NEWSದೇಶ-ವಿದೇಶ

ತಿಂಗಳಾಂತ್ಯಕ್ಕೆ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ಮುಂಗಾರು ಅಧಿವೇಶನಕ್ಕೂ ಮೊದಲು, ಅಂದರೆ ಈ ತಿಂಗಳ ಕೊನೆ ಅಥವಾ ಜುಲೈ ಮೊದಲ ವಾರದಲ್ಲಿ ಕೇಂದ್ರ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಹಿಂದೂಸ್ತಾನ್​ ಟೈಮ್ಸ್​ ವರದಿ ಮಾಡಿದೆ.

ಈ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಶೀಘ್ರದಲ್ಲಿ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಪ್ರಧಾನಿ ಮೋದಿ ಸಂಪುಟದಲ್ಲಿ ಒಟ್ಟು 60 ಸಚಿವರಿದ್ದಾರೆ. ಒಟ್ಟು 79 ಸಚಿವರ ಅಗತ್ಯವಿದ್ದು, ಸದ್ಯದಲ್ಲೇ ವಿಸ್ತರಣೆಯಾಗಲಿದೆ ಎನ್ನಲಾಗಿದೆ.

ಕಳೆದ ಕೆಲವು ದಿನಗಳಿಂದಲೂ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿ ವಿವಿಧ ಸಚಿವರ ಕಾರ್ಯವೈಖರಿಯ ಪರಿಶೀಲನೆ ನಡೆಸುತ್ತಿದ್ದಾರೆ. ಸಾಮಾನ್ಯವಾಗಿ ಸಚಿವ ಸಂಪುಟ ವಿಸ್ತರಣೆ, ಪುನಃರಚನೆ ವೇಳೆ ಮಾತ್ರ ಇಂಥ ಪರಿಶೀಲನೆ ಕೆಲಸ ನಡೆಯುತ್ತದೆ ಎನ್ನಲಾಗಿದೆ.

ಇನ್ನು ಈ ಬಾರಿ ಸಚಿವ ಸಂಪುಟ ವಿಸ್ತರಣೆ ವೇಳೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ಸರ್ಬಾನಂದ್​ ಸೋನೋವಾಲ್​, ಬಿಹಾರ ಮಾಜಿ ಉಪಮುಖ್ಯಮಂತ್ರಿ ಸುಶೀಲ್​ ಮೋದಿ, ಸಂಸದ ಜ್ಯೋತಿರಾದಿತ್ಯ ಸಿಂಧಿಯಾ, ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬೈಜಯಂತ್​ ಪಾಂಡಾ ಅವರು ಸೇರ್ಪಡೆಯಾಗಲಿದ್ದಾರೆ ಎಂದು ಲೈವ್​ ಹಿಂದೂಸ್ತಾನ್​ ವರದಿ ಮಾಡಿದೆ.

ಪ್ರಸ್ತುತ ಹಲವು ಸಚಿವರು ಮೂರ್ನಾಲ್ಕು ಖಾತೆಗಳನ್ನು ನಿರ್ವಹಣೆ ಮಾಡುತ್ತಿದ್ದಾರೆ. ಸಂಪುಟ ವಿಸ್ತರಣೆಯ ಬಳಿಕ, ಯಾರಿಗೆ ಯಾವ ಇಲಾಖೆ ಸಿಗಲಿದೆ ಎಂಬ ಬಗ್ಗೆ ಕುತೂಹಲವಂತೂ ಇದ್ದರೆ, ಇನ್ನು ಬಿಜೆಪಿ ಮಿತ್ರ ಪಕ್ಷಗಳಲ್ಲಿ ರಿಪಬ್ಲಿಕನ್​ ಪಾರ್ಟಿ ಆಫ್​ ಇಂಡಿಯಾದ ರಾಮದಾಸ್​ ಅಠಾವಳೆಯನ್ನು ಹೊರತುಪಡಿಸಿದರೆ ಇನ್ಯಾರಿಗೂ ಪಿಎಂ ಮೋದಿ ಸಂಪುಟದಲ್ಲಿ ಸ್ಥಾನ ಸಿಕ್ಕಿಲ್ಲ. ಇದೀಗ ಸಂಪುಟ ವಿಸ್ತರಣೆ ವೇಳೆ ಮಿತ್ರ ಪಕ್ಷಗಳಿಗೂ ಮಣೆ ಹಾಕಬಹುದು. ಬಿಹಾರದ ನಿತೀಶ್ ಕುಮಾರ್​ ನೇತೃತ್ವದ ಜೆಡಿ(ಯು)ಸದಸ್ಯರಿಗೂ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಲಾಗಿದೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...