NEWSನಮ್ಮಜಿಲ್ಲೆ

ಪಿರಿಯಾಪಟ್ಟಣ: ಧಾರ್ಮಿಕ ದತ್ತಿ ಇಲಾಖೆಯಿಂದ ಆರ್ಚಕರಿಗೆ ಆಹಾರ ಕಿಟ್‍ ವಿತರಣೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಪಿರಿಯಾಪಟ್ಟಣ: ಸರ್ಕಾರದ ಆದೇಶದಂತೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ತಾಲೂಕಿನ ಅರ್ಚಕರಿಗೆ ಆಹಾರದ ಕಿಟ್ ನೀಡಲಾಗುತ್ತಿದೆ ಎಂದು ಶಾಸಕ ಕೆ.ಮಹದೇವ್ ತಿಳಿಸಿದರು.

ಪಟ್ಟಣದ ತಾಲೂಕು ಆಡಳಿತ ಭವನದ ಆವರಣದಲ್ಲಿ ಮಂಗಳವಾರ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವತಿಯಿಂದ ತಾಲೂಕಿನ 133 ದೇವಸ್ಥಾನಗಳ ಆರ್ಚಕರಿಗೆ ಆಹಾರ ಕಿಟ್‍ಗಳನ್ನು ವಿತರಿಸಿ ಮಾತನಾಡಿದರು.

ಕೋವಿಡ್-19ನ ಕರೋನಾ ನಿಯಂತ್ರಣಕ್ಕಾಗಿ ಕೇಂದ್ರ ಮತ್ತು ರಾಜ್ಯಸರ್ಕಾರವು ಕಠಿಣ ಲಾಕ್‍ಡೌನ್ ವಿಧಿಸಿದ್ದರಿಂದ ಎಲ್ಲಾ ದೇವಸ್ಥಾನಗಳನ್ನು ಮುಚ್ಚಲಾಗಿದೆ ಆದ್ದರಿಂದ ದೇವಸ್ಥಾನಗಳನ್ನೇ ನಂಬಿ ಜೀವನ ಸಾಗಿಸುತ್ತಿರುವ ಆರ್ಚಕ ಕುಟುಂಬಗಳಿಗೆ ಜೀವನ ಸಾಗಿಸುವುದು ಕಷ್ಟಕರವಾಗಿರುವುದನ್ನು ಮನಗಂಡು ತಾಲೂಕಿನಲ್ಲಿ ಆರ್ಚಕ ಕುಟುಂಬಗಳಿಗೆ ಕಿಟ್‍ಗಳನ್ನು ವಿತರಿಸಲಾಗುತ್ತಿದೆ ಎಂದರು.

ತಹಸೀಲ್ದಾರ್ ಕೆ.ಚಂದ್ರಮೌಳಿ ಮಾತನಾಡಿ, ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯದಲ್ಲಿ ಲಾಕ್ಡೌನ್ ಜಾರಿ ಮಾಡಲಾಗಿದ್ದು, ಧಾರ್ಮಿಕ ದತ್ತಿ ಇಲಾಖೆ ಅಡಿ ಬರುವ ದೇವಸ್ಥಾನಗಳನ್ನು ಕೂಡ ಬಂದ್ ಮಾಡಲಾಗಿದೆ. ಅಲ್ಲಿ ಕೆಲಸ ಮಾಡುವ ಅರ್ಚಕರು ಸಂಕಷ್ಟ ಎದುರಿಸುತ್ತಿರುವುದರಿಂದ ಅರ್ಚಕರಿಗೆ ನೆರವು ನೀಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ತಾಲೂಕಿನ ವಿವಿಧ ದೇವಸ್ಥಾನಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರಿಗೆ ಆಹಾರ ಧಾನ್ಯದ ಕಿಟ್ಗಳನ್ನು ವಿತರಣೆ ಮಾಡಲಾಗಿದೆ ಎಂದರು.

ಉಪ ತಹಸೀಲ್ದಾರ್ ಟ್ರೀಜಾ, ಕಂದಾಯಾಧಿಕಾರಿ ಪ್ರದೀಪ್, ಚುನಾವಣಾ ಶಾಖೆಯ ಮೇಲ್ವಿಚಾರಕ ನವೀನ್ ಕುಮಾರ್, ಸಿಬ್ಬಂದಿಗಳಾದ ರಾಕೇಶ್, ಶೇಖರ್, ಕಂದಾಯ ಇಲಾಖೆ ಅಧಿಕಾರಿಗಳು ತಾಲೂಕು ಪಂಚಾಯಿತಿ ಅಧಿಕಾರಿ ವರ್ಗ ಇದ್ದರು.

Leave a Reply

error: Content is protected !!
LATEST
KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ