NEWSನಮ್ಮರಾಜ್ಯ

ಜೂನ್ 21 ರಿಂದ ಅನ್​ಲಾಕ್ 2.O ಜಾರಿ: ಯೋಚಿಸಿ ನಿರ್ಧಾರ ಎಂದ ಸಿಎಂ ಬಿಎಸ್‌ವೈ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ಮೊದಲ ಹಂತದ ಅನ್​ಲಾಕ್​ ಘೋಷಣೆಯಾಗಿದೆ. ಎರಡನೇ ಹಂತದಲ್ಲಿ ಅನ್ ಲಾಕ್ ಮಾಡುವ ವಿಚಾರವಾಗಿ ಮಾತನಾಡಿರುವ ಸಿಎಂ ಯಡಿಯೂರಪ್ಪ, ಇವತ್ತು, ನಾಳೆ ಪರಿಸ್ಥಿತಿಯನ್ನು ನೋಡಿಕೊಂಡು ತೀರ್ಮಾನ ತೆಗೆದುಕೊಳ್ಳುತ್ತೇವೆ. ಕೊರೊನಾ ಕೇಸುಗಳು ಕಡಿಮೆಯಾಗುತ್ತಿರುವುದರಿಂದ ಯೋಚನೆ ಮಾಡಿ, ಎರಡನೇ ಹಂತದ ಅನ್ ಲಾಕ್ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಕೊರೊನಾ ಸೋಂಕನ್ನು ನಿಯಂತ್ರಿಸಲು ತಾಂತ್ರಿಕ ಸಲಹಾ ಸಮಿತಿ ನೀಡಿದ್ದ ಸಲಹೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಎರಡನೆಯ ಅಲೆಯ ವೇಳೆ ಇಡೀ ರಾಜ್ಯದಲ್ಲಿ ಲಾಕ್​ಡೌನ್​ ಘೋಷಿಸಿತ್ತು. ಅದೀಗ ಹಂತಹಂತವಾಗಿ ಅನ್​ಲಾಕ್​ ಆಗುತ್ತಿದೆ. ಜೂನ್ 21 ರಿಂದ ಅನ್​ಲಾಕ್ 2.O ಜಾರಿಗೆ ತಾಂತ್ರಿಕ ಸಲಹಾ ಸಮಿತಿ ಇದೀಗ ಗ್ರಿನ್ ಸಿಗ್ನಲ್ ನೀಡಿದೆ. ಹಾಗಾಗಿ ರಾಜ್ಯದಲ್ಲಿ ಜೂನ್ 21 ರಿಂದ ಏನೆಲ್ಲಾ ಮುಕ್ತವಾಗಿ ಇರುತ್ತೆ, ಯಾವುದಕ್ಕೆಲ್ಲ ನಿರ್ಬಂಧವಿರುತ್ತದೆ ಎಂಬುದರ ವಿವರ ಇಲ್ಲಿದೆ.

ಕರ್ನಾಟಕದಲ್ಲಿ ಎರಡನೇ ಹಂತದ ಅನ್​ಲಾಕ್​ಗೆ ಇದೀಗ ದಿನಾಂಕ ನಿಗದಿಯಾಗಿದ್ದು, ಜೂನ್ 21 ರಿಂದ ಅನ್​ಲಾಕ್ 2.O ಜಾರಿಗೆ ಬರುತ್ತದೆ. ಜೂನ್ 21 ರಿಂದ ಮಾಲ್, ಹೋಟೆಲ್, ಚಿಕ್ಕ‌ಚಿಕ್ಕ ಮಾರುಕಟ್ಟೆ, ಹೇರ್​ ಕಟ್​ ಶಾಪ್, ಮದುವೆ ಸಮಾರಂಭಕ್ಕೆ 50 ಜನರಿಗೆ ಅವಕಾಶ ನೀಡಿ ಮುಕ್ತಗೊಳಿಸಲಾಗುವುದು.

ಬಟ್ಟೆ ಅಂಗಡಿ, ಚಿನ್ನದಂಗಡಿ ಸೇರಿದಂತೆ ಎಲ್ಲಾ ಬಗೆಯ ವಾಣಿಜ್ಯ ಮಳಿಗೆಗಳು ಸಹ ಜೂನ್ 21 ರಿಂದ ಓಪನ್ ಆಗಲಿವೆ. ದಿನಕ್ಕೆ ಎಂಟು ಗಂಟೆಗಳ ಕಾಲ ವ್ಯಾಪಾರ ವಹಿವಾಟು ಮಾಡಲು ಅವಕಾಶ ನೀಡಲಾಗುವುದು. ಹೋಟೆಲ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಶೇ.50 ರಷ್ಟು ಗ್ರಾಹಕರಿಗೆ ಪ್ರವೇಶ ಅವಕಾಶ ನೀಡಲಾಗಿದೆ.

ಬಸ್ ಸಂಚಾರ ಆರಂಭ ಸಾಧ್ಯತೆ
ರಾಜ್ಯದಲ್ಲಿ ಅನ್‌ಲಾಕ್ 2.O ಜಾರಿಯಾಗುವ ಹಿನ್ನೆಲೆಯಲ್ಲಿ ಜೂ.21ರಿಂದ ಕರ್ನಾಟಕದಲ್ಲಿ ಬಸ್ ಸಂಚಾರ ಆರಂಭವಾಗುವ ಸಾಧ್ಯತೆಯಿದೆ. ಶೇ.50ರಷ್ಟು ಪ್ರಯಾಣಿಕರೊಂದಿಗೆ ಬಸ್ ಸಂಚಾರವಾಗುವ ಸಾಧ್ಯತೆ ಇದೆ.

ಈ ನಡುವೆ ಇವುಗಳ ವಹಿವಾಟು ನಡೆಸಲು ಮೂರನೇ ಹಂತದ ಅನ್​ಲಾಕ್ ವರೆಗೂ ಕಾಯಬೇಕು. ಶಾಪಿಂಗ್ ಕಾಂಪ್ಲೆಕ್ಸ್ ಗಳನ್ನು ಸಹ ಓಪನ್ ಮಾಡಲು ತಾಂತ್ರಿಕ ಸಲಹಾ ಸಮಿತಿಯಿಂದ‌ ಗ್ರಿನ್ ಸಿಗ್ನಲ್ ದೊರೆತಿದೆ. ಆದರೆ ಥಿಯೇಟರ್, ಪಬ್, ಬಾರ್, ಜಿಮ್, ಸ್ವಿಮ್ಮಿಂಗ್ ಪೂಲ್, ಕ್ರೀಡಾಂಗಣಗಳು ಯಥಾಸ್ಥಿತಿ ಕ್ಲೋಸ್ ಆಗಿರಲಿವೆ. ಇವುಗಳನ್ನೆಲ್ಲ ಓಪನ್‌ ಮಾಡಲು ಮೂರನೇ ಹಂತದ ಅನ್​ಲಾಕ್ ವರೆಗೂ ಕಾಯಲು ತೀರ್ಮಾನ ಮಾಡಲಾಗಿದೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು