Vijayapatha – ವಿಜಯಪಥ
Saturday, November 2, 2024
NEWSನಮ್ಮರಾಜ್ಯರಾಜಕೀಯ

ಬಿಎಸ್‌ವೈಗೆ ಎದುರಾಗಿದೆ ಮತ್ತೊಂದು ಸಂಕಷ್ಟ: ಇದು ಸಿಎಂ ಕುರ್ಚಿಗೆ ಕಂಟಕ ತರುತ್ತಾ?

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ಕರ್ನಾಟಕದಲ್ಲಿ ಎದ್ದಿರುವ ನಾಯಕತ್ವ ಬದಲಾವಣೆ ಗದ್ದಲದಿಂದ ಅಧಿಕಾರ ಕಳೆದುಕೊಳ್ಳುವ ಆತಂಕದಲ್ಲಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸಿಎಂ ಕುಟುಂಬದ ವಿರುದ್ಧ ಅಕ್ರಮ‌ ಹಣ ವರ್ಗಾವಣೆ ಮಾಡಿದ ಆರೋಪ ಕೇಳಿಬಂದ ಈ ಹಳೇ ಕೇಸ್‌ನಿಂದ ಹೊಸ ಸಮಸ್ಯೆ ಶುರುವಾಗಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ಮೂಲಕ ಯಡಿಯೂರಪ್ಪನವರಿಗೆ ಮತ್ತೊಂದು ಸಂಕಟ ಶುರುವಾಗಿದ್ದು, ಇದೇ ಸಮಸ್ಯೆ ಸಿಎಂ ಕುರ್ಚಿಗೆ ಕಂಟಕ ತರುತ್ತಾ? ಎಂಬ ಅನುಮಾನವೂ ಹೆಚ್ಚಾಗಿದೆ. ಅಧಿಕಾರ ದುರುಪಯೋಗ ಮಾಡಿಕೊಂಡ‌ ಗುರುತರ ಆರೋಪ ಎದುರಿಸುತ್ತಿರುವ ಯಡಿಯೂರಪ್ಪನವರಿಗೆ ಆ ಹಳೇ ಕೇಸ್​ ಸಂಕಷ್ಟ ತಂದಿರುವ ಸಾಧ್ಯತೆ ದಟ್ಟವಾಗಿದೆ.

ಅದೆ ಸಿಎಂ ಕುಟುಂಬದ ವಿರುದ್ಧ ಅಕ್ರಮ‌ ಹಣ ವರ್ಗಾವಣೆ ಮಾಡಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಯಡಿಯೂರಪ್ಪ ಮತ್ತವರ ಕುಟುಂಬದವರ ವಿರುದ್ಧ ಸಾಮಾಜಿಕ ಹೋರಾಟಗಾರ ಟಿ.ಜೆ. ಅಬ್ರಹಾಂ ಜಾರಿ ನಿರ್ದೇಶನಾಲಯ (ಇಡಿ)ಕ್ಕೆ ದೂರು ನೀಡಿದ್ದಾರೆ. ಮಂಗಳವಾರ ದೆಹಲಿಯ ಇಡಿ ಕಚೇರಿಗೆ ತೆರಳಿರುವ ಟಿ.ಜೆ. ಅಬ್ರಹಾಂ, PMLA (ಪ್ರಿವೆನ್ಷನ್ ಆಫ್ ಮನಿ ಲಾಂಡರಿಂಗ್ ಆ್ಯಕ್ಟ್) ಅಡಿ ಪ್ರಕರಣ ದಾಖಲಿಸಿಕೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.

ಸದ್ಯ ಯಡಿಯೂರಪ್ಪ ಮತ್ತವರ ಕುಟುಂಬದವರ ವಿರುದ್ದ ದೂರು ನೀಡಿರುವ ಅಬ್ರಹಾಂ ಅವರ ಆರೋಪದ ಪ್ರಕಾರ, ಸಿಎಂ ಯಡಿಯೂರಪ್ಪ ಅವರೇ ಆರೋಪಿ ನಂಬರ್ 1. ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಆರೋಪಿ ನಂಬರ್ 2. ಯಡಿಯೂರಪ್ಪನವರ ಮೊಮ್ಮಗ ಶಶಿಧರ ಮರಡಿ ಆರೋಪಿ ನಂಬರ್ 3. ಯಡಿಯೂರಪ್ಪನವರ ಮಗಳು ಪದ್ಮಾವತಿಯವರ ಅಳಿಯ ಸಂಜಯ್ ಆರೋಪಿ ನಂಬರ್ 4. ಡೆವೆಲಪರ್ ಚಂದ್ರಕಾಂತ್ ರಾಮಲಿಂಗಂ ಆರೋಪಿ ನಂಬರ್ 5. ಯಡಿಯೂರಪ್ಪನವರ ಅಳಿಯ ವಿರೂಪಾಕ್ಷಪ್ಪ ಯಮಕನಮರಡಿ ಆರೋಪಿ ನಂಬರ್ 6. ಒಟ್ಟು 6 ಜನರ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ಅಬ್ರಹಾಂ ದೂರು ನೀಡಿದ್ದಾರೆ.

ದೂರು ರಿಜಿಸ್ಟರ್ ಆದರೆ ಸಂಕಟಗಳ ಸರಮಾಲೆ ಶುರುವಾಗುವ ಸಾಧ್ಯತೆಯಿದೆ. ಯಡಿಯೂರಪ್ಪ ಅವರೇ A-1 ಆರೋಪಿ ಆಗಿರುವುದರಿಂದ ಅವರ ಸಿಎಂ ಕುರ್ಚಿಗೂ ಕಂಟಕವಾಗಬಹುದು. ಯಡಿಯೂರಪ್ಪ ಮತ್ತು ಇತರ ಆರೋಪಿಗಳನ್ನು ವಿಚಾರಣೆಗೆ ಕರೆಯಬಹುದು. ಸಮನ್ಸ್ ನೀಡಿದರೆ ಯಡಿಯೂರಪ್ಪ ಸಿಎಂ ಸ್ಥಾನದಲ್ಲಿ ಮುಂದುವರಿಯುವುದು ಕಷ್ಟ ಎನ್ನಲಾಗುತ್ತಿದೆ.

ಇನ್ನು, ನಾಯಕತ್ವ ಬದಲಾವಣೆ ಸಂಬಂಧ ಯಡಿಯೂರಪ್ಪನವರ ಪರ-ವಿರೋಧಿ ಬಣದ ನಡುವಿನ ಗಲಾಟೆ ಬಗೆಹರಿಯದಿರುವ ಕಾರಣ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕಕ್ಕೆ ಆಗಮಿಸಲಿದ್ದಾರೆ.

ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟಿನ ಬಗ್ಗೆ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಅರುಣ್ ಸಿಂಗ್ ಅವರಿಗೆ ಒತ್ತಡ ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ರಾಜ್ಯಕ್ಕೆ ಆಗಮಿಸಲಿರುವ ಅರುಣ್ ಸಿಂಗ್ ಅವರನ್ನು ಭೇಟಿಯಾಗಲು ಯಡಿಯೂರಪ್ಪ ಪರ ಬಣದವರು ಸಿದ್ಧತೆ ಮಾಡಿಕೊಂಡಿದ್ದಾರೆ.

ಅತ್ತ ಅರವಿಂದ್ ಬೆಲ್ಲದ್ ಕೂಡ ದೆಹಲಿಯಲ್ಲಿ ಬೀಡುಬಿಟ್ಟು ಹೈಕಮಾಂಡ್ ಭೇಟಿಯಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅರವಿಂದ್ ಬೆಲ್ಲದ್ ಅವರೇ ಕರ್ನಾಟಕದ ಮುಂದಿನ ಸಿಎಂ ಎಂಬ ಚರ್ಚೆಗಳು ನಡೆಯುತ್ತಿವೆ.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ