Vijayapatha – ವಿಜಯಪಥ
Saturday, November 2, 2024
NEWSನಮ್ಮಜಿಲ್ಲೆ

ಮೈಸೂರು: ಇಂದಿನಿಂದ 18 ವರ್ಷ ಮೇಲ್ಪಟ್ಟ ಅಂಗವಿಕಲರು, ಬೀದಿ ಬದಿ ವ್ಯಾಪಾರಿಗಳಿಗೆ ಉಚಿತ ಕೊರೊನಾ ಲಸಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ಮಹಾನಗರ ಪಾಲಿಕೆ ವತಿಯಿಂದ ಜೂ.16ರಂದು 18 ವರ್ಷ ಮೇಲ್ಪಟ್ಟ ವಿಶೇಷಚೇತನರಿಗೆ ಕೋವಿಡ್‌-19 ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಬೀದಿ ಬದಿ ವ್ಯಾಪಾರಿಗಳಿಗೆ ಇಂದಿನಿಂದ ಜೂನ್ 20ರ ತನಕ ಬೆಳಗ್ಗೆ 10 ರಿಂದ ಸಂಜೆ 4ರವರೆಗೆ ಪುರಭವನದಲ್ಲಿ ಲಸಿಕೆ ನೀಡಲು ನಿರ್ಧರಿಸಲಾಗಿದ್ದು ನೋಂದಾಯಿತ ಹಾಗೂ ನೋಂದಾಯಿಸಲ್ಪಡದ ಬೀದಿ ಬದಿ ವ್ಯಾಪರಿಗಳಿಗೂ ಲಸಿಕೆ ನೀಡಲಾಗುವುದು ಅರ್ಹರು ಆಧಾರ್ ಕಾರ್ಡ್ ಹಾಗೂ ವ್ಯಾಪಾರದ ಗುರುತಿನ ಚೀಟಿ ತೆಗೆದುಕೊಂಡು ಬರಬೇಕು ಎಂದು ಮಹಾನಗರ ಪಾಲಿಕೆ ತಿಳಿಸಿದೆ.

ವಿಶೇಷ ಚೇತನರಿಗೆ ಜೂನ್​ 17 ರಿಂದ 19 ರವರೆಗೆ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ತಿಲಕನಗರದ ಅಂಧಮಕ್ಕಳ‌ ಪಾಠಶಾಲೆಯಲ್ಲಿ ಲಸಿಕೆ ‌ನೀಡಲು ನಿರ್ಧರಿಸಲಾಗಿದೆ. ವಿಶೇಷ ಚೇತನರು ಆಧಾರ್ ಕಾರ್ಡ್ ಹಾಗೂ ಸರ್ಕಾರದ ಪ್ರಮಾಣಪತ್ರವನ್ನು ಕಡ್ಡಾಯವಾಗಿ ತರಬೇಕಿದ್ದು, ವಾರ್ಡ್​ವಾರು ಉಚಿತ ವಾಹನದ ಸೌಲಭ್ಯ ಸಹಾ ಮಾಡಲಾಗಿದೆ ಎಂದು ಪಾಲಿಕೆ ನೀಡಿದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನಗರ ವ್ಯಾಪ್ತಿಯ ವಿಶೇಷಚೇತನರು ಇಲಾಖೆಯಿಂದ ನೀಡಿರುವ ಗುರುತಿನ ಚೀಟಿ, ಆಧಾರ್‌ ಕಾರ್ಡ್‌ನೊಂದಿಗೆ ನಿಗದಿತ ಸ್ಥಳಕ್ಕೆ ಹಾಜರಾಗಿ ಲಸಿಕೆ ಪಡೆಯುವಂತೆ ಸಲಹೆ ನೀಡಿದೆ. ಈ ಮೂಲಕ ಸ್ವಚ್ಛ ನಗರಿ, ಸಾಂಸ್ಕೃತಿಕ ನಗರಿ ಎಂಬ ಹಿರಿಮೆಗಳಿಗೆ ಪಾತ್ರವಾಗಿರುವ ಮೈಸೂರು ಇದೀಗ ಕೊರೊನಾ ಲಸಿಕೆಯ ವಿಚಾರದಲ್ಲೂ ನಂ.1 ಆಗಿ ಹೊರಹೊಮ್ಮುವ ಮೂಲಕ ಇತರೆ ಜಿಲ್ಲೆಗಳಿಗೆ ಮಾದರಿ ಎನ್ನಿಸಿಕೊಂಡಿದೆ.

ರಾಜ್ಯದಲ್ಲಿ ಇಲ್ಲಿಯ ತನಕ ಅತಿ ಹೆಚ್ಚು ಲಸಿಕೆ ನೀಡಿದ ಜಿಲ್ಲೆ ಎಂಬ ಕೀರ್ತಿ ಮೈಲೂಕಿನಲ್ಲಿ ಅತಿ ವೇಗವಾಗಿ ಲಸಿಕೆ ವಿತರಣೆ ಆಗುತ್ತಿದೆ. ಜಿಲ್ಲೆಯಲ್ಲಿರುವ 24ಲಕ್ಷ ಜನರಿಗೂ ಆದಷ್ಟು ಬೇಗ ಕೊರೊನಾ ಲಸಿಕೆ ತಲುಪಿಸಬೇಕು ಎಂಬ ಯೋಜನೆಯನ್ನು ಜಿಲ್ಲಾಡಳಿತ ರೂಪಿಸಿದ್ದು, ಜನರು ಕೂಡಾ ಅದಕ್ಕೆ ಪೂರಕವಾಗಿ ಸ್ಪಂದಿಸುತ್ತಿರುವುದು ಮತ್ತಷ್ಟು ಬಲ ನೀಡಿದೆ.

ಲಸಿಕೆಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿರುವ ಕಾರಣ ಕೊರೊನಾ ಸೋಂಕಿತರ ಪ್ರಮಾಣವೂ ಕಡಿಮೆಯಾಗಿದ್ದು, ಹೊಸದಾಗಿ ದಾಖಲಾಗುವ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. ಇದೀಗ ಬೀದಿಬದಿ ವ್ಯಾಪಾರಿಗಳು ಮತ್ತು ವಿಶೇಷ ಚೇತನರಿಗೆ ಕೊರೊನಾ ಲಸಿಕೆ ತಲುಪಿಸಲು ಇಂದಿನಿಂದ ಮೈಸೂರಿನಲ್ಲಿ ಲಸಿಕಾ ಅಭಿಯಾನ ಆರಂಭವಾಗುತ್ತಿದ್ದು, ಮೈಸೂರು ಮಹಾನಗರ ಪಾಲಿಕೆ ಅಭಿಯಾನ ಸರಾಗವಾಗಿ ಸಾಗಲು ಸಕಲ ಸಿದ್ಧತೆಗಳನ್ನೂ ಮಾಡಿಕೊಂಡಿದೆ.

 

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ