ಕೋವಿಡ್​​ ತಗ್ಗುತ್ತಿರುವ ಈ ಸಮಯದಲ್ಲಿ ನನ್ನನ್ನು ಟ್ರಾನ್ಸ್​ಫರ್​ ಮಾಡಿರುವುದು ನಿಜಕ್ಕೂ ಅಚ್ಚರಿ ತಂದಿದೆ. ಕಳೆದ 1 ತಿಂಗಳಿಂದ ಯಾವೆಲ್ಲಾ ಶಾಸಕರು, ಸಂಸದರು, ಅಧಿಕಾರಿಗಳು ನನ್ನ ವಿರುದ್ಧ ಏನೆಲ್ಲ ಪಿತೂರಿ ಮಾಡಿದ್ದಾರೆಂಬುದು ಎಲ್ಲರ ಮುಂದೆಯೂ ಇದೆ ಎಂದು ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದರು.

ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಮೈಸೂರಿನ ಜನತೆಗೆ ಧನ್ಯವಾದ ಹೇಳಿದ್ದಾರೆ. ಮೈಸೂರು ನನಗೆ ತಾಯಿ ಮನೆ ಅನುಭವ ನೀಡಿದೆ. ಒಬ್ಬ ಮಗಳಾಗಿ ಮೈಸೂರಿನ ಎಲ್ಲಾ ಜನತೆಗೆ ನಾನು ಧನ್ಯವಾದ ಹೇಳುತ್ತೇನೆ. ಈ ವರ್ಗಾವಣೆ ಅರೀಕ್ಷಿತ. ಒಳ್ಳೆಯ ಕೆಲಸ ಮಾಡುವ ಸಮಯದಲ್ಲಿ ಈ ವರ್ಗಾವಣೆ ಒಂದು ರೀತಿ ನೋವು ತಂದಿದೆ. ಆದರೂ ಮಗಳು ತವರು ಮನೆ ಬಿಟ್ಟು ಹೋಗುವಂತೆ ಹೋಗ್ತಿದ್ದೇನೆ ಎಂದು ರೋಹಿಣಿ ಭಾವುಕರಾದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು