NEWSಸಿನಿಪಥ

ಪತ್ರಕರ್ತ, ಹಿರಿಯ ನಟ ಸುರೇಶ್​ ಚಂದ್ರ ಕೊರೊನಾಗೆ ಬಲಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಚಿತ್ರರಂಗದಲ್ಲಿ ಈಗಾಗಲೇ ಸಾಕಷ್ಟು ಜನರನ್ನು ಕೊರೊನಾ ವೈರಸ್​ ಬಲಿ ಪಡೆದುಕೊಂಡಿದೆ. ಇದರ ಅಟ್ಟಹಾಸ ಸದ್ಯಕ್ಕೆ ಮುಗಿಯುವ ರೀತಿಯಲ್ಲಿ ಕಾಣುತ್ತಿಲ್ಲ. ಇಂದು ಕೊರೊನಾ ಸೋಂಕಿಗೆ ಪತ್ರಕರ್ತ, ಹಿರಿಯ ನಟ ಸುರೇಶ್​ ಚಂದ್ರ (69) ನಿಧನರಾಗಿದ್ದಾರೆ.

ಸುರೇಶ್​ ಚಂದ್ರ ಅವರಿಗೆ ಕೋವಿಡ್​ ಕಾಣಿಸಿಕೊಂಡಿತ್ತು. ಹೀಗಾಗಿ, ಕೆಲವು ದಿನಗಳ ಹಿಂದೆ ಅವರನ್ನು ಬೆಂಗಳೂರಿನ ಜಯನಗರದಲ್ಲಿರುವ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸುರೇಶ್​ ಚಂದ್ರ ಅವರು ಸಿನಿಮಾ ಪತ್ರಿಕೋದ್ಯಮದಲ್ಲಿದ್ದರು. ಹೀಗಾಗಿ, ಅವರಿಗೆ ಸ್ಟಾರ್​ ನಟರ ಜತೆ ಒಡನಾಟ ಉತ್ತಮವಾಗಿತ್ತು. ‘ಚೆಲುವಿನ ಚಿತ್ತಾರ’ ಸಿನಿಮಾದಲ್ಲಿ ನಟಿಸುವಂತೆ ನಿರ್ದೇಶಕ ಎಸ್​. ನಾರಾಯಣ್​ ಕೋರಿದ್ದರು. ಈ ಚಿತ್ರದ ಮೂಲಕ ಅವರು ಸಿನಿಮಾ ರಂಗಕ್ಕೆ ಕಾಲಿಟ್ಟರು. ಅಲ್ಲಿಂದ ಇಲ್ಲಿವರೆಗೆ 50ಕ್ಕೂ ಅಧಿಕ ಚಿತ್ರಗಳಲ್ಲಿ ಸುರೇಶ್​ ಚಂದ್ರ ನಟಿಸಿದ್ದಾರೆ.

ಸೆಲೆಬ್ರಿಟಿಗಳ ವಲಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿದೆ. ಪ್ರತಿದಿನ ಒಬ್ಬರಲ್ಲ ಒಬ್ಬರು ಕೊರೊನಾ​ಗೆ ಬಲಿಯಾಗುತ್ತಲೇ ಇದ್ದಾರೆ. ಕನ್ನಡದ ಖ್ಯಾತ ನಿರ್ಮಾಪಕ ಕೋಟಿ ರಾಮು, ಯುವ ನಟ- ನಿರ್ಮಾಪಕ ಡಿ.ಎಸ್. ಮಂಜುನಾಥ್, ಕಾರ್ಯಕಾರಿ ನಿರ್ಮಾಪಕ ರಾಜಶೇಖರ್, ಪೋಸ್ಟರ್ ಡಿಸೈನರ್ ಮಸ್ತಾನ್, ಪುಟ್ಟಣ್ಣ ಕಣಗಾಲ್ ಪುತ್ರ ರಾಮು, ಕವಿರತ್ನ ಕಾಳಿದಾಸ ಸಿನಿಮಾ ನಿರ್ದೇಶಕ ರೇಣುಕಾ ಶರ್ಮಾ, ಬಾಲಿವುಡ್ ನಟ ರಾಹುಲ್ ವೋಹ್ರಾ, ತೆಲುಗು ನಟ ಟಿಎನ್ಆರ್, ತಮಿಳು ನಟ ಪಾಂಡು, ಕಾಲಿವುಡ್ ನಿರ್ದೇಶಕ ಕೆ.ವಿ. ಆನಂದ್ ಹೀಗೆ ಚಿತ್ರರಂಗದ ಹಲವರನ್ನು ಈ ಮಹಾಮಾರಿ ಬಲಿ ಪಡೆದಿದೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...